ಬಜೆಟ್‌ನಲ್ಲಿ ಪಿಡಿಓಗಳಿಗೆ ಹುದ್ದೆ ಮೇಲ್ದರ್ಜೆ ಭಾಗ್ಯ?

Team Udayavani, Jan 25, 2018, 6:00 AM IST

PDO.jpg

ಬೆಂಗಳೂರು: “ಗ್ರಾಮೀಣ ಆಡಳಿತದ ಸೂತ್ರಧಾರ’ರಂತೆ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಓ) ಮುಂದಿನ ಬಜೆಟ್‌ನಲ್ಲಿ ಸಿಹಿ ಸುದ್ದಿ ಸಿಗಲಿದ್ದು, ಅವರಿಗೆ “ಹುದ್ದೆ ಮೇಲ್ದರ್ಜೆ ಭಾಗ್ಯ’ ಲಭಿಸುವ ಸಾಧ್ಯತೆಗಳಿವೆ.

ಪಿಡಿಓ ಹುದ್ದೆಗಳನ್ನು ಈಗಿರುವ ಸಿ ದರ್ಜೆಯಿಂದ ಬಿ ದರ್ಜೆಗೆ ಏರಿಸುವ ಪ್ರಸ್ತಾವನೆ ಸದ್ಯ 6ನೇ ವೇತನ ಆಯೋಗದ ಮುಂದಿದ್ದು, ಈ ತಿಂಗಳ ಕೊನೆಗೆ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ.ಅದರಲ್ಲಿ ಪಿಡಿಓಗಳ ಹುದ್ದೆ ಮೇಲ್ದರ್ಜೆ ಪ್ರಸ್ತಾವನೆಗೆ ಹಸಿರು ನಿಶಾನೆ ಸಿಗಲಿದ್ದು, ಫೆಬ್ರವರಿ ತಿಂಗಳಲ್ಲಿ ಮುಖ್ಯಮಂತ್ರಿಯವರು ಮಂಡಿಸಲಿರುವ 2018-19ನೇ ಸಾಲಿನ ಬಜೆಟ್‌ನಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ.

ಎಲ್ಲವೂ ಅಂದುಕೊಂಡಂತೆ ನಡೆದರೆ ರಾಜ್ಯದ 6,022 ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 4 ಸಾವಿರಕ್ಕೂ ಹೆಚ್ಚು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆ ಸಿ ದರ್ಜೆಯಿಂದ ಬಿ ದರ್ಜೆಗೆ ಏರಲಿದೆ. ಹಾಗೆ ಆದರೆ, ಈಗ ಆಗುತ್ತಿರುವ ಆಡಳಿತಾತ್ಮಕ ಅಡಚಣೆಗಳು ದೂರ ಆಗುವುದರ ಜೊತೆಗೆ ಪಿಡಿಓಗಳ ವೇತನ ಸಹ ಹೆಚ್ಚಳವಾಗಲಿದೆ. ಸದ್ಯ 20 ರಿಂದ 36 ಸಾವಿರ ರೂ. ಇರುವ ವೇತನ 22ರಿಂದ 43 ಸಾವಿರ ರೂ. ಗೆ ಏರಿಕೆಯಾಗಲಿದೆ.

ಹುದ್ದೆಗಳನ್ನು ಮೇಲ್ದರ್ಜೆಗೇರಿಸಬೇಕು ಎನ್ನುವುದು ಪಿಡಿಓಗಳ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ಪೂರಕವಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಕ್ರಮ ಕೈಗೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ಸಿ ದರ್ಜೆಯಿಂದ ಬಿ ದರ್ಜೆಗೆ ಉನ್ನತೀಕರಿಸಲು ಪ್ರಸ್ತಾವನೆ ಸಿದ್ದಪಡಿಸಿತ್ತು. ಇದರ ಸಮ್ಮತಿಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹಾಗೂ ಆರ್ಥಿಕ ಇಲಾಖೆಗೆ ಕಡತವನ್ನು ಕಳಿಸಲಾಗಿತ್ತು. ಆದರೆ, ಈ ಪ್ರಸ್ತಾವನೆಯನ್ನು ವೇತನ ಆಯೋಗದ ಪರಿಶೀಲನೆಗೆ ಸಲ್ಲಿಸುವಂತೆ ಆರ್ಥಿಕ ಇಲಾಖೆ ಸಲಹೆ ನೀಡಿತ್ತು. ಅದರಂತೆ ಪ್ರಸ್ತಾವನೆಯನ್ನು 6ನೇ ವೇತನ ಆಯೋಗದ ಮುಂದೆ ಮಂಡಿಸಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆ, ಹುದ್ದೆಗಳನ್ನು ಮೇಲ್ದರ್ಜೆಗೇರಿಸುವ ಅವಶ್ಯಕತೆಯನ್ನು ಮನವರಿಕೆ ಮಾಡಿಕೊಟ್ಟಿತ್ತು.

