ಮಕ್ಕಳಿಗೂ ಇರಲಿ ಒಂದು ಪ್ರಣಾಳಿಕೆ!
Team Udayavani, Apr 10, 2019, 3:00 AM IST
ಬೆಂಗಳೂರು: ಮಕ್ಕಳನ್ನು ರಾಜಕೀಯ ಪಕ್ಷಗಳು ಗಂಭೀರವಾಗಿ ಪರಿಗಣಿಸುವುದು ಕಡಿಮೆ. ಅವರಿಗಾಗಿ ಪ್ರಣಾಳಿಕೆ ದೂರದ ಮಾತು. ಮಕ್ಕಳ ಹಕ್ಕು, ಆಸಕ್ತಿ ಮತ್ತು ಅವಶ್ಯಕತೆಗಳನ್ನು ತಳ್ಳಿಹಾಕುವಂತಿಲ್ಲ. ಈ ಬಾರಿ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು ಮಕ್ಕಳ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಒತ್ತಾಯಿಸಿದೆ.
ರಾಜ್ಯದ 30 ಜಿಲ್ಲೆಗಳಲ್ಲಿ 120ಕ್ಕೂ ಹೆಚ್ಚು ಸಂಸ್ಥೆಗಳು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ (ಗುಂಪು)ಕೇಂದ್ರದೊಂದಿಗೆ ಕೈಜೋಡಿಸಿವೆ. “ಚುನಾವಣೆ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಹಲವು ಭರವಸೆಗಳನ್ನು ನೀಡುತ್ತವೆ. ಆದರೆ, ಮಕ್ಕಳ ಬಗ್ಗೆ ಚಕಾರವನ್ನೇ ಎತ್ತುವುದಿಲ್ಲ.
ಅವರನ್ನು ಮುಂದಿನ ಪ್ರಜೆಗಳು ಎಂದು ಪರಿಗಣಿಸಿರುವುದೇ ಇದಕ್ಕೆ ಮುಖ್ಯ ಕಾರಣ. ಮುಂದಿನ ಪ್ರಜೆಗಳು ಮುಂದೆ ನೋಡಿಕೊಳ್ಳೋಣ ಎನ್ನುವ ಉದಾಸೀನತೆಯೂ ಇದರ ಹಿಂದೆ ಇದೆ’ ಎನ್ನುತ್ತಾರೆ ಚೆಲ್ಡ್ ರೈಟ್ಸ್ ಟ್ರಸ್ಟ್‌ನ ಸಂಸ್ಥಾಪಕ ವಾಸುದೇವ ಶರ್ಮಾ.
“2011ರ ಜನಗಣತಿಯ ಅನ್ವಯ ದೇಶದಲ್ಲಿ 50 ಕೋಟಿಯಷ್ಟು ಮಕ್ಕಳು 18 ವರ್ಷದ ಒಳಗಿನವರಾಗಿದ್ದಾರೆ. ಇವರಲ್ಲಿ ಶೇ.70 ಮಕ್ಕಳು ಗ್ರಾಮೀಣ ಪ್ರದೇಶದಲ್ಲಿದ್ದು, ಎಲ್ಲ ರಾಜಕೀಯ ಪಕ್ಷಗಳು ಮಕ್ಕಳನ್ನು ಕಡೆಗಣಿಸಿವೆ’ ಎನ್ನುವುದು ಅವರ ಆರೋಪ.
ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳು ಮಕ್ಕಳ ಬಗ್ಗೆ ಕಾಳಜಿವಹಿಸಬೇಕು. ಮಕ್ಕಳಿಗೆ ಇರುವ ಅವಕಾಶಗಳನ್ನು ನ್ಯಾಯಬದ್ಧವಾಗಿ ನೀಡಬೇಕು ಎಂದು ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ ಅಭ್ಯರ್ಥಿಗಳ ಮುಂದೆ ಅಜೆಂಡಾ ಮಂಡಿಸಿದೆ.
ಮಕ್ಕಳ ಹಕ್ಕುಗಳ ಪ್ರಣಾಳಿಕೆ ಪ್ರಮುಖಾಂಶಗಳು
* ಮಕ್ಕಳ ಸಮಗ್ರ ನೀತಿಯನ್ನು ಹೊರಡಿಸುವುದರ ಮೂಲಕ ಬಾಲಕಾರ್ಮಿಕ ಪದ್ಧತಿ, ಬಾಲ್ಯವಿವಾಹ, ಮಕ್ಕಳ ಕಳ್ಳ ಸಾಗಾಣಿಕೆ ಸೇರಿದಂತೆ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಸಮಸ್ಯೆಗಳನ್ನು ಕಡಿಮೆ ಮಾಡಬೇಕು.
* 0-3 ವರ್ಷದ ಒಳಗಿನ ಮಕ್ಕಳ ಸಮಗ್ರ ಅಭಿವೃದ್ಧಿ, ಆರೋಗ್ಯ, ಬೆಳವಣಿಗೆ ಅಪೌಷ್ಠಿಕತೆ ಮತ್ತು ರಕ್ಷಣೆ ವಿಷಯ ಸಾರ್ವತ್ರಿಕ ಮತ್ತು ಉಚಿತವಾಗಬೇಕು.
* ಸಮನ್ವಯ ಶಿಕ್ಷಣ ಹಾಗೂ ಸಮಾನ ಶಿಕ್ಷಣ ಹಿನ್ನೆಲೆ ಕಡ್ಡಾಯ ಶಿಕ್ಷಣ ಆರ್‌ಟಿಇ ಕಾಯ್ದೆ 2009ಕ್ಕೆ ಸೂಕ್ತ ತಿದ್ದುಪಡಿಯನ್ನು ತಂದು ಹುಟ್ಟಿನಿಂದ 18 ವರ್ಷದ ಒಳಗಿನ ಮಕ್ಕಳಿಗೆ ಪ್ರಾಥಮಿಕ ವಿದ್ಯಾಭ್ಯಾಸದಿಂದ ಪಿಯು ವರೆಗೆ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡಬೇಕು.
* ಮಕ್ಕಳಿಗೆ ಪ್ರತ್ಯೇಕ ಆರೋಗ್ಯ ನೀತಿಯನ್ನು ಜಾರಿಗೆ ತರಬೇಕು.
* ಲೋಕಸಭೆ ಮತ್ತು ವಿಧಾನಸಭೆ ನಡವಳಿಕೆಗಳಲ್ಲಿ ತಿದ್ದುಪಡಿ ಮಾಡಿ ಅಧಿವೇಶನಗಳಲ್ಲಿ ಮೂರರಿಂದ ನಾಲ್ಕುದಿನ ಮಕ್ಕಳ ಭವಿಷ್ಯದ ಬಗ್ಗೆ ಚರ್ಚೆಯಾಗಬೇಕು.
* ಹದಿಹರೆಯದವರಿಗೆ ಆಪ್ತಸಮಾಲೋಚನಾ ಸಹಾಯ ಕೇಂದ್ರಗಳನ್ನು ತೆರೆಯಬೇಕು.
* ಬಿಸಿಯೂಟದಲ್ಲಿ ಪೌಷ್ಠಿಕಾಂಶ ಒಳಗೊಂಡ ಸ್ಥಳೀಯ ಧಾನ್ಯಗಳನ್ನು ಬಳಸಬೇಕು ಎನ್ನುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.