Jayanagar Hospital: ರೋಗಗ್ರಸ್ತ ಸ್ಥಿತಿಯಲ್ಲಿರುವ ಜಯನಗರ ಆಸ್ಪತ್ರೆ

Team Udayavani, Apr 11, 2023, 1:31 PM IST

Jayanagar Hospital: ರೋಗಗ್ರಸ್ತ ಸ್ಥಿತಿಯಲ್ಲಿರುವ ಜಯನಗರ ಆಸ್ಪತ್ರೆ

ಬೆಂಗಳೂರು: ಮುರಿದು ಬೀಳುವ ಸ್ಥಿತಿಯಲ್ಲಿ ರುವ ಹಳೆಯ ಗೋಡೆಗಳು, ಇದರ ಪಕ್ಕದಲ್ಲೇ ಕಸದ ರಾಶಿ, ಮಳೆ ಬಂದರೆ ಸೋರುವ ಛಾವಣಿ, ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳು…..

ಇದು ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಂಡು ಬಂದ ಅವ್ಯವಸ್ಥೆ ದೃಶ್ಯಗಳು…. 300 ಹಾಸಿಗೆಗಳಿರುವ ಜಯನಗರ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಪ್ರತಿದಿನ ಸಾವಿರಕ್ಕೂ ಅಧಿಕ ಹೊರ ರೋಗಿಗಳು, 100ಕ್ಕೂ ಹೆಚ್ಚಿನ ಒಳರೋಗಿ ಗಳು ಚಿಕಿತ್ಸೆಗೆ ಬರುತ್ತಾರೆ. ಆದರೆ, ಲೋಕೋ ಪಯೋಗಿ ವಿಭಾಗದ ನಿರ್ಲಕ್ಷ್ಯದಿಂದ ಆಸ್ಪತ್ರೆಯ ಕಟ್ಟಡಕ್ಕೆ ಮೂಲಭೂತ ಸೌಕರ್ಯ ಸಿಗದೇ ಶೋಚನೀಯ ಸ್ಥಿತಿ ಬಂದೊದಗಿದೆ. ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ವೈದ್ಯಾಧಿಕಾರಿಗಳು ಹಲವು ಬಾರಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯೂಡಿ) ಅಧಿಕಾರಿಗಳಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಮತ್ತೂಂದೆಡೆ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಪಿಡಬ್ಯೂಡಿ ವಿಭಾಗದ ಕಚೇರಿಯತ್ತ ಸಿಬ್ಬಂದಿ ಹಾಗೂ ಅಧಿಕಾರಿಗಳು ಮುಖ ಮಾಡುತ್ತಿಲ್ಲ. ಆಸ್ಪತ್ರೆಯಲ್ಲಿ ಜನ ಸಾಮಾನ್ಯರಿಗೆ ಸೂಕ್ತ ಆರೋಗ್ಯ ಸೇವೆ ಒದಗಿಸುತ್ತಿದ್ದರೂ ಇದೀಗ ಕಟ್ಟಡದ ಅವ್ಯವಸ್ಥೆ ಕಂಡು ರೋಗಿಗಳು ಇಲ್ಲಿ ಚಿಕಿತ್ಸೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ.

