ಜಲ್ಲಿಕಟ್ಟು ರೀತಿ “ಕಂಬಳ’ ಕ್ಕಾಗಿ ಹೋರಾಟ
Team Udayavani, Jan 23, 2017, 3:45 AM IST
ಬೆಂಗಳೂರು: ತಮಿಳುನಾಡಿನಲ್ಲಿ ಜಲ್ಲಿಕಟ್ಟು ನಡೆಸಲು ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವ ಬೆನ್ನಲ್ಲೇ, ರಾಜ್ಯದಲ್ಲಿಯೂ ಹೈಕೋರ್ಟ್‌ನಿಂದ ನಿರ್ಬಂಧಕ್ಕೆ ಒಳಗಾಗಿರುವ ಕರಾವಳಿ ಭಾಗದ ಜನಪದ ಕ್ರೀಡೆ ಕಂಬಳ ಪುನಾರಂಭಕ್ಕೆ ಒತ್ತಾಯಿಸಿ ಭಾನುವಾರ ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯಿತು.
ಫೇಸ್‌ಬುಕ್, ವಾಟ್ಸ್‌ಆ್ಯಪ್, ಟ್ವಿಟರ್ ಮೂಲಕ ನಾಡಿನ ಜನ ಪ್ರತಿನಿಧಿಗಳು, ಸಿನಿಮಾ ತಾರೆಯರು, ಸಾಹಿತಿಗಳು ಸೇರಿ ವಿವಿಧ ಕ್ಷೇತ್ರಗಳ ಗಣ್ಯರು ಕಂಬಳಕ್ಕೆ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಫೇಸ್‌ಬುಕ್‌ನಲ್ಲಿ “ಸೇವ್ ಕಂಬಳ’ ಹೆಸರಿನಲ್ಲಿ ಅಭಿಯಾನ ಶುರುವಾಗಿದ್ದು, ಈ ಗ್ರೂಪ್‌ನ ಕೆಲವು ಸದಸ್ಯರು ಭಾನುವಾರ ಬೆಳಗ್ಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಕಂಬಳ ನಿಷೇಧದ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಬಿಜೆಪಿ ಬೆಂಬಲ:
ಕಂಬಳಕ್ಕೆ ಬಿಜೆಪಿ ಬೆಂಬಲ ಸೂಚಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಈ ಬಗ್ಗೆ ಟ್ವಿಟ್ ಮಾಡಿದ್ದಾರೆ. ಕಂಬಳ ನಿಷೇಧ ಹಿಂಪಡೆಯಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಮಾಜಿ ಸಚಿವ ಎಸ್.ಸುರೇಶ್ ಕುಮಾರ್, ನಟ ಜಗ್ಗೇಶ್ ಸೇರಿದಂತೆ ಹಲವರು ಕಂಬಳ ಪುನಾರಂಭಕ್ಕೆ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಕರ್ನಾಟಕ ಕಾವಲುಪಡೆ ಕಾರ್ಯಕರ್ತರು ಕಂಬಳಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ದೆಹಲಿ ಕರ್ನಾಟಕ ಸಂಘ ಕೂಡ ಭಾನುವಾರ ಸಾಂಕೇತಿಕ ಪ್ರತಿಭಟನೆ ನಡೆಸಿತು.
ಜ.30ಕ್ಕೆ ಕಂಬಳ ತಡೆ ತೆರವು ಅರ್ಜಿ ವಿಚಾರಣೆ
ಕಂಬಳ ನಿಷೇಧಿಸುವಂತೆ ಕೋರಿ ಪೀಪಲ್ ಫಾರ್ ಎಥಿಕಲ್ ಟ್ರೀಟೆ¾ಂಟ್ ಆಫ್ ಅನಿಮಲ್ಸ್ (ಪೆಟಾ) 2016ರ ಫೆಬ್ರವರಿಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ಪೀಠ, ಅರ್ಜಿ ವಿಚಾರಣೆ ಮುಗಿಯುವವರೆಗೂ ಕಂಬಳ ಆಯೋಜನೆಗೆ ಅನುಮತಿ ನೀಡಬಾರದೆಂದು ಆದೇಶಿಸಿತ್ತು. ಈ ತಡೆಯಾಜ್ಞೆ ತೆರವು ಕೋರಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಂಬಳ ಸಮಿತಿ ಮಧ್ಯಂತರ ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ಜ.30ರಂದು ನಡೆಯಲಿದೆ.
ಕಂಬಳ ಸಮಿತಿ ಸಭೆ
ಮೂಡಬಿದಿರೆ: ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಮತ್ತು ಸ್ಥಳೀಯ ಕೋಟಿ ಚೆನ್ನಯ ಕಂಬಳ ಸಮಿತಿ ಸಹಭಾಗಿತ್ವದಲ್ಲಿ ಮೂಡಬಿದಿರೆಯಲ್ಲಿ ಜ.28ರಂದು “ಕಂಬಳ’ ನಡೆದೇ ನಡೆಯುತ್ತದೆ ಎಂದು ಕಂಬಳ ಸಮಿತಿ ಹೇಳಿದೆ. ಕೋರ್ಟ್ ಒಪ್ಪಿದರೆ ವಿಜಯೋತ್ಸವ ಸ್ವರೂಪಿ ಕಂಬಳ ಇಲ್ಲದೇ ಇದ್ದರೆ, “ಪ್ರತಿಭಟನಾತ್ಮಕ ಕಂಬಳ’ ನಡೆಯಲಿದೆ ಎಂದು ಸಮಿತಿ ತಿಳಿಸಿದೆ. ಭಾನುವಾರ ಮೂಡಬಿದಿರೆಯಲ್ಲಿ ಕಾಸರಗೋಡು ಸೇರಿದಂತೆ ಅವಿಭಜಿತ ದ.ಕ. ಜಿಲ್ಲಾ ಕಂಬಳ ಸಮಿತಿ ವತಿಯಿಂದ ತುರ್ತು ಸಭೆ ನಡೆಯಿತು. ಕಂಬಳ ಆರಂಭಕ್ಕೆ ಅಗತ್ಯವಿರುವ ಹೋರಾಟಕ್ಕೆ ತಾವು ಜನತೆಯ ಪರವಾಗಿದ್ದು ಜೈಲಿಗೆ ಹೋಗಲೂ ಸಿದ್ಧ ಎಂದು ಶಾಸಕ, ಮೂಡಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಕೆ. ಅಭಯಚಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.