ನಾಲ್ವರಿಗೆ ದೃಷ್ಟಿ ಬರುವುದೇ ಅನುಮಾನ


Team Udayavani, Jul 16, 2019, 3:06 AM IST

nalvarige

ಬೆಂಗಳೂರು: ಮಿಂಟೊ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ವಯೋ ಸಹಜ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ವ್ಯತ್ಯಾಸವಾಗಿ ಸೋಂಕು ಕಾಣಿಸಿಕೊಂಡು ದೃಷ್ಟಿ ಸಮಸ್ಯೆಗೊಳಗಾದ 20 ರೋಗಿಗಳ ಪೈಕಿ ಸೋಮವಾರ ಕೆಲವರು ಚೇತರಿಸಿಕೊಂಡಿದ್ದಾರೆ.

ಉಳಿದಂತೆ ನಾಲ್ಕು ಮಂದಿ ಚಿಕಿತ್ಸೆಗೆ ಸ್ಪಂದಿಸದ ಕಾರಣ ಅವರಿಗೆ ದೃಷ್ಟಿ ಬರುವುದೂ ಅನುಮಾನ ಎಂದು ಹೇಳಲಾಗುತ್ತಿದೆ. ಕಣ್ಣಿನಲ್ಲಿ ಪೊರೆಯಾಗಿ ಮಂಜು ಮಂಜಾಗಿ ಕಾಣಿಸುತ್ತಿದ್ದರಿಂದ ಸರಿಪಡಿಸಿಕೊಳ್ಳಲೆಂದು ರಾಜ್ಯದ ವಿವಿಧ ಭಾಗದ 8 ಮಂದಿ ಮಹಿಳೆಯರು ಹಾಗೂ 16 ಮಂದಿ ಪುರುಷರು ಕಳೆದ ಮಂಗಳವಾರ (ಜು.9) ಮಿಂಟೊ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಶಸ್ತ್ರಚಿಕಿತ್ಸೆ ವೇಳೆ ಬಳಸುವ ಔಷಧವೊಂದು ವ್ಯತ್ಯಾಸವಾದ ಪರಿಣಾಮ ಅಂದು ಚಿಕಿತ್ಸೆಗೊಳಗಾದವರಲ್ಲಿ 20 ರೋಗಿಗಳಿಗೆ ಮರುದಿನ ಸಮಸ್ಯೆ ಕಾಣಿಸಿಕೊಂಡಿದೆ. ಕಣ್ಣಿನಲ್ಲಿ ಕೀವುಕಟ್ಟುವುದು, ತೀವ್ರ ನೋವು ಆರಂಭವಾಗಿದೆ. ಶಸ್ತ್ರ ಚಿಕಿತ್ಸೆಗೊಳಪಟ್ಟವರಲ್ಲಿ ಮಧುಮೇಹ, ರಕ್ತದೊತ್ತಡ ಸೇರಿದಂತೆ ಅನೇಕ ವಯೋಸಹಜ ರೋಗಗಳಿಂದ ಬಳಲುತ್ತಿರುವ ಹಿರಿಯರೇ ಹೆಚ್ಚಿದ್ದಾರೆ. ಹೀಗಾಗಿ, ಸೋಂಕು ಹೆಚ್ಚು ವ್ಯಾಪಿಸಿದೆ. ಜತೆಗೆ ಚಿಕಿತ್ಸೆಗೆ ಸೂಕ್ತವಾಗಿ ಸ್ಪಂದಿಸುತ್ತಿರಲಿಲ್ಲ.

ಭಾನುವಾರ ಸಂಜೆ ವೇಳೆಗೆ 10 ರೋಗಿಗಳು ಚೇತರಿಸಿಕೊಂಡಿದ್ದರು. ಸೋಮವಾರ ಉಳಿದ ಆರು ರೋಗಿಗಳ ಸೋಂಕು ಕಡಿಮೆಯಾಗಿತ್ತು. ಸೋಂಕು ಕಡಿಮೆಯಾದವರಿಗೆ ದೃಷ್ಟಿ ಬರುತ್ತಿದೆ. ಉಳಿದ 4 ರೋಗಿಗಳಲ್ಲಿ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ. ಹೀಗಾಗಿ, ದೃಷ್ಟಿಗೆ ಬರುವ ಸಾಧ್ಯತೆಯು ಕಡಿಮೆ ಎಂದು ವೈದ್ಯರು ತಿಳಿಸಿದ್ದಾರೆ. ಇನ್ನೊಂದೆಡೆ ಒಂದು ದಿನದ ಶಸ್ತ್ರಚಿಕಿತ್ಸೆಗೆಂದು ಬಂದ ರೋಗಿಗಳು ವೈದ್ಯರು ಮಾಡಿದ ಎಡವಟ್ಟನಿಂದ ವಾರವಾದರೂ ಮನೆ ಸೇರಿಲ್ಲ.

