ಸರ್ಕಾರ ಉಳಿಸಿಕೊಳ್ಳಲು ಜೆಡಿಎಸ್‌ ಜಾತಿ ಲೆಕ್ಕಾಚಾರ

Team Udayavani, Sep 16, 2018, 6:20 AM IST

jds.jpg

ಬೆಂಗಳೂರು: ಕಾಂಗ್ರೆಸ್‌ ಗೊಂದಲದಿಂದಾಗಿ ಸಮ್ಮಿಶ್ರ ಸರ್ಕಾರದ ಅಸ್ತಿತ್ವಕ್ಕೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಉಳಿಸಿಕೊಳ್ಳಲು ಮುಂದಾಗಿರುವ ಜೆಡಿಎಸ್‌, ಜಾತಿ ಲೆಕ್ಕಾಚಾರದಲ್ಲಿ ಸಮುದಾಯದ ಗಣ್ಯರ ಮೂಲಕ ಬಿಜೆಪಿ ಶಾಸಕರನ್ನು ಸಂಪರ್ಕಿಸಿ ಸರ್ಕಾರ ಉರುಳಿಸುವ ಪ್ರಯತ್ನದಿಂದ ದೂರವಿರುವಂತೆ ಮಾಡುವ ಪ್ರಯತ್ನಕ್ಕೆ ಕೈಹಾಕಿದೆ.

ಜೆಡಿಎಸ್‌ ನಾಯಕರ ಸೂಚನೆಯಂತೆ ಒಕ್ಕಲಿಗ ಸಮುದಾಯದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವವರು ಸೇರಿದಂತೆ ಪ್ರಮುಖ ನಾಯಕರು ಈಗಾಗಲೇ ಬಿಜೆಪಿಯ ಒಕ್ಕಲಿಗ ಶಾಸಕರನ್ನು ಸಂಪರ್ಕಿಸಿದ್ದಾರೆ. ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈಜೋಡಿಸದಂತೆ ಸಲಹೆ ಮಾಡುವುದರ ಜತೆಗೆ, ಸರ್ಕಾರ ಉರುಳಿದರೆ ಸಮುದಾಯದ ವಿರೋಧ ಕಟ್ಟಿಕೊಳ್ಳಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ಕಾಂಗ್ರೆಸ್‌ ಶಾಸಕರು ರಾಜೀನಾಮೆ ನೀಡಿ ಸರ್ಕಾರ ಅಲ್ಪಮತಕ್ಕೆ ಕುಸಿದರೆ ಬಿಜೆಪಿಯ ಒಕ್ಕಲಿಗ ಶಾಸಕರು ರಾಜೀನಾಮೆ ಕೊಟ್ಟು ಆ ಪಕ್ಷದ ಸಂಖ್ಯಾಬಲ ಕುಸಿದು ಸರ್ಕಾರಕ್ಕೆ ಅಪಾಯವಾಗದಂತೆ ನೋಡಿಕೊಳ್ಳುವ ಪ್ರಯತ್ನಕ್ಕೂ ಜೆಡಿಎಸ್‌ ಕೈಹಾಕಿದ್ದು, ಈಗಾಗಲೇ ಕೆಲವು ಶಾಸಕರನ್ನು ಸಮುದಾಯದ ಮುಖಂಡರ ಮೂಲಕ ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯ ಐವರು ಶಾಸಕರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಈಗಾಗಲೇ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಐವರು ಶಾಸಕರ ಹೆಸರು ಪ್ರಸ್ತಾಪವಾಯಿತಾದರೂ ಅದನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ, ನಿಮ್ಮ ಪಟ್ಟಿಯಲ್ಲಿರುವ ಅಥವಾ ಮೈಸೂರು ಭಾಗದ ಶಾಸಕರನ್ನು ನಾವು ಮುಟ್ಟಲು ಹೋಗಿಲ್ಲ. ಅವರು ಯಾರು ಎಂಬುದು ಸಮಯ ಬಂದಾಗ ಗೊತ್ತಾಗುತ್ತದೆ ಎಂದು ಹೇಳಿಕೆ ನೀಡಿದ್ದಾರೆ. ಸಮುದಾಯದ ಗಣ್ಯರು ಸಂಪರ್ಕಿಸಿರುವ ಒಕ್ಕಲಿಗ ಸಮುದಾಯದ ಶಾಸಕರನ್ನೇ ಮನಸ್ಸಿನಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಈ ಹೇಳಿಕೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸಮುದಾಯ ತಿರುಗಿಬೀಳುವ ಎಚ್ಚರಿಕೆ:
ಈ ಮಧ್ಯೆ ಸಮ್ಮಿಶ್ರ ಸರ್ಕಾರ ಉರುಳಿಸಿದರೆ ಬಿಜೆಪಿಗೆ ಒಕ್ಕಲಿಗ ವಿರೋಧಿ ಎಂಬ ಹಣೆಪಟ್ಟಿ ಬರಲಿದೆ ಎಂಬ ಎಚ್ಚರಿಕೆಯನ್ನೂ ಆ ಪಕ್ಷದ ಶಾಸಕರಿಗೆ ಪರೋಕ್ಷವಾಗಿ ನೀಡಲಾಗುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದವರೇ ಹೆಚ್ಚಾಗಿದ್ದು, ಈ ಭಾಗದಲ್ಲಿ ತನ್ನ ಬಲ ವೃದ್ಧಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಕುಟುಂಬದ ಹಿಡಿತದಲ್ಲೇ ಇದ್ದ ಮತ್ತು ಕಾಂಗ್ರೆಸ್‌ ಸ್ವಲ್ಪ ಮಟ್ಟಿಗೆ ಶಕ್ತಿ ಹೊಂದಿದ್ದ ಹಾಸನ ಜಿಲ್ಲೆಯಲ್ಲಿ ಬಿಜೆಪಿಯಿಂದ ಒಕ್ಕಲಿಗ ಸಮುದಾಯದ ಶಾಸಕ ಗೆದ್ದು ಬಂದಿರುವುದು ಇದಕ್ಕೆ ಉದಾಹರಣೆ. ಇದಲ್ಲದೆ, ಒಕ್ಕಲಿಗ ಸಮುದಾಯ ಹೆಚ್ಚಾಗಿರುವ ಮೈಸೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ತುಮಕೂರು ಜಿಲ್ಲೆಗಳಲ್ಲೂ ಬಿಜೆಪಿ ತನ್ನ ಶಕ್ತಿ ಹೆಚ್ಚಿಸಿಕೊಳ್ಳುತ್ತಿದೆ.

