ರಾಜಕಾಲುವೆ ಒತ್ತುವರಿ ತೆರವಿಗೆಆಗ್ರಹಿಸಿ ಜೆಡಿಯು ಪ್ರತಿಭಟನೆ
Team Udayavani, Sep 14, 2017, 3:01 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆಗಳ ಒತ್ತುವರಿ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಜೆಡಿಯು ಕಾರ್ಯಕರ್ತರು ಬುಧವಾರ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ರಾಜಕಾಲುವೆ ಒತ್ತುವರಿಯಿಂದಾಗಿ ಮಳೆ ಬಂದಾಗ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ತಕ್ಷಣ ಒತ್ತುವರಿ ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ನಗರದಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ಕಳಪೆ ಕಾಮಗಾರಿಯಿಂದ ಯಾವ ರಸ್ತೆಗಳಲ್ಲೂ ಸಂಚಾರ ಮಾಡದಂಥ ಸ್ಥಿತಿ ನಿರ್ಮಾಣವಾಗಿದೆ. ಕಳಪೆ ಕಾಮಗಾರಿಗೆ ಕಾರಣರಾದ ಗುತ್ತಿಗೆದಾರರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಗರದಲ್ಲಿ ಸಮರ್ಪಕ ತ್ಯಾಜ್ಯ ವಿಲೇವಾರಿ ಆಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಗಮನಹರಿ ಸುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ತೊಂದರೆಪಡುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡೆಂಘೀ, ಚಿಕೂನ್ಗುನ್ಯಾ ರೋಗಗಳಿಗೆ 27 ಜನರು ಇದುವರೆಗೂ ಬಲಿಯಾಗಿದ್ದು ಮಾರಣಾಂತಿಕ ಸೊಳ್ಳೆಗಳ ನಿಯಂತ್ರಣಕ್ಕೂ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ಮುಖಂಡರಾದ ನಾಗೆಶ್, ಪಾಲಾಕ್ಷ, ವೆಂಕಟಸ್ವಾಮಿ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.