ಗೃಹ ಇಲಾಖೆ ಇದೆಯೋ ಇಲ್ಲವೋ: ದೇವೇಗೌಡ
Team Udayavani, Jan 21, 2018, 6:55 AM IST
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದ್ದು ಕೆಂಪಯ್ಯನ ಉಪಟಳದಿಂದ ಪೊಲೀಸ್ ಅಧಿಕಾರಿಗಳು ಕೈ ಚೆಲ್ಲಿ ಕುಳಿತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ಗಾಂಧಿನಗರ ವಿಧಾನಸಭೆ ಕ್ಷೇತ್ರದ ಕಾರ್ಯಕರ್ತರ ಸಮಾವೇಶ ಮಾತನಾಡಿ, ರಾಜ್ಯದಲ್ಲಿ ಹಾಡಹಗಲೇ ಕೊಲೆ, ಪೊಲೀಸರ ಮೇಲೆಯೇ ಹಲ್ಲೆ-ದೌರ್ಜನ್ಯ ನಡೆಯುತ್ತಿದೆ. ಗೃಹ ಇಲಾಖೆ ಇದೆಯೋ ಇಲ್ಲವೋ ಎಂಬ ಅನುಮಾನ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಪರಾಧ ಕೃತ್ಯಗಳು, ಅಶಾಂತಿ ವಾತಾವರಣದಿಂದ ರಾಜ್ಯದ ಜನರು ನೆಮ್ಮದಿ ಕಳೆದುಕೊಂಡಿದ್ದಾರೆ. ಭ್ರಷ್ಟಾಚಾರವೆ ಕಾಂಗ್ರೆಸ್ ಸರ್ಕಾರದ ಸಾಧನೆ. ಸರ್ಕಾರದ ಸಾಧನೆ ಹೇಳ್ತೀವಿ ಅಂತ ಕಾಂಗ್ರೆಸ್‌ನವರು ಸಮಾವೇಶ ಮಾಡುತ್ತಿದ್ದಾರೆ. ಇದಕ್ಕೆ ಸರ್ಕಾರದ ಬೊಕ್ಕಸದಿಂದ 650 ಕೋಟಿ ರೂ. ವೆಚ್ಚ ಮಾಡಿದ್ದಾರೆ. ಈ ದುಡ್ಡು ಯಾರದು ಎಂದು ಜನತೆಗೆ ಹೇಳಲಿ ಎಂದರು. ಬೆಂಗಳೂರು ಅಭಿವೃದ್ಧಿಗಾಗಿ ನಾನು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಹಲವಾರು ಯೋಜನೆ ರೂಪಿಸಿದೆ. ಬೆಂಗಳೂರಿನಲ್ಲಿ ಕೊಳಗೇರಿ ವಾಸಿಗಳಿಗೆ ಹಕ್ಕುಪತ್ರ ಕೊಡಿಸಲು ಹೋರಾಟ ಮಾಡಿದೆ. ಒಬ್ಬ
ಮಹಾನುಭಾವನನ್ನು ಎಂಎಲ್‌ಎ ಮಾಡಲು ದರಿದ್ರ ನಾರಾಯಣ ಸಮಾವೇಶ ಕೂಟ ಮಾಡಿದ್ದೆ ಎಂದು ಪರೋಕ್ಷವಾಗಿ ಜಮೀರ್ ಅಹಮದ್ ವಿರುದ್ಧ ಹರಿಹಾಯ್ದರು. ಗಾಂಧಿನಗರದಲ್ಲಿ ನಾರಾಯಣಸ್ವಾಮಿ ಪಕ್ಷದ ಅಭ್ಯರ್ಥಿಯಾಗಿದ್ದು, ಅವರಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.