ಜಿಲ್ಲಾ ಪ್ರಮುಖರೊಂದಿಗೆ ಜಾವಡೇಕರ್ ಸಭೆ
Team Udayavani, Oct 9, 2017, 11:55 AM IST
ಬೆಂಗಳೂರು: ರಾಜ್ಯ ವಿಧಾನಸಭೆಗೆ ಮುಂದಿನ ವರ್ಷ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತೆಗಳ ಕುರಿತಂತೆ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ಭಾನುವಾರ ಪಕ್ಷದ ಬೆಂಗಳೂರು ನಗರ ಮತ್ತು ಮಹಾನಗರ ಜಿಲ್ಲೆಗಳ ಪ್ರಮುಖರೊಂದಿಗೆ ಪ್ರತ್ಯೇಕ ಸಭೆ ನಡೆಸಿದ್ದಾರೆ.
ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ನೋಂದಣಿ ಮತ್ತು ಬೂತ್ ಕಮಿಟಿಗಳ ರಚನೆ ಕುರಿತಂತೆ ಅಮಿತ್ ಶಾ ಅವರು ನೀಡಿರುವ ನಿರ್ದೇಶನದಂತೆ ಜಿಲ್ಲಾ ಘಟಕಗಳು ಏನೇನು ಕ್ರಮ ಕೈಗೊಂಡಿದೆ ಎಂಬ ಕುರಿತು ಪ್ರಮುಖರಿಂದ ಮಾಹಿತಿ ಪಡೆದ ಜಾವಡೇಕರ್, ಈ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸುವಂತೆ ಸಲಹೆ ನೀಡಿದ್ದಾರೆ.
ಮತದಾರರ ಪಟ್ಟಿ ನೋಂದಣಿ ವೇಳೆ ಆಡಳಿತ ಪಕ್ಷ ಸಾಕಷ್ಟು ಅಕ್ರಮಗಳನ್ನು ಎಸಗುವ ಸಾಧ್ಯತೆ ಇದೆ. ಆದ್ದರಿಂದ ಮತದಾರರ ಪಟ್ಟಿಯ ಮೇಲೆ ಒಂದು ಕಣ್ಣಿಟ್ಟಿರಬೇಕು. ಹೊಸಬರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಿಸುವುದರ ಜತೆಗೆ ಆ ಪಟ್ಟಿಯಲ್ಲಿ ಅನರ್ಹ ಮತದಾರರು ಇಲ್ಲದಂತೆಯೂ ಗಮನಹರಿಸಬೇಕು ಎಂದು ಜಾವಡೇಕರ್ ಅವರು ನಿರ್ದೇಶನ ನೀಡಿದ್ದಾರೆ.
ಬೆಂಗಳೂರು ನಗರ ಮತ್ತು ಮಹಾನಗರ ಜಿಲ್ಲೆಗಳಲ್ಲಿ ಬೂತ್ ಕಮಿಟಿಗಳ ರಚನೆ ಬಹುತೇಕ ಪೂರ್ಣಗೊಂಡಿದೆಯಾದರೂ ಸಮಿತಿ ಸದಸ್ಯರ ಸಂಖ್ಯೆ ಹೆಚ್ಚಿಸಿ ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದಳಿದ ವರ್ಗದವರನ್ನು ಸೇರಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಅದರಂತೆ ಕ್ರಮ ಕೈಗೊಳ್ಳಬೇಕು. ಜತೆಗೆ ಈ ಸಮಿತಿ ಸದಸ್ಯರು ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು ಎಂದು ತಾಕೀತು ಮಾಡಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.