59ನೇ ವಸಂತಕ್ಕೆ ಕಾಲಿಟ್ಟ ಎಚ್ಡಿಕೆ
Team Udayavani, Dec 17, 2017, 6:10 AM IST
ಬೆಂಗಳೂರು:ಹೃದಯ ಶಸ್ತ್ರ ಚಿಕಿತ್ಸೆಯ ನಂತರ ನನಗೆ ಮರುಜನ್ಮ ಸಿಕ್ಕಿದ್ದು, ನನ್ನ ಜೀವನ ಜನಸೇವೆಗೆ ಮುಡಿಪು. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರುವವರೆಗೂ ವಿಶ್ರಾಂತಿ ಮಾತೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಶನಿವಾರ 59 ನೇ ಹುಟ್ಟುಹಬ್ಬ ಆಚರಿಸಿಕೊಂಡ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಬಡವರ ಕಲ್ಯಾಣಕ್ಕಾಗಿ ನಾನು ಕಂಡಿರುವ ಕನಸು ನನಸು ಮಾಡಲು ಜೆಡಿಎಸ್ ಪಕ್ಷಕ್ಕೆ ಮತದಾರರು ಮುಂದಿನ ಚುನಾವಣೆಯಲ್ಲಿ ಆರ್ಶೀವದಿಸಬೇಕು ಎಂದು ಹೇಳಿದರು.
ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳೇ ನನ್ನ ಶಕ್ತಿ. ನನ್ನ ಮುಂದಿನ ಜೀವನ ಜನಸೇವೆಗಾಗಿಯೇ ಮುಡಿಪಾಗಿರುತ್ತದೆ. 59 ನೇ ಜನ್ಮದಿನದ ಸಂತಸದ ಜತೆಗೆ ಮುಂದಿನ ವಿಧಾನಸಭೆ ಚುನಾವಣೆ ಎದುರಿಸುವ ಸವಾಲು ಹೊಣೆಗಾರಿಕೆಯೂ ನನ್ನ ಮೆಲಿದೆ ಎಂದು ತಿಳಿಸಿದರು. ಮತದಾರರು ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಒಂದೊಂದು ಅವಕಾಶ ನೀಡಿದ್ದೀರಿ ಒಮ್ಮೆ ಜೆಡಿಎಸ್ಗೂ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಂದರೆ ಜನರ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಯೋಜನೆ ಹಾಕಿಕೊಳ್ಳಲಿದೆ. ಯುವಕರಿಗೆ ಉದ್ಯೋಗ ಸೃಷ್ಠಿಸುವ ಕಾರ್ಯಕ್ರಮ ರೂಪಿಸಲಿದೆ ಎಂದು ಹೇಳಿದರು.
ಬೆಂಗಳೂರಿನ 28 ಕ್ಷೇತ್ರಗಳ ಪೈಕಿ ಕನಿಷ್ಠ15 ಕ್ಷೇತ್ರಗಳಲ್ಲಾದ್ರೂ ಪಕ್ಷವನ್ನು ಗೆಲ್ಲಿಸಬೇಕು. ಜೆಡಿಎಸ್ ಸ್ವತಂತ್ರವಾಗಿ ಸರ್ಕಾರ ರಚಿಸಲು ರಾಜಧಾನಿಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕು. ಆ ನಿಟ್ಟಿನಲ್ಲಿ ಕಾರ್ಯಕರ್ತರು ಕೆಲಸ ಮಾಡಬೇಕು ಎಂದು ತಿಳಿಸಿದರು.
