ಡ್ರಂಕ್‌ ಡ್ರೈವ್‌ನಿಂದ ಓರ್ವನ ಬಲಿ ಪಡೆದ ಟೆಕಿಗೆ ಜೈಲು


Team Udayavani, Oct 18, 2022, 11:21 AM IST

ಡ್ರಂಕ್‌ ಡ್ರೈವ್‌ನಿಂದ ಓರ್ವನ ಬಲಿ ಪಡೆದ ಟೆಕಿಗೆ ಜೈಲು

ಬೆಂಗಳೂರು: ಮದ್ಯಪಾನ ಮಾಡಿ, ಅಡ್ಡಾ-ದಿಡ್ಡಿ ಕಾರು ಚಲಾಯಿಸಿ ಪಂಕ್ಚರ್‌ ಅಂಗಡಿ ಸಿಬ್ಬಂದಿ ಸಾವಿಗೆ ಕಾರಣನಾಗಿದ್ದ ಟೆಕಿಯೊಬ್ಬನಿಗೆ ಕೃತ್ಯ ನಡೆದ 5 ವರ್ಷಗಳ ಬಳಿಕ ಜೈಲು ಶಿಕ್ಷೆಯಾಗಿದೆ.

ಉತ್ತರ ಭಾರತ ಮೂಲದ ಎಲೆಕ್ಟ್ರಾನಿಕ್‌ ಸಿಟಿ ಹೊಸೂರು ರಸ್ತೆಯ ಲವ್‌ಕುಶ್‌ ನಗರದ ನಿವಾಸಿ 32 ವರ್ಷದ ಕುನಾಲ್‌ ಕಿಶೋರ್‌ ಅಪರಾಧಿ.

ಎಲೆಕ್ಟ್ರಾನಿಕ್‌ ಸಿಟಿಯ ನಿವಾಸಿ 36 ವರ್ಷದ ದಸ್ತಗಿರ್‌ ಮೃತಪಟ್ಟವ. ಕುನಾಲ್‌ ನಗರದ ಪ್ರತಿಷ್ಠಿತ ಖಾಸಗಿ ಕಂಪನಿಯಲ್ಲಿ ಸಾಫ್ಟ್ ವೇರ್‌ ಎಂಜಿ ನಿಯರ್‌ ಆಗಿ ಕಾರ್ಯನಿರ್ವಹಿ ಸುತ್ತಿದ್ದ. 2017ರ ಡಿ.28ರಂದು ಸಂಜೆ ಮದ್ಯಪಾನ ಮಾಡಿ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯ ನಾಗನಾಥಪುರ ಜಂಕ್ಷನ್‌ ಕಡೆಯಿಂದ ರಾಯಸಂದ್ರದ ಕಡೆಗೆ ಅಡ್ಡಾ-ದಿಡ್ಡಿಯಾಗಿ ಅಜಾಗರೂ ಕತೆಯಿಂದ ಐಷಾರಾಮಿ ಫೋಲ್ಸ್‌ ವ್ಯಾಗನ್‌ ಪೋಲೋ ಕಾರು ಚಾಲನೆ ಮಾಡಿಕೊಂಡು ಹೊರಟಿದ್ದ. ಮಾರ್ಗ ಮಧ್ಯೆ ಬಾಷ್‌ ಕಂಪನಿ ಮುಂಭಾಗದ ರಸ್ತೆ ಬದಿ ದ್ವಿಚಕ್ರವಾಹನಕ್ಕೆ ಪಂಕ್ಚರ್‌ ಹಾಕುತ್ತಿದ್ದ ದಸ್ತಗಿರ್‌ಗೆ ಕುನಾಲ್‌ ಕಾರು ಡಿಕ್ಕಿ ಹೊಡೆದಿತ್ತು. ಡಿಕ್ಕಿ ಹೊಡೆದ ರಭಸಕ್ಕೆ 6-8 ಅಡಿ ಮೇಲಕ್ಕೆ ಹಾರಿದ ದಸ್ತಗಿರ್‌ ರಸ್ತೆಗೆ ಬಿದ್ದು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದ. ಇಷ್ಟಕ್ಕೆ ಸುಮ್ಮನಾಗದ ಕುನಾಲ್‌ ತಪ್ಪಿಸಿಕೊಳ್ಳುವ ಭರದಲ್ಲಿ ಮತ್ತೆ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿ ಪಕ್ಕದಲ್ಲಿ ನಿಂತಿದ್ದ ಸ್ಕೂಟರ್‌ಗೆ ಗುದ್ದಿದ್ದ. ನಂತರ ಅದೇ ವೇಗದಲ್ಲಿ ಮುಂದೆ ಸಾಗಿ ಮತ್ತೂಂದು ಸ್ಕೂಟರ್‌, 2 ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಇದರಿಂದ 4 ದ್ವಿಚಕ್ರವಾಹನಗಳೂ ಸಂಪೂರ್ಣ ಜಖಂಗೊಂಡು ಇಬ್ಬರು ಸವಾರರಿಗೆ ಗಂಭೀರವಾಗಿ ಗಾಯಗಳಾಗಿತ್ತು.

