ಇನ್ನೂ ಪ್ರಕಟವಾಗದ ಜೆಡಿಎಸ್ 3ನೇ ಪಟ್ಟಿ
Team Udayavani, Apr 24, 2018, 6:40 AM IST
ಬೆಂಗಳೂರು: ನಾಮಪತ್ರ ಸಲ್ಲಿಸಲು ಇನ್ನು ಒಂದೇ ದಿನ ಬಾಕಿ ಇದ್ದರೂ ಜೆಡಿಎಸ್ ಇನ್ನೂ 24 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸದೇ ಇರುವುದು ಆ ಕ್ಷೇತ್ರದ ಆಕಾಂಕ್ಷಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದೆ.
ಎಲ್ಲಾ 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದ ಜೆಡಿಎಸ್ ನಂತರ ಬಿಎಸ್‌ಪಿ ಜತೆ ಹೊಂದಾಣಿಕೆ ಮಾಡಿಕೊಂಡು 20 ಕ್ಷೇತ್ರಗಳನ್ನು ಆ ಪಕ್ಷಕ್ಕೆ ಬಿಟ್ಟುಕೊಟ್ಟಿತ್ತು. ಪ್ರಸ್ತುತ 2 ಹಂತಗಳಲ್ಲಿ 180 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್ ಇನ್ನೂ 24 ಕ್ಷೇತ್ರಗಳ ಪಟ್ಟಿ ಪ್ರಕಟಿಸಬೇಕಿದೆ. ಈ ಪೈಕಿ ಬೊಮ್ಮನಹಳ್ಳಿಯಿಂದ ನಿರ್ಮಾಪಕ ಕೆ.ಮಂಜು ಮಂಗಳವಾರ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿದಿದೆ.
ಈ ಪೈಕಿ ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿ ಘೋಷಣೆಯಾಗದೇ ಇದ್ದರೂ ಕೆಲವರಿಗೆ ನಾಮಪತ್ರ ಸಲ್ಲಿಸಲು ಸೂಚಿಸಲಾಗಿದೆ. ನಾಮಪತ್ರ ಸಲ್ಲಿಸಲು ಮಂಗಳವಾರ ಮಧ್ಯಾಹ್ನದವರೆಗೆ ಕಾಲಾವಕಾಶವಿದ್ದು, ಬುಧವಾರ ಮಧ್ಯಾಹ್ನದೊಳಗೆ ಬಿ ಫಾರಂ ಸಲ್ಲಿಸಿದರೆ ಸಾಕು. ಅಷ್ಟರೊಳಗೆ ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿ ಬಿ ಫಾರಂ ವಿತರಿಸಲು ಅವಕಾಶ ಇದೆ. ಆದರೂ ಕೆಲವೆಡೆ ಅಭ್ಯರ್ಥಿಗಳನ್ನು ಹಾಕುವುದು ಅನುಮಾನ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಬಿಎಸ್‌ಪಿಗೆ 19 ಕ್ಷೇತ್ರ: ಒಪ್ಪಂದದಂತೆ ಬಿಎಸ್‌ಪಿಗೆ 20 ಕ್ಷೇತ್ರ ಬಿಟ್ಟುಕೊಟ್ಟಿದ್ದ ಜೆಡಿಎಸ್ ಅದರಲ್ಲಿ 1 ಕ್ಷೇತ್ರವನ್ನು ವಾಪಸ್ ಪಡೆದಿದೆ. ಕಲಬುರಗಿ ಗ್ರಾಮಾಂತರದಲ್ಲಿ ಬಿಜೆಪಿ ಟಿಕೆಟ್ ಸಿಗದೆ ಜೆಡಿಎಸ್ ಸೇರಿದ ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಅವರನ್ನು ಕಣಕ್ಕಿಳಿಸಲಾಗುತ್ತಿದೆ. ಅಲ್ಲಿ ಈಗಾಗಲೇ ಘೋಷಣೆಯಾಗಿರುವ ಬಿಎಸ್‌ಪಿ ಅಭ್ಯರ್ಥಿ ಸೂರ್ಯಕಾಂತ ನಿಂಬಾಳ್ಕರ್ ಕಣದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ
KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್‌ಅಪ್ ಆಗಿದೆ: ಮಲ್ಲಿಕಾ ಶೆರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.