ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಅಧಿಸೂಚನೆ ಪ್ರಕಟ
Team Udayavani, May 18, 2018, 6:50 AM IST
ಬೆಂಗಳೂರು: ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯಕುಮಾರ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ದಿನಾಂಕ ಪ್ರಕಟಿಸಿ, ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಅಧಿಕೃತವಾಗಿ ಅದು ಮೇ 18ಕ್ಕೆ ಘೋಷಣೆಯಾಗಲಿದೆ. ಚುನಾವಣಾ ಆಯೋಗದ ಅಧಿಸೂಚನೆಯಂತೆ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಜೂನ್ 11ರಂದು ಮತದಾನ ನಡೆಯಲಿದ್ದು, ಜೂ.13ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ. ಇದಕ್ಕಾಗಿ ನಾಮಪತ್ರ ಸಲ್ಲಿಕೆಗೆ ಮೇ 25 ಕೊನೇ ದಿನಾಂಕವಾಗಿದ್ದು, ಮೇ 26ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.
ನಾಮಪತ್ರ ವಾಪಸ್ ಪಡೆಯಲು ಮೇ 28 ಕೊನೇ ದಿನವಾಗಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೆ ನಿಗದಿಯಾದಂತೆ ಜಯನಗರ ಕ್ಷೇತ್ರದಲ್ಲೂ ಮೇ 12ರಂದು ಮತದಾನ ನಡೆಯಬೇಕಿತ್ತು.
ಆದರೆ, ಬಿಜೆಪಿ ಅಭ್ಯರ್ಥಿ ಹಾಗೂ ಕ್ಷೇತ್ರದ ಹಾಲಿ ಶಾಸಕ ಬಿ.ಎನ್.ವಿಜಯಕುಮಾರ್ ನಿಧನರಾದ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲಾಗಿತ್ತು. ಈಗ ಬಿಜೆಪಿಯಿಂದ ಮಾತ್ರ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದು, ಉಳಿದ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದವರೇ ಆಗಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.