ರೈತರು ಆತ್ಮಹತ್ಯೆ ಬೆದರಿಕೆ ಹಾಕುವುದು ಸರಿಯಲ್ಲ: ಡಿಕೆಶಿ
Team Udayavani, Jun 19, 2018, 6:35 AM IST
ಬೆಂಗಳೂರು: “ರೈತರು ಸರ್ಕಾರಕ್ಕೆ ಆತ್ಮಹತ್ಯೆ ಬೆದರಿಕೆ ಹಾಕುವುದು ಸರಿಯಲ್ಲ’ ಎಂದು ಜಲ ಸಂಪನ್ಮೂಲ
ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಪೂಜೆ ನೆರವೇರಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಳ್ಳುತ್ತೇವೆಂದು ರೈತರು ಸರ್ಕಾರವನ್ನು ಹೆದರಿಸುವುದು ಬೇಡ. ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನದ ಕೆಲಸ. ರಾಜ್ಯ ಸರ್ಕಾರ ರೈತರ ಅನುಕೂಲಕ್ಕೆ ಅಗತ್ಯ ಯೋಜನೆ ಗಳನ್ನು ರೂಪಿಸುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಿರುವುದರಿಂದ ರಾಜ್ಯದ ರೈತರಿಗೆ ಆಗಿರುವ ಅನ್ಯಾಯವನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದಾರೆ. ನಿರ್ವಹಣಾ ಮಂಡಳಿಯಲ್ಲಿ ರಾಜ್ಯದ ಪರವಾಗಿ ಯಾರು ಸದಸ್ಯರಿರಬೇಕು ಎಂದು ಇನ್ನೂ ನೇಮಕ ಮಾಡಿಲ್ಲ. ಕೇಂದ್ರ ಸರ್ಕಾರ
ಗೆಜೆಟ್ ನೋಟಿಫಿಕೇಶನ್ ಹೊರಡಿಸಿದೆ. ಕೇಂದ್ರ ಸರ್ಕಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ವಿಶ್ವಾಸ ಇದೆ ಎಂದರು.
ಬೆಂಗಳೂರಿನ ಅಂತರ್ಜಲದ ಬಗ್ಗೆ ನೀತಿ ಆಯೋಗ ಆತಂಕ ವ್ಯಕ್ತಪಡಿಸಿರುವ ಬಗ್ಗೆ ಮಾತನಾಡಿರುವ ಅವರು, ಬೆಂಗಳೂರಿಗರ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮ ಸರ್ಕಾರದ ಮೇಲಿದೆ.
ಕುಡಿಯುವ ನೀರಿನ ವಿಷಯದಲ್ಲಿ ಸುಪ್ರೀಂಕೋರ್ಟ್ ಈಗಾಗಲೇ ಆದೇಶ ನೀಡಿದ್ದು, ಬೆಂಗಳೂರಿನ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಬೆಂಗಳೂರಿನ ಅಭಿವೃದಿಟಛಿ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದು, ಈಗಾಗಲೇ ಇನ್‌ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿಯವರನ್ನು ಭೇಟಿ ಮಾಡಿ ಸಲಹೆ ಕೇಳಿದ್ದಾರೆ. ಎಲ್ಲರ ಸಲಹೆ ಪಡೆದು ಸೂಕ್ತ ಯೋಜನೆಗಳನ್ನು ರೂಪಿಸಲಾಗುವುದು ಎಂದರು.
ಗೌರಿ ಹತ್ಯೆಯ ಬಗ್ಗೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ರಾಜ್ಯ ಸರ್ಕಾರದ ಮೇಲೆ ಸಾಕಷ್ಟು ಒತ್ತಡ ಇದ್ದರೂ, ನಾವು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ತನಿಖೆ ನಡೆಯುತ್ತಿದ್ದು, ತನಿಖೆ ಸಂದರ್ಭದಲ್ಲಿ ಗೃಹ ಇಲಾಖೆ
ಅಥವಾ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ತಪ್ಪಿತಸ್ಥರನ್ನು ಆದಷ್ಟು ಬೇಗ ಜನರ ಮುಂದೆ ನಿಲ್ಲಿಸುತ್ತೇವೆ.
– ಡಿ.ಕೆ.ಶಿವಕುಮಾರ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.