ಯಾವುದೇ ಕಾರಣಕ್ಕೂ ನಿಖೀಲ… ರಾಜಕೀಯಕ್ಕೆ ಬರೋ ಪ್ರಶ್ನೆಯೇ ಇಲ್ಲ. ಆದರೆ ಪಕ್ಷದ ಪ್ರಚಾರದಲ್ಲಿ ಭಾಗವಹಿಸುತ್ತಾನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸಂಸದ ಪುಟ್ಟರಾಜು, ಮಾಜಿ ಸಚಿವರಾದ ಎಚ್.ವಿಶ್ವನಾಥ್, ಪಿ.ಜಿ.ಆರ್.ಸಿಂದ್ಯಾ, ಬಂಡೆಪ್ಪ ಕಾಶಂಪುರ್, ಶಾಸಕರಾದ ಗೋಪಾಲಯ್ಯ, ಸುರೇಶ್ಬಾಬು, ವಿಧಾನಪರಿಷತ್ ಸದಸ್ಯರಾದ ರಮೇಶ್ಬಾಬು, ಟಿ.ಎ.ಶರವಣ, ಕಾಂತರಾಜ್, ಮುಖಂಡರಾದ ಬಿ.ಎಂ.ಫರೂಕ್, ಜಫ್ರುಲ್ಲಾ ಖಾನ್, ರಮೇಶ್ಗೌಡ, ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
ವಿಶೇಷ ಪೂಜೆ
ಹುಟ್ಟುಹಬ್ಬ ಪ್ರಯುಕ್ತ ರಾಜರಾಜೇಶ್ವರಿನಗರ ದೇವಾಲಯದಲ್ಲಿ ಎಚ್.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿ ನಂತರ ಪದ್ಮನಾಭನಗರದಲ್ಲಿ ದೇವೇಗೌಡರ ಆರ್ಶೀವಾದ ಪಡೆದು ವಿಕಲಚೇತನರ ಜತೆ ಹುಟ್ಟುಹಬ್ಬ ಆಚರಿಸಿಕೊಂಡರು.ಆದಿಚುಂಚನಗಿರಿ ಮಠಕ್ಕೆ ತೆರಳಿ ನಿರ್ಮಲಾನಂದನಾಥ ಸ್ವಾಮಿಗಳ ಆರ್ಶೀವಾದ ಪಡೆದರು. ನಂತರ ಪಕ್ಷದ ಕಚೇರಿಯಲ್ಲಿ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಉಸ್ತುವಾರಿಯ “ಅಪ್ಪಾಜಿ ಕ್ಯಾಂಟೀನ್’ಗೆ ಚಾಲನೆ ನೀಡಿದರು. ಸಂಜೆ ಬಿಡದಿ ಬಳಿಯ ಕೋತಿ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಕ್ಷೇತ್ರ ರಾಮನಗರಕ್ಕೂ ಭೇಟಿ ನೀಡಿದ್ದರು. ಸಾಮಾಜಿಕ ಜಾಲತಾಣಗಳಲ್ಲೂ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಷಯಗಳ ಮಹಾಪೂರವೇ ಹರಿದು ಬಂದಿತ್ತು.
58 ವರ್ಷ ತುಂಬಿ 59 ನೇ ವರ್ಷಕ್ಕೆ ಕಾಲಿಟ್ಟಿರುವ ಕುಮಾರಸ್ವಾಮಿಯವರಿಗೆ ತಾಯಿ ರಾಜರಾಜೇಶ್ವರಿ ಆರೋಗ್ಯ ಕೊಡಲಿ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ತರಲು ಮತದಾರರು ಆರ್ಶೀವಾದ ಮಾಡಲಿ.
– ಅನಿತಾ ಕುಮಾರಸ್ವಾಮಿ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ 124 ದಿನಗಳಷ್ಟೇ ಬಾಕಿ ಮುಂದಿನ ದಿನಗಳಲ್ಲಿ ಕುಮಾರಣ್ಣನ ಸರ್ಕಾರ ಬರಲಿದೆ. ಎಲ್ಲರ ಸಂಕಷ್ಟ ಬಗೆಹರಿಯಲಿದೆ.ರೈತರ ಸಾಲ ಮನ್ನಾ, 70 ವರ್ಷ ಮೆಲ್ಪಟ್ಟವರಿಗೆ 5 ಸಾವಿರ ರೂ. ಮಾಶಾಸನ, ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಸೇರಿ ಸಾಕಷ್ಟು ಕಾರ್ಯಕ್ರಮ ರೂಪಿಸುವ ಕನಸು ಹೊಂದಿದ್ದಾರೆ. ನಾನು ರಾಹುಲ್ ಗಾಂಧಿ ಬಗ್ಗೆ ಟೀಕೆ ಮಾಡಲ್ಲ, ಎರಡೂ ರಾಷ್ಟ್ರೀಯ ಪಕ್ಷಗಳು ಈ ನಾಡಿಗೆ ಏನು ಕೊಟ್ಟಿವೆ ಎಂಬುದು ಎಲ್ಲರಿಗೂ ಗೊತ್ತಿದೆ.
- ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.