ಜನಾರ್ದನ ರೆಡ್ಡಿ ಜಾಮೀನು: ಕೋರ್ಟ್ ಇಂದು ನಿರ್ಧಾರ
Team Udayavani, Nov 14, 2018, 7:29 AM IST
ಬೆಂಗಳೂರು: ಆ್ಯಂಬಿಡೆಂಟ್ ಕಂಪೆನಿ ಮಾಲೀಕ ಸೈಯದ್ ಅಹಮದ್ ಫರೀದ್‌ನಿಂದ 57.ಕೆ.ಜಿ. ಚಿನ್ನದ ಗಟ್ಟಿ ಪಡೆದುಕೊಂಡ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಜಾಮೀನು ಅರ್ಜಿಯ ಆದೇಶ ನ್ಯಾಯಾಲಯ ಇಂದು ಪ್ರಕಟಿಸಲಿದೆ.
ಪ್ರಕರಣದಲ್ಲಿ ಜಾಮೀನು ಕೋರಿ ಜನಾರ್ದನ ರೆಡ್ಡಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಯನ್ನು ಮಂಗಳವಾರ ನಡೆಸಿದ 1ನೇ ಎಸಿಎಂಎಂ ನ್ಯಾಯಾಲಯ, ರೆಡ್ಡಿ ಪರ ವಕೀಲರ ವಾದ ಹಾಗೂ ಸಿಸಿಬಿ ಪರ ವಕೀಲರ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶ
ಬುಧವಾರಕ್ಕೆ ಕಾಯ್ದಿರಿಸಿ ವಿಚಾರಣೆ ಮುಂದೂಡಿತು. ರೆಡ್ಡಿ ಪರ ವಕೀಲ ಸಿ.ಎಚ್. ಹನುಮಂತರಾಯ ಅವರು ವಾದಿಸಿ, ಜನಾರ್ದನ ರೆಡ್ಡಿ ವಿರುದ್ಧ ಸಿಸಿಬಿ ಪೊಲೀಸರು ಯಾವುದೇ ಸಾಕ್ಷ್ಯಾಧಾರಗಳನ್ನು ಹಾಜರುಪಡಿಸಿಲ್ಲ. ಕೇವಲ ಹೇಳಿಕೆಗಳ ಆಧಾರದಲ್ಲಿ ಬಂಧಿಸಿದ್ದಾರೆ. ಅಲ್ಲದೆ, ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣದ 5ನೇ ಆರೋಪಿಯಿಂದ ಜಪ್ತಿ ಮಾಡಿಕೊಳ್ಳಬೇಕು. ರೆಡ್ಡಿ 6ನೇ ಆರೋಪಿಯಾಗಿದ್ದಾರೆ. ಹೀಗಾಗಿ, ಕಸ್ಟಡಿಗೆ ಕೇಳುವ ಗೋಜಿಗೆ ಹೋಗದ ಸಿಸಿಬಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದರ ಅರ್ಥ ಅವರ ವಿಚಾರಣೆ ಪೂರ್ಣಗೊಂಡಿದೆ ಎಂಬುದಾಗಿದೆ. ಈ ಎಲ್ಲ ಅಂಶಗಳಿಂದ ರಾಜಕೀಯ ವೈಷಮ್ಯ ದುರುದ್ದೇಶದಿಂದ ರೆಡ್ಡಿ ಅವರನ್ನು ಬಂಧಿಸಿರುವುದು ಗೊತ್ತಾಗಲಿದೆ. ಹೀಗಾಗಿ ಜಾಮೀನು ಮುಂಜೂರು ಮಾಡಬೇಕು ಎಂದು ಕೋರಿದರು.
ವಿಚಾರಣೆ ವೇಳೆ ರೆಡ್ಡಿ ಪರ ವಕೀಲರ ವಾದ ಆಲಿಸಿದ ನ್ಯಾಯಾಲಯ, ಅರ್ಜಿದಾರ ರೆಡ್ಡಿಗೂ ಆ್ಯಂಬಿಡೆಂಟ್ ಕಂಪೆನಿಗೂ ನೇರ ಸಂಬಂಧವಿದೆಯೇ? ಅರ್ಜಿದಾರರ ವಿರುದ್ಧ ಯಾರಾದರೂ ಪ್ರತ್ಯೇಕ ದೂರು ನೀಡಿದ್ದಾರೆಯೇ? ಅಥವಾ ಅರ್ಜಿದಾರ ಯಾರಿಂದಾದರೂ ಹಣ ಪಡೆದಿರುವ ಬಗ್ಗೆ ದಾಖಲೆಗಳು ಲಭ್ಯವಾಗಿಯೇ? ವಿಚಾರಣೆ ವೇಳೆ ಇ.ಡಿ ಹೆಸರು ದುರ್ಬಳಕೆ ಮಾಡಿ ಕೊಳ್ಳಲಾಗಿದೆ ಎಂದು ಕಂಡು ಬಂದಿದೆ. ಆದರೆ, ವಂಚನೆ ಸಂಬಂಧ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದೀರಲ್ಲ ಎಂದು ಸಿಸಿಬಿಯನ್ನು ನ್ಯಾಯಾಲಯ ಪ್ರಶ್ನಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Max movie review: ಮಾಸ್ ಮನಸುಗಳಿಗೆ ʼಮ್ಯಾಕ್ಸ್ʼ ಅಭಿಷೇಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.