ಬೀದರ್ ಕ್ಷೇತ್ರ ಜೆಡಿಎಸ್‌ಗೆ ಬಿಟ್ಟುಕೊಡಲು ಈಶ್ವರ್‌ಖಂಡ್ರೆ ವಿರೋಧ
Team Udayavani, Jan 13, 2019, 12:35 AM IST
ಬೆಂಗಳೂರು :ಬೀದರ್ ಜಿಲ್ಲೆಯಲ್ಲಿ ಐದು ಮಂದಿ ಕಾಂಗ್ರೆಸ್ ಶಾಸಕರಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ಲೋಕಸಭಾ ಸೀಟು ಹಂಚಿಕೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.
ಬೀದರ್ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವಂತೆ ಮಾಜಿ ಪ್ರಧಾನಿ ದೇವೇಗೌಡರು ಇಂಗಿತ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಬೀದರ್ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬಾರದು ಎಂದು ಪರೋಕ್ಷವಾಗಿ ಹೇಳಿದರು.
ಬೀದರ್ ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರು ಇದ್ದಾರೆ. ಆ ದೃಷ್ಟಿಯಿಂದಲೇ ಬೀದರ್ ಲೋಕಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ದೇವೇಗೌಡರು ಕುಳಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ. ಇದರ ಬಗ್ಗೆ ಯಾರು ಗೊಂದಲ ಪಡುವ ಅಗತ್ಯವಿಲ್ಲ. ಎಲ್ಲವೂ ಸುಸೂತ್ರವಾಗಿ ಎಲ್ಲರೂ ಒಪ್ಪುವಂತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾವ ಪಕ್ಷದ ಪ್ರಭಾವ, ವರ್ಚಸ್ಸು ಹೆಚ್ಚಿರುತ್ತದೋ ಆ ಪಕ್ಷದ ಅಭ್ಯರ್ಥಿ ಸ್ವರ್ಧೆ ಮಾಡಬೇಕು. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಉದ್ದೇಶವಾಗಿದೆ. ಹೀಗಾಗಿ ಬಿಜೆಪಿ ಅಭ್ಯರ್ಥಿಯನ್ನು ಯಾರು ಸೋಲಿಸುತ್ತಾರೋ ಅವರಿಗೆ ಟಿಕೆಟ್ ಕೊಡುವ ಬಗ್ಗೆ ತೀರ್ಮಾನ ಆಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Response to Demand: ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ
Winter Session Issue: ಬಂಧನ, ಪೊಲೀಸ್ ದೌರ್ಜನ್ಯ: ಡಿಜಿಪಿಗೆ ಸಿ.ಟಿ.ರವಿ ದೂರು
Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಹಿಂದೂ, ಸಿಕ್ಖ್ ಅರ್ಚಕರಿಗೆ 18,000 ರೂ.: ನೋಂದಣಿ ಶುರು
Yemen; ಕೇರಳದ ನರ್ಸ್‌ಗೆ ಗಲ್ಲು: ಯೆಮೆನ್ ಅಧ್ಯಕ್ಷ ಸಮ್ಮತಿ
Editorial; ಜಗತ್ತಿನೆಲ್ಲೆಡೆ ಅನುರಣಿಸಲಿ ಶಾಂತಿ, ಸಹಬಾಳ್ವೆಯ ಮಂತ್ರ
Work-life balance; ಹೆಚ್ಚು ಸಮಯ ಕಳೆದರೆ ಪತ್ನಿ ಓಡಿ ಹೋಗಬಹುದು: ಗೌತಮ್ ಅದಾನಿ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.