ಅವ್ಯವಸ್ಥೆಯಲ್ಲೇ ರೋಗಿಗಳಿಗೆ ಚಿಕಿತ್ಸೆ: ಆಸ್ಪ ತ್ರೆಯ ಒಂದೊಂದು ಕೊಠಡಿಗಳ ಪರಿಸ್ಥಿತಿಯೂ ಭಿನ್ನವಾಗಿದ್ದು, ಅವ್ಯವಸ್ಥೆಯಲೇ ದಿನ ದೂಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆಸ್ಪತ್ರೆಗೆ ದಾಖ ಲಾಗಿರುವ ಕೆಲ ರೋಗಿಗಳು ಆರೋಪಿಸಿದ್ದಾರೆ. ಬಹುತೇಕ ಗೋಡೆಗಳು ಬಿರುಕು ಬಿಟ್ಟಿದ್ದು, ಬೀಳುವ ಹಂತಗಳಲ್ಲಿವೆ. ಆಸ್ಪತ್ರೆ ಮುಂಭಾಗದಲ್ಲಿ ಮೇಲ್ಛಾವಣಿ ಕುಸಿಯುತ್ತಿದೆ. ಮೇಲ್ಛಾವಣಿಗಳಿಂದ ಮಣ್ಣು, ಸಿಮೆಂಟ್‌ ಸೋರಿಕೆಯಾಗಿ ಆಸ್ಪತ್ರೆಯಲ್ಲಿರುವ ರೋಗಿಗಳ ಕೊಠಡಿಗಳಲ್ಲಿ ದೂಳು ತುಂಬಿಕೊಂಡಿವೆ. ನಿರ್ವಹಣೆ ಇಲ್ಲದೇ ಅಲ್ಲಲ್ಲಿ ನೆಲ ಒಡೆದು ಹೋಗಿವೆ. ಇನ್ನು ಮಳೆ ಬಂದರೆ ಕೆಲ ಕೊಠಡಿಗಳಲ್ಲಿ ಛಾವಣಿ ಸೋರಿಕೆಯಾಗಿ ನೀರು ನಿಂತುಕೊಳ್ಳುತ್ತಿದೆ. ಆಸ್ಪತ್ರೆ ಹಿಂಭಾಗದಲ್ಲಿ ಕಸಗಳ ರಾಶಿ ಬಿದ್ದಿದ್ದು, ಇದನ್ನೂ ನಿರ್ವಹಣೆ ಮಾಡುತ್ತಿಲ್ಲ. ಆಸ್ಪತ್ರೆಯ ಕೆಲ ಕಿಟಕಿಗಳು ಒಡೆದು ಹೋಗಿವೆ. ಶೌಚಾಲಯಗಳಲ್ಲಿ ಶುಚಿತ್ವವಿಲ್ಲದೇ ದುರ್ವಾಸನೆಯಿಂದ ಕೂಡಿದ್ದು, ಮೂಗು ಮುಚ್ಚಿಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಆಸ್ಪತ್ರೆಯ ಕೆಲ ಆವರಣಗಳಲ್ಲಿನ ಗೋಡೆಗಳು ಗೆದ್ದಲ ಹಿಡಿದು ಶಿಥಿಲಗೊಂಡಿವೆ. ರೂಂಗಳಲ್ಲಿ ಗೋಡೆಗೆ ಕೈಯಿಂದ ಬಡಿದರೆ ಮಣ್ಣು ಉದುರುತ್ತವೆ. ಹಲವು ವರ್ಷಗಳಿಂದ ಪೇಂಟಿಂಗ್‌ ಕಾಣದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಗೋಡೆಗಳ ಅಂದ ಹದಗೆಟ್ಟಿದೆ. ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಅವರ ಸಂಬಂಧಿಗಳು ಜೀವ ಕೈಯಲ್ಲಿ ಹಿಡಿದು ಬದುಕುವ ಸ್ಥಿತಿ ಎದುರಾಗಿದ್ದು, ಬಡ ಜನರು ಅನಿವಾರ್ಯ ಕಾರಣಗಳಿಂದ ಈ ಅವ್ಯವಸ್ಥೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉತ್ತಮ ಚಿಕಿತ್ಸೆಯಿದ್ದರೂ ನಿರ್ವಹಣೆಯಲ್ಲಿ ತೊಡಕು: ಆಸ್ಪತ್ರೆ ಕಟ್ಟಡ ನಿರ್ವಹಣೆಯಲ್ಲಿ ತೊಡಕು ಉಂಟಾಗಿರುವುದನ್ನು ಹೊರತುಪಡಿಸಿ ದರೆ ಉಳಿದಂತೆ ಆಸ್ಪತ್ರೆಯಲ್ಲಿ ನುರಿತ ತಜ್ಞ ವೈದ್ಯರು, ಅನುಭವಿ ಶುಶ್ರೂಷಕರು, ಅಗತ್ಯ ಸಿಬ್ಬಂದಿಯಿದ್ದಾರೆ. ಜ್ವರ, ದಂತ, ಮೂಳೆ, ಇಎನ್‌, ಸ್ತ್ರೀರೋಗ, ಚರ್ಮರೋಗ, ನೇತ್ರ ಚಿಕಿತ್ಸೆ ಹೀಗೆ ವಿವಿಧ ವಿಭಾಗಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 300 ಬೆಡ್‌ಗಳು, 6 ವೆಂಟಿಲೇಟರ್‌ ಸೌಲಭ್ಯವುಳ್ಳ ಐಸಿಯು, 8 ಎನ್‌ಐಸಿಯು, ಕಡಿಮೆ ದರದಲ್ಲಿ ಔಷಧ ಪೂರೈಸುವ ಜೆನರಿಕ್‌ ಔಷಧ ಮಳಿಗೆ, ಒಪಿಡಿಯಲ್ಲಿ ಹೆಚ್ಚುವರಿ ಕೌಂಟರ್‌ಗಳು ಸೇರಿದಂತೆ ವಿವಿಧ ಸವಲತ್ತು ಹೊಂದಿದೆ. ಬಿಪಿಎಲ್‌ ಕಾರ್ಡ್‌ ಹೊಂದಿರುವ ರೋಗಿಗಳಿಗೆ ಸಂಪೂರ್ಣ ಉಚಿತ ಹಾಗೂ ಇತರೆ ರೋಗಿಗಳಿಗೆ ಶೇ.50ರಷ್ಟು ರಿಯಾಯಿತಿ ದರದಲ್ಲಿ ಸೇವೆ ದೊರೆಯಲಿದೆ.

