ನಿವೃತ್ತ ಇನ್ಸ್ಪೆಕ್ಟರ್ಗೆ 4 ವರ್ಷ ಜೈಲು, 50 ಲಕ್ಷ ರೂ. ದಂಡ
Team Udayavani, Aug 3, 2022, 7:34 PM IST
ಬೆಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪದಲ್ಲಿ ಲೋಕಾಯುಕ್ತ ಪೊಲೀಸರಿಂದ ದಾಳಿಗೊಳಗಾಗಿದ್ದ ಸಿಸಿಬಿ ನಿವೃತ್ತ ಪೊಲೀಸ್ ಇನ್ಸ್ಪೆಕ್ಟರ್ಗೆ ಲೋಕಾಯುಕ್ತ ನ್ಯಾಯಾಲಯ 4 ವರ್ಷ ಶಿಕ್ಷೆ, 50 ಲಕ್ಷ ರೂ. ದಂಡ ಹಾಗೂ ಆತನ ಪತ್ನಿಗೆ 3 ವರ್ಷದ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಸಂಜಯ್ ನಗರದ ನಿವಾಸಿ ಶಮಿ ಉರ್ ರೆಹೆಮಾನ್ (67), ಆತನ ಪತ್ನಿ ಬಿಲ್ಕಿಶ್ ಜಹಾನ್ ಅಪರಾಧಿಗಳು. ಅಪರಾಧಿ ಶಮಿ 2006ರಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ಆಗಿದ್ದ ಸಂದರ್ಭದಲ್ಲಿ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪ ಕೇಳಿ ಬಂದಿತ್ತು. 2006 ಮಾ.14ರಂದು ಶಮಿ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದರು. ತನಿಖೆ ವೇಳೆ ಶಮಿ ಹಾಗೂ ಆತನ ಪತ್ನಿ ಬಿಲ್ಕಿಶ್ ಜಹಾನ್ ಆದಾಯಕ್ಕಿಂತ 79,79,966 ರೂ. (ಶೇ.230.96) ಅಧಿಕ ಆಸ್ತಿ ಹೊಂದಿರುವುದು ಕಂಡು ಬಂದಿತ್ತು.
ಜತೆಗೆ, ಪತ್ನಿಯ ಹೆಸರಿನಲ್ಲಿ ಬೇನಾಮಿ ಆಸ್ತಿ ಹೊಂದಿರುವುದು ಪತ್ತೆಯಾಗಿತ್ತು. ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧೀ ಶ ಕೆ.ಲಕ್ಷ್ಮೀನಾರಾಯಣ್ ಭಟ್ ಪ್ರಕರಣದ ವಿಚಾರಣೆ ನಡೆಸಿದಾಗ ಶಮಿ ಹಾಗೂ ಆತನ ಪತ್ನಿ ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವುದು ದೃಢಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ಶಮಿಗೆ 4 ವರ್ಷ ಜೈಲು ಹಾಗೂ 50 ಲಕ್ಷ ರೂ. ದಂಡ, ದಂಡ ಪಾವತಿಸದಿದ್ದರೆ ಹೆಚ್ಚುವರಿಯಾಗಿ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಇನ್ನು ಆತನ ಪತ್ನಿ ಬಿಲ್ಕಿಶ್ ಜಹಾನ್ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ, ದಂಡ ಪಾವತಿಸದಿದ್ದರೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.