ಜ. 15ರಿಂದ ಶಿರಾಡಿ ಘಾಟ್ ಕಾಮಗಾರಿ
Team Udayavani, Dec 21, 2017, 6:10 AM IST
ಬೆಂಗಳೂರು: ಶಿರಾಡಿ ಘಾಟ್ ಕಾಮಗಾರಿ ಆರಂಭ ವಿಚಾರದಲ್ಲಿ ಇದ್ದ ಗೊಂದಲಗಳು ಬಗೆಹರಿದಿದ್ದು, ಜ.15ರಿಂದ ಕಾಮಗಾರಿ ಆರಂಭವಾಗಲಿದೆ. ಈ ಮೊದಲು ನ. 1ರಿಂದ ಕಾಮಗಾರಿ ಆರಂಭವಾಗಲಿದೆ ಎನ್ನಲಾಗಿತ್ತು. ನಂತರ ಜ. 1ರಿಂದ ಆರಂಭಿಸುವುದಾಗಿ ಹೇಳಲಾಗಿತ್ತು. ಇದೀಗ ಟೆಂಡರ್ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಜ. 15ರಿಂದ ಕಾಮಗಾರಿ ಆರಂಭವಾಗಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.15ರಿಂದ ಕಾಮಗಾರಿ ಆರಂಭವಾಗಿ ಮೂರು ತಿಂಗಳಲ್ಲಿ
ಮುಗಿಯಲಿದೆ. ಈ ಅವಧಿಯಲ್ಲಿ ಆ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು ಎಂದರು. ಶಿರಾಡಿ ಘಾಟ್‌ನಲ್ಲಿ ಸುರಂಗ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಲೂ ಮಾತುಕತೆ ಮುಂದುವರಿದಿದೆ. ಸುಮಾರು 15 ಸಾವಿರ ಕೋಟಿ ರೂ. ವೆಚ್ಚದ ಸುರಂಗ ರಸ್ತೆ ನಿರ್ಮಾಣಕ್ಕೆ ನೆರವು ನೀಡಲು ಜೈಕಾ ಬ್ಯಾಂಕ್ ಮುಂದೆ ಬಂದಿದೆ. ಆದರೆ, ಇದು ಪರಿಸರ ಸ್ನೇಹಿ ಸುರಂಗ ರಸ್ತೆಯಾಗಿಸಲು
ಪರಿಸರ ಇಲಾಖೆ ಜತೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Tabla Maestro; ಉಸ್ತಾದ್ ಜಾಕೀರ್ ಹುಸೇನ್ ದೈವೀ ಪುರುಷ
Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ
MUST WATCH
ಹೊಸ ಸೇರ್ಪಡೆ
ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Udupi: ಯಕ್ಷಗಾನದಲ್ಲಿ ಭಗವದ್ಗೀತೆ ಪ್ರಯೋಗ: ಡಾ| ಪ್ರಭಾಕರ್ ಜೋಶಿ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.