ಇದ್ದ ದೃಷ್ಟಿಯೂ ಹೋಗಿದೆ. ಹೀಗಾಗಿ, ರೋಗಿಗಳ ಸಂಬಂಧಿಕರು ವೈದ್ಯರ ನಿರ್ಲಕ್ಷ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದು, ಕ್ರಮ ಕೈಗೊಳ್ಳುವಂತೆ ಹಿರಿಯ ವೈದ್ಯರಿಗೆ ಒತ್ತಾಯಿಸಿದ್ದಾರೆ.  “ಸೋಂಕು ಹೋದ ಬಳಿಕ ದೃಷ್ಟಿ ಮರಳುತ್ತದೆ’ ಎಂದು ಹೇಳಿಕೊಂಡು ರೋಗಿಗಳನ್ನು ಮತ್ತವರ ಸಂಬಂಧಿಕರನ್ನು ಆಸ್ಪತ್ರೆಯ ವೈದ್ಯರು ಸಮಾಧಾನ ಪಡಿಸುತ್ತಿದ್ದಾರೆ.

ಶಸ್ತ್ರಚಿಕಿತ್ಸೆ ಸ್ಥಗಿತ: ಘಟನೆಯ ಹಿನ್ನೆಲೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಯನ್ನು ಆಸ್ಪತ್ರೆಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಡ್ರಗ್ಸ್ ರಿಯಾಕ್ಷನ್‌ ಆಗಿರಬಹುದೇ ಅಥವಾ ಮತ್ತೆನಾದರೂ ಇದೆಯೇ ಎಂಬ ಬಗ್ಗೆ ಸ್ಪಷ್ಟತೆ ದೊರೆತಿಲ್ಲ.ಡ್ರಗ್‌ ಕಂಟ್ರೋಲ್‌ನಿಂದ ವರದಿ ಬರಬೇಕಿದೆ.

ಘಟನೆ ನಡೆದ ತಕ್ಷಣವೇ ಶಸ್ತ್ರಚಿಕಿತ್ಸೆ ಕೊಠಡಿ ಮುಚ್ಚಿದ್ದು, ಆ ವೇಳೆ ಇದ್ದ ವೈದ್ಯರು ಕರ್ನಾಟಕ ರಾಜ್ಯ ಔಷಧ ನಿಯಂತ್ರಣ ಮಂಡಳಿ, ಆರೋಗ್ಯ ಇಲಾಖೆಯ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ. ಅವರು ಬಂದು ಎಲ್ಲವನ್ನೂ ಪರಿಶೀಲಿಸಿ ಹೋಗಿದ್ದಾರೆ.

ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯಬೇಕಿದೆ. ಒಟ್ಟಾರೆ ಶಸ್ತ್ರಚಿಕಿತ್ಸೆ ವ್ಯತ್ಯಯಕ್ಕೆ ಸಂಬಂಧಿಸಿದಂತೆ ಸಂಪೂರ್ಣ ವರದಿ ಬರುವವರೆಗೆ ಆಸ್ಪತ್ರೆಯಲ್ಲಿ ತುರ್ತು ಶಸ್ತ್ರಚಿಕಿತ್ಸೆ ಹೊರತುಪಡಿಸಿ ಯಾವುದೇ ಚಿಕಿತ್ಸೆ ಕೈಗೊಳ್ಳುವುದಿಲ್ಲ ಎಂದು ಮಿಂಟೊ ಆಸ್ಪತ್ರೆ ನಿರ್ದೇಶಕರು ತಿಳಿಸಿದ್ದಾರೆ.

