ಐಪಿಎಲ್‌ಗೆ ಬಂದೋಬಸ್ತ್
Team Udayavani, Apr 8, 2017, 12:18 PM IST
ಬೆಂಗಳೂರು: ಇಂಡಿಯಲ್ ಪ್ರೀಮಿಯರ್ ಲೀಗ್(ಐಪಿಎಲ್) ಕ್ರಿಕೆಟ್ ಪಂದ್ಯಾವಳಿಗಳು ಏ.8 ರಿಂದ ಮೇ 19ರವರೆಗೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ-ಮುತ್ತ ಭಾರೀ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತರು, ಇಬ್ಬರು ಡಿಸಿಪಿಗಳ ನೇತೃತ್ವದಲ್ಲಿ 11 ಎಸಿಪಿ, 30 ಇನ್‌ಸ್ಪೆಕ್ಟರ್, 86 ಸಬ್ ಇನ್‌ಸ್ಪೆಕ್ಟರ್ ಒಳಗೊಂಡಂತೆ 1,100 ಪೊಲೀಸ್ ಸಿಬ್ಬಂದಿ ಭದ್ರತೆಗಾಗಿ ನಿಯೋಜಿಸಲಾಗಿದೆ.
ಒಂದು ಗರುಡ ಪಡೆ, 4 ಕೆಎಸ್‌ಆರ್‌ಪಿ ತುಕಡಿ, ಸಿಎಆರ್, ಬಾಂಬ್ ನಿಷ್ಕ್ರಿàಯ ದಳ, ಶ್ವಾನ ದಳ ಭದ್ರತೆ ಉಸ್ತುವಾರಿಗಾಗಿ ನಿಯೋಜಿಸಲಾಗಿದ್ದು, ಪಂದ್ಯ ವೀಕ್ಷಿಸಲು ಬರುವ ಕ್ರೀಡಾಭಿಮಾನಿಗಳ ಚಲನಧಿವಲನಗಳ ಮೇಲೆ ನಿಗಾವಹಿಸಲು ಕಮಾಂಡೋ, ವಜ್ರ ವಾಹನಗಳು ಹಾಗೂ ಕ್ರೀಡಾಂಗಣದ ಒಳ ಹಾಗೂ ಹೊರಭಾಗಗಳಲ್ಲಿ ಸುಮಾರು 130ಕ್ಕೂ ಅಧಿಕ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತೆ ಮಾಲಿನಿ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಪಂದ್ಯ ವೀಕ್ಷಣೆಗೆ ಬರುವವರು ಕ್ರೀಡಾಂಗಧಿಣದೊಳಗೆ ಸಿಗರೇಟ್, ಬೆಂಕಿಪೊಟ್ಟಣ, ಪಟಾಕಿ, ಸ್ಫೋಟಕ ವಸ್ತುಗಳು, ಸಶಸ್ತ್ರಗಳು, ಆಯುಧಗಳು, ಚಾಕು, ಚೂರಿ ರೇಜರ್, ಹರಿತವಾದ ವಸ್ತುಗಳು, ಲ್ಯಾಪ್‌ಟಾಪ್, ವಿಡಿಯೋ ಹಾಗೂ ಸ್ಟಿಲ್ ಕ್ಯಾಮೆರಾ, ಕರಪತ್ರಗಳು, ಕಪ್ಪು ಬಾವುಟಗಳು, ತಿಂಡಿ ತಿನಿಸು, ನೀರಿನ ಬಾಟಲ್, ಕ್ಯಾನ್‌ಗಳು, ಪೇಯಿಂಟ್, ಮದ್ಯಪಾನ, ಬ್ಯಾಗ್‌ಗಳು, ಬ್ಯಾಕ್ ಪ್ಯಾಕ್ಸ ಮತ್ತು ಹೆಲ್ಮೆಟ್‌ಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಐಪಿಎಲ್‌ಗೆ “ನಮ್ಮ ಮೆಟ್ರೋ’ ಹೆಚ್ಚುವರಿ ಸೇವೆ
ನಗರದಲ್ಲಿ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿರುವ ದಿನಗಳಂದು ಪ್ರಯಾಣಿಕರ ಅನುಕೂಲಕ್ಕಾಗಿ “ನಮ್ಮ ಮೆಟ್ರೋ’ ಹೆಚ್ಚುವರಿ ಸೇವೆ ಕಲ್ಪಿಸಲಾಗಿದೆ. ಏಪ್ರಿಲ್ 8, 16, 25, 27 ಹಾಗೂ ಮೇ 5, 7, 17 ಮತ್ತು 19ರಂದು ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದವರೆಗೆ ರಾತ್ರಿ 10 ರಿಂದ ಮಧ್ಯರಾತ್ರಿ 12.30 ರವರೆಗೆ ಪ್ರತಿ 20 ನಿಮಿಷಗಳಿಗೊಂದು ಮೆಟ್ರೋ ರೈಲು ಸೇವೆ ಕಲ್ಪಿಸಲಾಗಿದೆ. ಸಾಮಾನ್ಯವಾಗಿ ಮೆಟ್ರೋ ಸಂಚಾರ ಸೇವೆ ರಾತ್ರಿ 10 ಗಂಟೆಗೆ ಮುಕ್ತಾಯಗೊಳ್ಳುತ್ತದೆ. ಕ್ರಿಕೆಟ್ ವೀಕ್ಷಣೆಗೆ ಆಗಮಿಸುವವರಿಗಾಗಿ ಹೆಚ್ಚುವರಿ ಸೇವೆ ಒದಗಿಸಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿ) ಪ್ರಕಟಣೆ ತಿಳಿಸಿದೆ.
ಸೆಂಟ್ ಜೋಸೆಫ್ ಬಳಿ ವಾಹನ ನಿಲುಗಡೆಗೆ ಸ್ಥಳ ನಿಗದಿ
ಕ್ರಿಕೆಟ್ ವೀಕ್ಷಣೆಗೆ ಬರುವವರ ವಾಹನಗಳ ನಿಲುಗಡೆಗೆ ಸೆಂಟ್ ಮಾರ್ಕ್ಸ್ ಕೆಥೋಡ್ರೆಲ್ ಚರ್ಚ್ ಹಾಗೂ ಸೆಂಟ್ ಜೋಸೆಫ್ ಹೈಸ್ಕೂಲ್‌ನಲ್ಲಿ ಸ್ಥಳ ನಿಗದಿ ಮಾಡಲಾಗಿದೆ. ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿದರೆ ದಂಡ ಕಟ್ಟಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಪಂದ್ಯಾವಳಿ ವೀಕ್ಷಣೆಗೆ ಬರುವವರು ಸ್ವಂತ ವಾಹನಗಳ ಬದಲು ಬಿಎಂಟಿಸಿ ಬಸ್, ಮೆಟ್ರೋದಲ್ಲಿ ಸಂಚಾರ ಮಾಡುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.