ಐಟಿ ದಾಳಿ ಸತ್ಯಕ್ಕೆ ದೂರ: ಜಾರ್ಜ್
Team Udayavani, Feb 4, 2018, 12:16 PM IST
ಬೆಂಗಳೂರು: ತಮ್ಮ ಸಂಸ್ಥೆ ಹಾಗೂ ಸ್ನೇಹಿತರ ಸಂಸ್ಥೆಗಳ ಮೇಲೆ ಐಟಿ ದಾಳಿಯಾಗಿದೆ ಎನ್ನುವುದು ಸತ್ಯಕ್ಕೆ ದೂರವಾದುದು ಎಂದು ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿಯವರು ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ.
ಯಾವ ಸಂಸ್ಥೆ ಮೇಲೆ ಐಟಿ ದಾಳಿಯಾಗಿದೆ ಎಂದು ಬಿಜೆಪಿಯವರು ಮಾಹಿತಿ ನೀಡಲಿ ಎಂದು ಆಗ್ರಹಿಸಿದರು. ಯುಗೇಂದರ್ ಎನ್ನುವವರು ನನ್ನ ಸ್ನೇಹಿತರು ಎನ್ನುವ ಕಾರಣಕ್ಕೆ ಅವರಿಗೆ ತೊಂದರೆ ಕೊಡುವುದು ಸರಿಯಲ್ಲ. ಬಿಜೆಪಿಯವರಿಗೆ ಮಾಡಲು ಏನೂ ಕೆಲಸ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹತ್ಯೆಗಳು ಕಡಿಮೆಯಾಗಿದೆ. ಆದರೆ, ಹತ್ಯೆಗಳಿಗೆ ಜಾತಿಯ ಬಣ್ಣ ನೀಡಲಾಗುತ್ತಿದೆ. ಬಿಜೆಪಿ ಸರ್ಕಾರ ಇದ್ದಾಗ ಕೊಲೆಗಳೇ ಆಗಿಲ್ವಾ ಎಂದು ಪ್ರಶ್ನಿಸಿದರು. ಬೆಳ್ಳಂದೂರು ಕೆರೆಗೆ ಬೆಂಕಿ ಬಿದ್ದಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದರು.
ಎನ್ಜಿಟಿಯಲ್ಲಿ ವಿಚಾರಣೆ ನಡೆಯುವ ಸಂದರ್ಭದಲ್ಲಿಯೇ ಉದ್ದೇಶ ಪೂರ್ವಕವಾಗಿ ಬೆಂಕಿ ಹಚ್ಚಿರಬಹುದು. ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿಯೇ ಇಂತಹ ಕೃತ್ಯ ನಡೆಸಿರುವ ಶಂಕೆಯಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ
K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Kasargod: ನಾಟಕ ತಂಡ ಸಂಚರಿಸುತ್ತಿದ್ದ ಬಸ್ ಮಗುಚಿ ಇಬ್ಬರು ನಟಿಯರ ಸಾವು
Kasaragod: ಎಡನೀರು ಶ್ರೀ ವಿಷ್ಣುಮಂಗಲ ದೇವಸ್ಥಾನದಿಂದ ಕಳವು; ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.