ಅಧಿಕಾರಕ್ಕಿಂತ ಕೆಲಸ ಮಾಡುವುದು ಮುಖ್ಯ

ಕರಾವಳಿ ರತ್ನ ಪ್ರಶಸ್ತಿ ಸ್ವೀಕರಿಸಿದ ಮಾಜಿ ಸಂಸದರ ಅಭಿಮತ

Team Udayavani, Sep 30, 2019, 11:12 AM IST

bng-tdy-3

ಬೆಂಗಳೂರು: ಅಧಿಕಾರದಲ್ಲಿ ಎಷ್ಟು ದಿನ ಇರುತ್ತೇವೆ ಎನ್ನುವುದಕ್ಕಿಂತ ಅಧಿಕಾರದಲ್ಲಿದ್ದಾಗ ಯಾವ ರೀತಿ ಕೆಲಸ ಮಾಡಿದ್ದೇವೆ ಎನ್ನುವುದು ಮುಖ್ಯವಾಗುತ್ತದೆ ಎಂದು ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದರು.

ದಕ್ಷಿಣ ಕನ್ನಡಿಗರ ಸಂಘದಿಂದ ಭಾನುವಾರ ನಗರದ ಶ್ರೀ ಜಗದ್ಗುರು ರೇಣುಕಾಚಾರ್ಯ ಕಾಲೇಜು ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವಜ್ರಮಹೋತ್ಸವ ಹಾಗೂ ಕರಾವಳಿ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರಾವಳಿ ರತ್ನ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಬ್ರಹ್ಮಾವರ ಕ್ಷೇತ್ರದ ಕೊನೆಯ ಶಾಸಕ ನಾನಾಗಿದ್ದೆ. ಅಲ್ಲಿಗೆ ನನ್ನ ಒಂದು ಭಾಗದ ರಾಜಕೀಯ ಜೀವನ ಪೂರ್ಣವಾಗಿತ್ತು ಎಂಬುದನ್ನು ಅನೇಕ ಬಾರಿ ಹೇಳಿಕೊಂಡಿದ್ದೆ. ಆದರೆ, ಅಧಿಕಾರದಲ್ಲಿದ್ದ ದಿನಗಳಲ್ಲಿ ಮಾಡಿದ ಕೆಲಸ, ಜನ ಸಾಮಾನ್ಯ ರೊಂದಿಗೆ ಇಟ್ಟುಕೊಂಡಿರುವ ಸಂಪರ್ಕ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದೆ. ಚುನಾವಣೆಯಲ್ಲಿ ಸೋತರು ಚಲಾವಣೆಯಲ್ಲಿ ಇದ್ದೇನೆ ಎಂಬುದನ್ನು ಈ ಪ್ರಶಸ್ತಿ ಆಯ್ಕೆಯಿಂದ ಸಾಬೀತಾಗಿದೆ ಎಂದರು.

ಹಿಂದಿನ ರಾಜಕಾರಣಕ್ಕೂ ಇಂದಿನ ರಾಜಕಾರಣಕ್ಕೂ ಬಹಳ ವ್ಯತ್ಯಾಸ ಇದೆ. ಇಂದಿನ ರಾಜಕಾರಣದಲ್ಲಿ ಸ್ಥಾನ ಗಳಿಸುವುದೇ ಮುಖ್ಯವಾಗಿದೆ. ಜನ ಕೆಲಸ ಮಾಡಲಿ ಎಂದು ಶಾಸಕನ್ನು ಆಯ್ಕೆ ಮಾಡುತ್ತಾರೆ. ಮಂತ್ರಿಗಿರಿಗಾಗಿ ಶಾಸಕ ತಪ್ಪು ಮಾಡುವುದು ಸರಿಯಲ್ಲ. ಜನಸೇವೆ ಮುಖ್ಯವಾಗಿರಬೇಕು ಎಂದರು.

ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಜೆ.ಎಚ್‌. ಪಟೇಲರು ರಾಜಕೀಯವಾಗಿ ಕೆಲಸ ಮಾಡಲು ಮುಕ್ತ ಅವಕಾಶ ನೀಡಿದ್ದರು. ನೀರಿನ ಸಮಸ್ಯೆ ಇಂದು ಸಾಕಷ್ಟು ದೊಡ್ಡಮಟ್ಟದಲ್ಲಿದೆ. ಅದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ. ಕುಡಿಯುವ ನೀರಿಗಾಗಿ ಚೆಕ್‌ಡ್ಯಾಂಗಳ ನಿರ್ಮಾಣ ಅಗತ್ಯವಾಗಿ ಆಗಬೇಕಿದೆ.

ಅಧಿಕಾರದಲ್ಲಿ ಇದ್ದಾಗ ಮಾಡಿರುವ ಅಭಿವೃದ್ಧಿ ಕಾರ್ಯ ಇನ್ನು ನೆನಪಿದೆ. ಚುನಾವಣೆಯಲ್ಲಿ ಸೋತರೂ, ರಾಜಕಾರಣದಲ್ಲಿದ್ದಾ ಮಾಡಿದ ಅಭಿವೃದ್ಧಿ ಕಾರ್ಯ ತೃಪ್ತಿ ನೀಡುತ್ತಿದೆ ಎಂದು ಹೇಳಿದರು. ಸಂಗೀತ ಸಾಧಕ ಡಾ.ವಿದ್ಯಾಭೂಷಣ ತೀರ್ಥರು, ಸಮಾಜ ಸೇವಕ ಕೆ.ಮೋಹನದೇವ ಅಳ್ವ ಹಾಗೂ ಉದ್ಯಮಿ ಎಸ್‌ .ಟಿ.ಆರ್‌.ಮಡಿ ಅವರಿಗೆ ಕರಾವಳಿ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಬಾ. ರಾಮಚಂದ್ರ ಉಪಾಧ್ಯ, ಉಪಾಧ್ಯಕ್ಷರಾದ ಪಿ.ಎಸ್‌. ಬಾಗಿಲ್ತಾಯ, ಡಾ.ಕೆ.ಸಿ.ಬಲ್ಲಾಳ್‌, ಪ್ರಧಾನ ಕಾರ್ಯದರ್ಶಿ ವೈ. ಜಯಂತ್‌ ರಾವ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pushpa 2: 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

Uttarakhand ಹೈಕೋರ್ಟ್‌ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.