ಪ್ರಾಮಾಣಿಕರನ್ನು ಹುಡುಕುವುದೇ ಕಷ್ಟ: ಚಿಮೂ
Team Udayavani, Mar 23, 2018, 11:49 AM IST
ಬೆಂಗಳೂರು: ಕನ್ನಡಪರ ಹೋರಾಟಗಾರರಲ್ಲಿ ಪ್ರಾಮಾಣಿಕರನ್ನು ಹುಡುಕುವುದೇ ಕಷ್ಟವಾಗಿದೆ ಎಂದು ಹಿರಿಯ ಸಂಶೋಧಕ ಡಾ.ಎಂ.ಚಿದಾನಂದಮೂರ್ತಿ ಕಳವಳ ವ್ಯಕ್ತಪಡಿಸಿದರು.
ಕಸಾಪದಿಂದ ಗುರುವಾರ ಹಮ್ಮಿಕೊಂಡಿದ್ದ ಕನ್ನಡಪರ ಹೋರಾಟಗಾರ ಮ.ರಾಮಮೂರ್ತಿ ಅವರ ಜನ್ಮಶತಮಾನೋತ್ಸವ ಹಾಗೂ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು. ಇವತ್ತಿನ ಕನ್ನಡಪರ ಹೋರಾಟಗಳು ವಸೂಲಿ ಎಂಬಂತಾಗಿದೆ. ಕತ್ತೆ, ಕುದುರೆ ಮೇಲೆ ಬಂದು ಹೋರಾಟ ಮಾಡುತ್ತಾರೆ. ಕೆಲವೊಮ್ಮೆ ಅವರೇ ಕತ್ತೆ, ಕುದುರೆ ಅಗಿ ಬಿಡುತ್ತಾರೆ ಎಂದರು.
ಬೆಳಗಾವಿ ಕರ್ನಾಟಕದ ರಾಜಧಾನಿ ಆಗಬೇಕಿತ್ತು. ರಾಜಧಾನಿಯಾಗಿ ನಿರ್ಮಿಸಲು ಬೇಕಾದ ಎಲ್ಲಾ ರೀತಿಯ ಸಂಪತ್ತು ಹಾಗೂ ಸೌಲಭ್ಯ ಅಲ್ಲಿತ್ತು. ದುರ್ದೈವ ನಮ್ಮ ಕಿತ್ತಾಟದಿಂದಲೇ ಅದು ಸಾಧ್ಯವಾಗಿಲ್ಲ. 49 ವರ್ಷ ಬದುಕಿದ ಮ.ರಾಮಮೂರ್ತಿಯವರು ಕನ್ನಡದಲ್ಲಿ ಹೊಸ ಅಲೆ ಮೂಡಿಸಿದ್ದಾರೆ. ಕನ್ನಡ ಪರ ಹೋರಾಟ ಮಾಡಿದ್ದು ಮಾತ್ರವಲ್ಲ ಡಬ್ಬಿಂಗ್ ವಿರೋಧಿಯಾಗಿದ್ದರು ಎಂದು ಹೇಳಿದರು.
ದತ್ತಿ ಪ್ರಶಸ್ತಿ ವಿಜೇತ ಕನ್ನಡಪರ ಹೋರಾಟಗಾರ ಅಶೋಕ್ ಚಂದರಗಿ, ದತ್ತಿ ಹಣದಲ್ಲಿ 10 ಸಾವಿರ ಕಮಲಮ್ಮ ಅವರಿಗೆ ಮತ್ತು 15 ಸಾವಿರ ಬೆಳಗಾವಿಯ ಕನ್ನಡ ಮಾಧ್ಯಮದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನೀಡುವುದಾಗಿ ಘೋಷಿಸಿದರು. ಕಮಲಮ್ಮ ಮ.ರಾಮಮೂರ್ತಿ ಅವರಿಗೆ ಗೌರವಾರ್ಪಣೆ ಮಾಡಲಾಯಿತು. ಸಾಹಿತಿ ಡಾ.ಬಾಬು ಕೃಷ್ಣಮೂರ್ತಿ, ಕಸಾಪ ಅಧ್ಯಕ್ಷ ಡಾ.ಮನುಬಳಿಗಾರ್, ಕನ್ನಡ ಗೆಳೆಯರ ಬಳಗದ ಸಂಚಾಲಕ ರಾ.ನಂ.ಚಂದ್ರಶೇಖರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Heart Rate Control: ಹೃದಯ ಬಡಿತದ ನಿಯಂತ್ರಣದಲ್ಲಿ ಆಧುನಿಕ ಹೃದಯ ಲಯ ಸಾಧನಗಳ ಅಗತ್ಯ ಪಾತ್ರ
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.