5 ವರ್ಷ ಶಿಕ್ಷೆ, 2.5 ಲಕ್ಷ ರೂ.ದಂಡ: ಇತ್ತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಠಾಣೆ ಪೊಲೀಸರು ಕೃತ್ಯದಲ್ಲಿ ಜಖಂಗೊಂಡಿದ್ದ 4 ದ್ವಿಚಕ್ರವಾಹನಗಳ ವರದಿ ಸಿದ್ಧಪಡಿಸಿದ್ದರು. ವಾಹನ ಮಾಲೀಕರ ಹೇಳಿಕೆ, ಕಾರು ಡಿಕ್ಕಿ ಹೊಡೆದು ದಸ್ತಗಿರ್‌ ಮೃತಪಟ್ಟಿರುವುದಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿ, ಕೃತ್ಯ ನೋಡಿದ ಪ್ರತ್ಯಕ್ಷದರ್ಶಿಗಳ ಹೇಳಿಕೆ ಸೇರಿ ಇನ್ನಿತರ ಪ್ರಮುಖ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ 2018ರಲ್ಲಿ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 2018 ರಿಂದ 2022ರ ವರೆಗೆ 4 ವರ್ಷಗಳ ಕಾಲ ಸುದೀರ್ಘ‌ವಾಗಿ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದಿತ್ತು. ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖೀಸಿದ್ದ ಸಾಕ್ಷ್ಯಾಧಾರ, ಗಾಯಗೊಂಡವರು ಹಾಗೂ ಮೃತ ದಸ್ತಗಿರ್‌ ಪತ್ನಿ ಕೋರ್ಟ್‌ನಲ್ಲಿ ನುಡಿದ ಸಾಕ್ಷ್ಯವನ್ನು ಪರಿಗಣಿಸಿದ ನ್ಯಾಯಾಧೀಶ ಆರ್‌.ರವೀಂದ್ರ ಅವರು ಅ.14ರಂದು ಕುನಾಲ್‌ನನ್ನು ಅಪರಾಧಿ ಎಂದು ಪರಿಗಣಿಸಿ, ಆತನಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 2.5 ಲಕ್ಷ ರೂ. ದಂಡ ವಿಧಿಸಿದ್ದರು. ಸರ್ಕಾರದ ಪರ ಕೆ.ಡಿ.ಸುರೇಶ್‌ ವಾದ ಮಂಡಿಸಿದ್ದರು.

ಜಾಮೀನಿನ ಮೇಲೆ ಹೊರ ಬಂದಿದ್ದ : ತೀವ್ರ ಸ್ವರೂಪದ ರಸ್ತೆ ಅಪಘಾತವಾಗಿದ್ದರೂ ಕಂಗೆಡದ ಕುನಾಲ್‌ ಮತ್ತೆ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಿದ್ದ. ಆತಂಕಗೊಂಡ ಸಾರ್ವಜನಿಕರು ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯ ಪ್ರವೃತ್ತರಾದ ಪೊಲೀಸರು ಕುನಾಲ್‌ ಕಾರನ್ನು ಬೆನ್ನಟ್ಟಿ ವಶಕ್ಕೆ ಪಡೆದು ಆಲ್ಕೋ ಮೀಟರ್‌ನಲ್ಲಿ ಪರೀಕ್ಷಿಸಿದ್ದರು. ಆ ವೇಳೆ ಅತಿಯಾಗಿ ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದು ಧೃಢಪಟ್ಟಿತ್ತು. ಕೂಡಲೇ ಪೊಲೀಸರು ಕುನಾಲ್‌ನನ್ನು ಬಂಧಿಸಿ ಜೈಲಿಗಟ್ಟಿದ್ದರು. ಆದರೆ, ತನ್ನ ಪ್ರಭಾವ ಬಳಿಸಿದ್ದ ಕುನಾಲ್‌ ಕೆಲವೇ ದಿನಗಳಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರ ಬಂದಿದ್ದ.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.