ಚಿಕಿತ್ಸೆಯ ನೋವು ಹೆಚ್ಚಿದೆ: ಶಸ್ತ್ರಚಿಕಿತ್ಸೆಯಿಂದ ಸೋಂಕಾದವರಿಗೆ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರಿಸಿದ್ದು, ಆ ರೋಗಿಗಳ ಕಣ್ಣಿಗೆ ಪ್ರತಿದಿನ ಮೂರು ರೀತಿಯ ಚುಚ್ಚು ಮದ್ದುನ್ನು ವೈದ್ಯರು ನೀಡುತ್ತಿದ್ದಾರೆ. ಶಸ್ತ್ರಚಿಕಿತ್ಸೆಗಿಂತಲೂ ಚುಚ್ಚುಮದ್ದು ಹೆಚ್ಚು ನೋವು ನೀಡುತ್ತಿದೆ. ಸೋಂಕು ಕಡಿಮೆಯಾಗಿ ದೃಷ್ಟಿ ಮರಳಬಹುದು ಎಂದು ಈ ನೋವನ್ನು ಸಹಿಕೊಳ್ಳುತ್ತಿದ್ದೇವೆ. ಮೊದಲು ಮಂಜು ಮಂಜಾಗಿ ಕಾಣುತ್ತಿತ್ತು. ಈಗ ಏನೂ ಕಾಣಿಸುತ್ತಲೇ ಇಲ್ಲ ಎಂದು ರೋಗಿಯೊಬ್ಬರು ತಮ್ಮ ನೋವನ್ನು ಹೇಳಿಕೊಂಡರು.

ಮುಲಾಮಿನಲ್ಲಿ ಕೀಟದ ಅಂಶ ಪತ್ತೆ: ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ವೇಳೆ ರೋಗಿಗಳ ಕಣ್ಣಿಗೆ ಲೇಪಿಸುವ ಮುಲಾಮಿನಿಂದ ಕಣ್ಣಿನ ಒಳಭಾಗದಲ್ಲಿ ಗಂಭೀರವಾದ ಸಮಸ್ಯೆ ಕಾಣಿಸಿಕೊಂಡಿದೆ. “ಪ್ರಾಥಮಿಕ ವರದಿಯ ಪ್ರಕಾರ ಶಸ್ತ್ರಚಿಕಿತ್ಸೆ ವೇಳೆ ಬಳಸಿರುವ ಮುಲಾಮಿನಲ್ಲಿ ಕೀಟಾಂಶ ಕಾಣಿಸಿಕೊಂಡಿದ್ದು, ಸೋಂಕಿಗೆ ಅದೇ ಕಾರಣವಾಗಿದೆ. ಆದರೆ, ಈ ಕುರಿತ ಪ್ರಾಥಮಿಕ ವರದಿಯನ್ನು ಡ್ರಗ್‌ ಕಂಟ್ರೋಲರ್‌ಗೆ ಕಳಿಸಿದ್ದು, ಅವರ ವರದಿ ಬಂದ ನಂತರ ಎಲ್ಲವೂ ಸ್ಪಷ್ಟವಾಗಲಿದೆ.

ಈ ಮುಲಾಮನ್ನು ಶಸ್ತ್ರಚಿಕಿತ್ಸೆ ವೇಳೆ ಕಣ್ಣಿನ ಪೊರೆಯ ಮೇಲ್ಮೈ ನಿಯಂತ್ರಣಕ್ಕೆ ಬಳಸಲಾಗುತ್ತದೆ. ಈ ಕುರಿತು ಕರ್ನಾಟಕ ರಾಜ್ಯ ಔಷಧ ನಿಯಂತ್ರಣ ಮಂಡಳಿಗೆ ಹಾಗೂ ಮುಲಾಮು ತಯಾರಿಸಿದ ಕಂಪನಿ ಹಾಗೂ ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ಕುರಿತು ಪತ್ರ ಬರೆಯುತ್ತಿದ್ದೇವೆ’ ಎಂದು ಆಸ್ಪತ್ರೆ ನಿರ್ದೇಶಕಿ ಸುನೀತಾ ರಾಥೋಡ್‌ ತಿಳಿಸಿದ್ದಾರೆ.

ಎಡಗಣ್ಣುಗೆ ಮಂಜು ಮಂಜಾದ ಕಾರಣ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡೆ. ಆಪರೇಷನ್‌ ನಂತರ ಆ ಕಣ್ಣು ಬಾವು ಬಂದಿದ್ದು, ಏನೂ ಕಾಣುತ್ತಿಲ್ಲ. ವೈದ್ಯರನ್ನು ಕೇಳಿದರೆ ಸರಿ ಹೋಗುತ್ತೆ ಎಂದು ಹೇಳುತ್ತಿದ್ದಾರೆ. ಎರಡು ದಿನ ಆಸ್ಪತ್ರೆಯಲ್ಲಿರಬೇಕು ಎಂದು ಹೇಳಿದ್ದರು. ವಾರ ಕಳೆದರು ಚಿಕಿತ್ಸೆ ನೀಡುತ್ತಲೇ ಇದ್ದಾರೆ.
-ನಂಜಮ್ಮ, ದೃಷ್ಟಿ ಕಳೆದುಕೊಂಡವರು

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.