ಕಟ್ಟಡ ಸರಿಪಡಿಸಿದರೆ ರೋಗಿಗಳಿಗೆ ಅನುಕೂಲ : ಬಡವರು, ಮಧ್ಯಮ ವರ್ಗದವರು, ಶ್ರೀಮಂತರೆನ್ನದೇ ಎಲ್ಲ ವರ್ಗದ ಸಾವಿರಾರು ಮಂದಿ ವಿವಿಧ ಕಾಯಿಲೆಗಳ ಚಿಕಿತ್ಸೆಗಾಗಿ ಜಯನಗರ ಜನರಲ್‌ ಆಸ್ಪತ್ರೆ ಮೊರೆ ಹೋಗುತ್ತಿದ್ದಾರೆ. ಆದರೆ, ಆಸ್ಪತ್ರೆಯ ಕಟ್ಟಡಗಳು ಪಾಳು ಬಿದ್ದ ಸ್ಥಿತಿಯಲ್ಲಿರುವುದರಿಂದ ವೈದ್ಯರು ಹಾಗೂ ರೋಗಿಗಳು ಪರದಾಡುವಂತಾಗಿದೆ. ಆದಷ್ಟು ಬೇಗ ಆಸ್ಪತ್ರೆಯ ಪಿಡಬ್ಲೂéಡಿ ವಿಭಾಗದ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಿ ಈ ಆಸ್ಪತ್ರೆ ಕಟ್ಟಡ ನಿರ್ವಹಣೆ ಮಾಡಿದಲ್ಲಿ ಲಕ್ಷಾಂತರ ರೋಗಿಗಳಿಗೆ ಅನುಕೂಲವಾಗಲಿದೆ ಎನ್ನುತ್ತಾರೆ ಇಲ್ಲಿನ ವೈದ್ಯಾಧಿಕಾರಿ ಮೂಲಗಳು.

ಹಳೆಯ ಕಟ್ಟಡಗಳಾಗಿದ್ದರೂ ಈ ಆಸ್ಪತ್ರೆಯಲ್ಲಿ ಉತ್ತಮ ಸೇವೆಗಳು ಸಿಗುತ್ತಿವೆ. ಆದರೆ, ಆಸ್ಪತ್ರೆಯ ಪಿಡಬ್ಲೂéಡಿ ವಿಭಾಗವು ಆಸ್ಪತ್ರೆ ಕಟ್ಟಡವನ್ನು ಸೂಕ್ತ ನಿರ್ವಹಣೆ ಮಾಡುವ ಅಗತ್ಯವಿದೆ. ಸದ್ಯ ಇಲ್ಲಿನ ಪಿಡಬ್ಲ್ಯೂಡಿ ವಿಭಾಗವು ಆಟಕ್ಕುಂಟು, ಲೆಕ್ಕಕ್ಕಿಲ್ಲ ಎಂಬಂತಿದೆ. ●ಹರ್ಷ ಗರುಡನಗಿರಿ, ಮಾಜಿ ಅಧ್ಯಕ್ಷ, ಸಂದರ್ಶಕ ಸಮಿತಿ, ಜಯನಗರ ಸಾರ್ವಜನಿಕ ಆಸ್ಪತ್ರೆ

-ಅವಿನಾಶ ಮೂಡಂಬಿಕಾನ

ಟಾಪ್ ನ್ಯೂಸ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.