ಜೈಲು ಪಾಲಾದ ಜನಾರ್ದನ ರೆಡ್ಡಿ ಆಪ್ತ ಅಲಿಖಾನ
Team Udayavani, Nov 21, 2018, 6:00 AM IST
ಬೆಂಗಳೂರು: ಆ್ಯಂಬಿಡೆಂಟ್ ಕಂಪೆನಿಯ ಬಹುಕೋಟಿ ವಂಚನೆ ಪ್ರಕರಣದ ಐದನೇ ಆರೋಪಿ ಅಲಿಖಾನ್‌ಗೆ ನಿರೀಕ್ಷಣಾ ಜಾಮೀನು ನೀಡಲು ಸೆಷನ್ಸ್ ಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಬಂಧನ ಭೀತಿಯಿಂದ 1ನೇ ಎಸಿ ಎಂಎಂ ನ್ಯಾಯಾಲಯಕ್ಕೆ ಅಲಿಖಾನ್ ಶರಣಾಗಿದ್ದಾರೆ. ನ್ಯಾಯಾಲಯ ಅಲಿಖಾನ್‌ಗೆ ನ. 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಆ್ಯಂಬಿಡೆಂಟ್ ಕಂಪೆನಿ ಮೂಲಕ 57 ಕೆ.ಜಿ ಚಿನ್ನದ ಗಟ್ಟಿ ಸ್ವೀಕರಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಲುಪಿಸಿರುವ
ಗಂಭೀರ ಆರೋಪ ಎದುರಿಸುತ್ತಿರುವ ಅಲಿಖಾನ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅಲಿಖಾನ್ ಪರ ವಕೀಲರು ಹಾಗೂ ಸರ್ಕಾರಿ ಅಭಿಯೋಜಕರ ವಾದ ಪ್ರತಿ ವಾದ ಅಲಿಸಿ ಆದೇಶ ಕಾಯ್ದಿರಿಸಿದ್ದ 61ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ ಮಂಗಳವಾರ ಅಲಿಖಾನ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಆದೇಶ ನೀಡಿದರು. ಜತೆಗೆ, ಅರ್ಜಿದಾರರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ. ಹೀಗಾಗಿ, ಆರೋಪಿಗೆ ನಿರೀಕ್ಷಣಾ ಜಾಮೀನು ಮುಂಜೂರು ಮಾಡಬಾರದು ಎಂಬ ಅಭಿಯೋಜನಾ ತಕರಾರುಗಳನ್ನು
ನ್ಯಾಯಾಧೀಶರು ಮಾನ್ಯ ಮಾಡಿದ್ದಾರೆ.
ಪ್ರಕರಣದಲ್ಲಿ ಸಿಸಿಬಿ ಪರ ವಾದಿಸಿದ್ದ ಸರ್ಕಾರಿ ಅಭಿಯೋಜಕಿ ಶೈಲಜಾ ಕೃಷ್ಣನಾಯಕ್ ಮಾತನಾಡಿ, ಪ್ರಕರಣದ 5ನೇ ಆರೋಪಿಯಾಗಿರುವ ಅಲಿಖಾನ್ ಆ್ಯಂಬಿಡೆಂಟ್ ಕಂಪೆನಿಯಿಂದ 57 ಕೆ.ಜಿ ಚಿನ್ನ ಹಾಗೂ ನಗದು ಪಡೆದಿದ್ದಾರೆ. ಜತೆಗೆ, ಆರೋಪಿ ಎಸಿಎಂಎಂ ಕೋರ್ಟ್‌ನಲ್ಲಿ ಆ್ಯಂಬಿಡೆಂಟ್ ಮೂಲಕ ಪಡೆದಿರುವ ಚಿನ್ನ ಹಾಗೂ ನಗದು ವಾಪಸ್ ನೀಡುವುದಾಗಿ ಅಫಿಡವಿಟ್ ಸಲ್ಲಿಸಿದ್ದಾರೆ. ಈ ಅಂಶ ಅವರು ಚಿನ್ನ ಹಾಗೂ ನಗದು ಪಡೆದಿರುವುದರ ಸಂಕೇತವಾಗಿದೆ. ಹೀಗಾಗಿ ಆತನಿಂದ ಚಿನ್ನ, ನಗದು ಜಪ್ತಿ
ಮಾಡಬೇಕಿದ್ದು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಅಗತ್ಯವಿದೆ ಎಂಬ ಇನ್ನಿತರೆ ಅಂಶಗಳನ್ನು ಪರಿಗಣಿಸಿ ಆರೋಪಿಯ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ವಜಾಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Dharwad: ಅಪ್ಪ ಪಡೆದ 1 ಲಕ್ಷ ರೂ. ಸಾಲಕ್ಕೆ ಮಗನ ಕಾಲಿಗೆ ಸರಪಳಿ!
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.