350 ಹಾಸಿಗೆಗಳ ಜಯದೇವ ಆಸ್ಪತ್ರೆ ಇಂದು ಲೋಕಾರ್ಪಣೆ
Team Udayavani, Nov 17, 2021, 10:53 AM IST
ಬೆಂಗಳೂರು: ನಗರದ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಇನ್ಫೊಸಿಸ್ ಫೌಂಡೇಷನ್ ವತಿಯಿಂದ ನಿರ್ಮಿಸಿರುವ 350 ಹಾಸಿಗೆಗಳ ಸಾಮರ್ಥ್ಯದ ನೂತನ ಆಸ್ಪತ್ರೆಯು ಬುಧವಾರ ಲೋಕಾರ್ಪಣೆಗೊಳ್ಳುತ್ತಿದೆ.
ಮಧ್ಯಾಹ್ನ 3.30ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಸ್ಪತ್ರೆಯನ್ನು ಉದ್ಘಾಟಿಸಲಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಇನ್ಫೋಸಿಸ್ ಸಂಸ್ಥಾಪಕ ಎನ್. ಆರ್.ನಾರಾಯಣ ಮೂರ್ತಿ, ಇನ್ಫೋಸಿಸ್ ಫೌಂಡೇ ಷನ್ ಅಧ್ಯಕ್ಷೆ ಸುಧಾ ಮೂರ್ತಿ, ಸಂಸದ ತೇಜಸ್ವಿ ಸೂರ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ:- ಲೈಂಗಿಕ ದೌರ್ಜನ್ಯ; ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು, ಭೌತಶಾಸ್ತ್ರ ಶಿಕ್ಷಕನ ಬಂಧನ
ಶಾಸಕಿ ಸೌಮ್ಯರೆಡ್ಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಆಸ್ಪತ್ರೆ ಆಡಳಿತ ಮಂಡಳಿ ಸದಸ್ಯರು, ಆರೋಗ್ಯ ಇಲಾಖೆ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್, ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಪಾಲ್ಗೊಳ್ಳಲಿದ್ದಾರೆ.
ವಿಶೇಷತೆಗಳು:-
ಇನ್ಫೊಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರಿಂದ ಆಸ್ಪತ್ರೆ ನಿರ್ಮಾಣಕ್ಕೆ ದೇಣಿಗೆ
36 ಗುಂಟೆ ವಿಸ್ತೀರ್ಣದಲ್ಲಿ 20 ತಿಂಗಳ ಕಾಮಗಾರಿ, ಅತ್ಯುತ್ತಮ ಕಟ್ಟಡ ನಿರ್ಮಾಣ
ಈಗಿರುವ ಆಸ್ಪತ್ರೆಗೂ ಹೊಸದಾಗಿ ನಿರ್ಮಿಸಿರುವ ಆಸ್ಪತ್ರೆಗೂ ಸಂಪರ್ಕ ಸೇತುವೆ ನಿರ್ಮಿಸಲಾಗಿದೆ.
ಹೊಸ ಆಸ್ಪತ್ರೆ ಹಾಸಿಗೆಗಳು ಸೇರಿ ಒಟ್ಟಾರೆ 1,750 ಹಾಸಿಗೆಗಳನ್ನು ಹೊಂದುವ ಮೂಲಕ ದೇಶದ ಅತ್ಯಂತ ದೊಡ್ಡ ಹೃದ್ರೋಗ ಆಸ್ಪತ್ರೆ ಎನ್ನುವ ಹೆಗ್ಗಳಿಕೆಗೆ ಜಯದೇವ ಹೃದ್ರೋಗ ಸಂಸ್ಥೆ ಪಾತ್ರ.
ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆವರೆಗೂ ತುರ್ತು/ಗಂಭೀರ ಚಿಕಿತ್ಸೆಗೆ ಪ್ರತಿ ಐದು ನಿಮಿಷಕ್ಕೊಬ್ಬ ರೋಗಿ ಬರುತ್ತಿದ್ದು, ಐಸಿಯು ಹಾಸಿಗೆಗಳ ಅವಶ್ಯಕತೆ ಹೆಚ್ಚಿತ್ತು. ಹೊಸ ಕಟ್ಟಡ ಹಾಸಿಗೆ ಸಮಸ್ಯೆಗೆ ಪರಿಹಾರ ನೀಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.