ಒಂದೊಮ್ಮೆ ಜೆಡಿಎಸ್‌ ಸರ್ಕಾರ ಉರುಳಿಸಿದರೆ ಈ ಎಲ್ಲಾ ಭಾಗದಲ್ಲಿ ಒಕ್ಕಲಿಗ ಸಮುದಾಯದವರು ಬಿಜೆಪಿ ವಿರುದ್ಧ ತಿರುಗಿಬೀಳಬಹುದು. ಹಾಗೇನಾದರೂ ಆದರೆ ಮುಂದಿನ ದಿನಗಳಲ್ಲಿ ನಿಮ್ಮ ರಾಜಕೀಯ ಬೆಳವಣಿಗೆಗೆ ಅಡ್ಡಿಯಾಗಬಹುದು. ಆದ್ದರಿಂದ ಸಮ್ಮಿಶ್ರ ಸರ್ಕಾರಕ್ಕೆ ಅಪಾಯ ಎದುರಾದರೆ ರಕ್ಷಣೆಗೆ ಬನ್ನಿ ಎಂಬ ಸಂದೇಶವನ್ನು ಈಗಾಗಲೇ ಒಕ್ಕಲಿಗ ಸಮುದಾಯದ ಬಿಜೆಪಿ ಶಾಸಕರಿಗೆ ರವಾನಿಸಲಾಗಿದೆ.

ಸಂಪರ್ಕಿಸಿದ್ದು ನಿಜ
ಈ ಕುರಿತಂತೆ ಪ್ರತಿಕ್ರಿಯಿಸಿರುವ ಬೆಂಗಳೂರಿನ ಬಿಜೆಪಿ ಶಾಸಕರೊಬ್ಬರು, ಸಮಾಜದ ಗಣ್ಯರೊಬ್ಬರು ತಮ್ಮನ್ನು ಸಂಪರ್ಕಿಸಿದ್ದು ನಿಜ. ಸರ್ಕಾರ ಉರುಳಿಸುವ ಪ್ರಯತ್ನಕ್ಕೆ ಕೈಜೋಡಿಸದಂತೆ ಮತ್ತು ಸರ್ಕಾರ ಅಸ್ಥಿರಗೊಂಡರೆ ಬೆಂಬಲಕ್ಕೆ ನಿಲ್ಲುವಂತೆ ಸಲಹೆ ನೀಡಿದ್ದರು. ಆದರೆ, ಮುಳುಗುವ ದೋಣಿಯಲ್ಲಿ ಆಶ್ರಯ ಪಡೆಯಲು ಯಾರು ತಾನೇ ಮುಂದಾಗುತ್ತಾರೆ? ಹೀಗಾಗಿ ನಾವೇನೂ ಸರ್ಕಾರ ಉರುಳಿಸುವ ಪ್ರಯತ್ನ ಮಾಡುವುದಿಲ್ಲ. ಅದಾಗಿಯೇ ಉರುಳಿದರೆ ನಾವೇನು ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದ್ದಾರೆ.

– ಪ್ರದೀಪ್‌ಕುಮಾರ್‌ ಎಂ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.