ಜನವರಿ 22ರಿಂದ 24ನೇ ಕೋಟಿ ಗಾಯತ್ರಿ ಜಪ ಮಹಾಯಜ್ಞ
Team Udayavani, Oct 27, 2017, 11:03 AM IST
ಬೆಂಗಳೂರು: ಗಾಯತ್ರಿ ತಪೋಭೂಮಿ ಚಾರಿಟಬಲ್ ಟ್ರಸ್ಟ್ ಮತ್ತು ಗಾಯತ್ರಿ ಸೇವಾ ಸಮಿತಿಯಿಂದ 2018ರ ಜನವರಿ 22ರಿಂದ 29ರವರೆಗೆ 24ನೇ ಕೋಟಿ ಗಾಯತ್ರಿ ಜಪ ಮಹಾಯಜ್ಞ ಹಮ್ಮಿಕೊಳ್ಳಲಾಗಿದೆ.
ಸಮಾಜದ ಏಳಿಗೆಗಾಗಿ ಹಾಗೂ ನೈಸರ್ಗಿಕ ವಿಕೋಪ ಸಂಭವಿಸದಿರಲಿ ಎಂಬ ಉದ್ದೇಶಕ್ಕಾಗಿ 45 ಹೋಮಕುಂಡಗಳಲ್ಲಿ ಈ ಮಹಯಜ್ಞ ಹಮ್ಮಿಕೊಳ್ಳಲಾಗಿದ್ದು, ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ, ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಅನೇಕ ಸ್ವಾಮೀಜಿಗಳು ಈ ಮಹಾಯಜ್ಞಕ್ಕೆ ಸಾಕ್ಷಿಯಾಗಲಿದ್ದಾರೆ ಎಂದು ಗಾಯತ್ರಿ ಸೇವಾ ಸಮಿತಿ ಅಧ್ಯಕ್ಷ ವಿನಾಯಕ ಆಕಳವಾಡಿ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಒಟ್ಟಾರೆ ಎರಡು ಲಕ್ಷ ಚದರಡಿ ಮಹಾಯಜ್ಞ ಉತ್ಸವಕ್ಕೆ ಮೀಸಲಿಡಲಾಗಿದ್ದು, ಇದರಲ್ಲಿ 30 ಸಾವಿರ ಚದರಡಿಯಲ್ಲಿ ಯಜ್ಞ ಮಂಟಪ ಸಿದ್ಧಗೊಳ್ಳಲಿದೆ. ಯಾಗಕ್ಕೆ ಸಂಪೂರ್ಣ ಸಾವಯವ ಪದಾರ್ಥಗಳನ್ನು ಬಳಸಲಾಗುವುದು. ಸುಮಾರು ಎರಡು ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಎಂಟು ದಿನಗಳ ಉತ್ಸವದಲ್ಲಿ ನಿತ್ಯ 25 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುವುದು.
ಎರಡು ಸಾವಿರ ಜನರಿಗೆ ಉಳಿದುಕೊಳ್ಳುವ ವ್ಯವಸ್ಥೆ ಮಾಡಲಾಗುವುದು. ಸುಮಾರು 5ರಿಂದ 6 ಕೋಟಿ ರೂ. ವೆಚ್ಚ ಅಂದಾಜಿಸಲಾಗಿದೆ ಎಂದು ಅವರು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಶ್ರೀರಂಗಪಟ್ಟಣದ ವೇದಮೂರ್ತಿ ಡಾ.ಭಾನುಪ್ರಕಾಶ್ ಶರ್ಮಾ, ಸಮಿತಿ ಉಪಾಧ್ಯಕ್ಷ ಅಶೋಕ ಹರಪನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.