ರಾಮಮಂದಿರ ನಿರ್ಮಾಣಕ್ಕೆ ವಿವಿಧೆಡೆ ಜನಾಗ್ರಹ ಸಭೆ ಇಂದು
Team Udayavani, Nov 25, 2018, 7:00 AM IST
ಬೆಂಗಳೂರು: ಅಯೋಧ್ಯೆ ಶ್ರೀರಾಮ ಜನ್ಮಭೂಮಿಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್
ಬೆಂಗಳೂರು, ಹುಬ್ಬಳ್ಳಿ, ಮಂಗಳೂರಿನಲ್ಲಿ ಭಾನುವಾರ ಜನಾಗ್ರಹ ಸಭೆ ಹಮ್ಮಿಕೊಂಡಿದೆ.
ಬೆಂಗಳೂರಿನಲ್ಲಿ ಬಸವನಗುಡಿಯ ನ್ಯಾಷನಲ್ ಹೈಸ್ಕೂಲ್ ಮೈದಾನದಲ್ಲಿ ಸಂಜೆ 4 ಗಂಟೆಗೆ ಜನಾಗ್ರಹ ಸಭೆ ನಡೆಯಲಿದೆ. ಮೈಸೂರು, ತುಮಕೂರು, ಮಂಡ್ಯ,ಕೋಲಾರ ಭಾಗದ ರಾಮ ಭಕ್ತರು,ಬೆಂಬಲಿಗರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು,ಸುಮಾರು 1ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ.
ಸಭೆಯಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಆದಿಚುಂಚನ ಗಿರಿ ಮಠದ ನಿರ್ಮಲಾ ನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಹರಿದ್ವಾರ ಪರಮಾರ್ಥ ಆಶ್ರಮದ ಪರಮಾಧ್ಯಕ್ಷ ಚಿನ್ಮಯಾನಂದ ಸರಸ್ವತಿ ಮಹಾರಾಜ್,ಆರ್ಎಸ್ಎಸ್ ಸಹ ಸರಕಾರ್ಯವಾಹ ಭಯ್ನಾಜಿ, ವಿ.ಹಿಂ.ಪರಿಷತ್ನ ಅಂತಾರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮಿಲಿಂದಜಿ ಪರಾಂಡೆ ಪಾಲ್ಗೊಳ್ಳಲಿದ್ದಾರೆ. ನಗರದ ನಾನಾ ಭಾಗಗಳಿಂದ ನ್ಯಾಷನಲ್ ಹೈಸ್ಕೂಲ್ ಮೈದಾನವರೆಗೆ ಶೋಭಾಯಾತ್ರೆ ನಡೆಯಲಿದೆ. ಮಂಗಳೂರಿ ನಲ್ಲಿ ನಗರದ ಕೇಂದ್ರ ಮೈದಾನದಲ್ಲಿ ಸಭೆ ನಡೆಯಲಿದೆ.
ಸಭೆಯಲ್ಲಿ ಭಜ ರಂಗದಳದ ರಾಷ್ಟ್ರೀಯ ಸಂಯೋಜಕ್ ಸೋಹನ್ ಸಿಂಗ್ ಸೋ ಲಂಕಿ ಪ್ರಮುಖ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಜ್ಯೋತಿ ಜಂಕ್ಷನ್ನಿಂದ ಬೃಹತ್ ಶೋಭಾಯಾತ್ರೆ ಹೊರಡಲಿದೆ. ಇದೇ ವೇಳೆ, ಹುಬ್ಬಳ್ಳಿಯಲ್ಲೂ ಜನಾಗ್ರಹ ಸಭೆ ನಡೆಯಲಿದೆ. ಅಯೋಧ್ಯೆ, ನಾಗಪುರ ದಲ್ಲೂ ಸಭೆ ನಡೆಯುತ್ತಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಸಿ.ಟಿ.ರವಿ ನಕಲಿ ಎನ್ಕೌಂಟರ್ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.