ಪಿಡಿಓ ಹುದ್ದೆಗಳನ್ನು ಉನ್ನತೀಕರಿಸುವ ಪ್ರಸ್ತಾವನೆ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಬಂದಿದೆ. ಅದನ್ನು ಆಯೋಗ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದು, ಅಂತಿಮ ವರದಿಲ್ಲಿ ಅಧಿಕೃತ ನಿಲುವು ದಾಖಲಿಸಲಾಗುವುದು ಎಂದು 6ನೇ ವೇತನ ಆಯೋಗದ ಹಿರಿಯ ಅಧಿಕಾರಿಗಳು “ಉದಯವಾಣಿ’ ತಿಳಿಸಿದ್ದಾರೆ. ಅದೇ ರೀತಿ ವೇತನ ಆಯೋಗ ನಮ್ಮ ಬೇಡಿಕೆ ಒಪ್ಪಿಕೊಳ್ಳಲಿದ್ದು, ಪಿಡಿಓ ಹುದ್ದೆಗಳನ್ನು ಮೇಲ್ದರ್ಜೆಗೇರಿಸುವುದರ ಬಗ್ಗೆ ಮುಂದಿನ ಬಜೆಟ್‌ನಲ್ಲಿ ಅಧಿಕೃತವಾಗಿ ಘೋಷಣೆಯಾಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಧಿಕಾರ ವಿಕೇಂದ್ರೀಕರಣ ಮತ್ತು ಗ್ರಾಮೀಣ ಆಡಳಿತವನ್ನು ಬಲಪಡಿಸುವ ಉದ್ದೇಶದಿಂದ “ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ಅಧಿನಿಯಮ ಜಾರಿಗೊಳಿಸಲಾಗಿದೆ. ಅದರಂತೆ ಗ್ರಾಮ ಪಂಚಾಯಿತಿಗಳು ಸ್ವಯಂ ಆಡಳಿತ ಸ್ಥಳೀಯ ಸರ್ಕಾರಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯಿತಿಗಳು ಸಕ್ರೀಯವಾಗಿ, ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಆಡಳಿತ ವ್ಯವಸ್ಥೆಯನ್ನು ಪುನರ್‌ರಚಿಸಬೇಕಾಗಿರುತ್ತದೆ.

ಸರ್ಕಾರದ ಸುಮಾರು 29 ಇಲಾಖೆಗಳ ಯೋಜನೆ ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಜವಾಬ್ದಾರಿಯ ಜೊತೆಗೆ ಆಡಳಿತ ನಿರ್ವಹಣೆ ಮಾಡಬೇಕಾಗುತ್ತದೆ. ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಯೋಜನೆ ಮತ್ತು ಕಾರ್ಯಕ್ರಮಗಳನ್ನು ನೋಡಿಕೊಳ್ಳಬೇಕಾಗುತ್ತದೆ. ಇದರಿಂದ ಪಿಡಿಓಗಳ ಮೇಲೆ ಕಾರ್ಯ ಒತ್ತಡದ ಜೊತೆಗೆ ಜವಾಬ್ದಾರಿ ಸಹ ಹೆಚ್ಚಾಗಿದೆ. ಅಲ್ಲದೇ ಪಿಡಿಓಗಳ ಅಧೀನದಲ್ಲಿ ಕೆಲಸ ಮಾಡುವ ಅಧಿಕಾರಿಗಳು ಬಿ ದರ್ಜೆಯವರಾಗಿದ್ದು, ಪಿಡಿಓಗಳು ಸಿ ದರ್ಜೆ ಹೊಂದಿದ್ದಾರೆ. ಇದರಿಂದ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಆಡಳಿತ ನಿರ್ವಹಣೆಯಲ್ಲಿ ಆಡಳಿತಾತ್ಮಕ ಮತ್ತು ತಾಂತ್ರಿಕ ಅಡಚಣೆಗಳು ಎದುರಾಗುತ್ತಿದ್ದವಿ. ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹುದ್ದೆಗಳನ್ನು ಉನ್ನತೀಕರಿಸಲು ಗ್ರಾಮೀಣಾಭಿವೃದ್ಧಿ ತೀರ್ಮಾನಿಸಿತ್ತು. ಈಗ ಅದಕ್ಕೆ ಕಾಲ ಕೂಡಿ ಬಂದಂತಾಗಿದೆ.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.