ಕೈ, ಕಮಲ ಆಪರೇಷನ್‌ಗೆ ನಲುಗಿದ ಜೆಡಿಎಸ್‌


Team Udayavani, Jan 19, 2018, 6:05 AM IST

JDS.jpg

ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿ ಬಲವರ್ಧನೆಗೆ ಮುಂದಾದ ಜೆಡಿಎಸ್‌ಗೆ ಮತ್ತೆ ಪೆಟ್ಟು ಬೀಳತೊಡಗಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ನಡೆಸಿದ “ಆಪರೇಷನ್‌’ಗೆ ಜೆಡಿಎಸ್‌ ನಲುಗುವಂತಾಗಿದೆ. ಪ್ರಸ್ತುತ ಉತ್ತರದಲ್ಲಿರುವ ಆರು ಜೆಡಿಎಸ್‌ ಶಾಸಕರಲ್ಲಿ ಇಬ್ಬರು ಬಿಜೆಪಿ ಸೇರಿದ್ದರೆ, ಇನ್ನಿಬ್ಬರು ಕಾಂಗ್ರೆಸ್‌ ಕದ ತಟ್ಟಿಯಾಗಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಈ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕೆಂಬ ಜೆಡಿಎಸ್‌ ವರಿಷ್ಠರಿಗೆ ಪಕ್ಷದಿಂದ ಆಯ್ಕೆಯಾದ ಶಾಸಕರೇ  ಶಾಕ್‌ ನೀಡತೊಡಗಿದ್ದಾರೆ. 80ರ ದಶಕದಲ್ಲಿ ಕರ್ನಾಟಕದಲ್ಲೇ ರಾಜಕೀಯ ಬದಲಾವಣೆಯ ಮಹತ್ವದ ಕ್ರಾಂತಿ ಮೊಳಗಿತ್ತು. ಬಲಾಡ್ಯ ಕಾಂಗ್ರೆಸ್‌ ಮಣಿಸಿ ಜನತಾಪಕ್ಷ ಅಧಿಕಾರ ಹಿಡಿದು ಕಾಂಗ್ರೆಸ್‌ಗೆ ಪರ್ಯಾಯ ಶಕ್ತಿಯಾಗಿ ಜನತಾ ಪರಿವಾರ ಎದ್ದು ನಿಂತಿತ್ತು.

1983ರ ಚುನಾವಣೆಯಲ್ಲಿ ಜನತಾಪಕ್ಷ 95 ಸ್ಥಾನ ಪಡೆದು ಅತಿದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಇದರಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಪಾಲು 28 ಸ್ಥಾನಗಳಾಗಿದ್ದವು. 1985ರಲ್ಲಿ ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆದು ಜನತಾ ಪಕ್ಷ 139 ಸ್ಥಾನ ಗಳಿಸಿತ್ತು. ಇದರಲ್ಲಿ ಉಕ ದ ಪಾಲು 60 ಸ್ಥಾನ. 1994ರಲ್ಲಿ ಜನತಾದಳ ಮತ್ತೂಮ್ಮೆ ಅಧಿಕಾರ ಹಿಡಿದಾಗ 115 ಸ್ಥಾನ ಪಡೆದಿತ್ತು. ಅದರಲ್ಲಿ ಉಕ 45 ಸ್ಥಾನಗಳ ಕೊಡುಗೆ ನೀಡಿತ್ತು.

1999ರ ಚುನಾವಣೆಯಲ್ಲಿ ಜನತಾ ಪರಿವಾರ ಸಂಯುಕ್ತ ಜನತಾದಳ, ಜಾತ್ಯತೀತ ಜನತಾದಳವಾಗಿ ವಿಂಗಡಣೆಗೊಂಡಿತ್ತು. ಜೆಡಿಯು 18 ಹಾಗೂ ಜೆಡಿಎಸ್‌ 10 ಸ್ಥಾನಗಳಲ್ಲಿ ಗೆದ್ದಿತ್ತು. ಜೆಡಿಎಸ್‌ನ 10 ಸ್ಥಾನಗಳಲ್ಲಿ 5 ಸ್ಥಾನ ಉಕದ್ದಾಗಿತ್ತು. 2004ರ ಚುನಾವಣೆಯಲ್ಲಿ ಜೆಡಿಎಸ್‌ 58 ಸ್ಥಾನ ಗಳಿಸಿತ್ತು. ಇದರಲ್ಲಿ ಉಕ ದ ಪಾಲು 17 ಆಗಿತ್ತು. 2008 ಮತ್ತು 2013ರ ಚುನಾವಣೆಯಲ್ಲೂ ಪಕ್ಷ ಸಂಘಟನೆಯ ಕೊರತೆಯ ನಡುವೆಯೂ ಈ ಭಾಗದ ಮತದಾರರು ಜೆಡಿಎಸ್‌ಗೆ ಕ್ರಮವಾಗಿ 10 ಹಾಗೂ 6 ಸ್ಥಾನಗಳನ್ನು ನೀಡಿದ್ದರು.

ಮತ್ತೆ ಮತ್ತೆ ಹೊಡೆತ: ಈ ಹಿಂದೆ, ಎಸ್‌.ಎಂ.ಕೃಷ್ಣ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಬೀಸಿದ ಬಲೆಗೆ ಜೆಡಿಯುನಿಂದ ಗೆದ್ದಿದ್ದ 18 ಶಾಸಕರಲ್ಲಿ ಬಹುತೇಕರು ಕಾಂಗ್ರೆಸ್‌ ಕೈ ಹಿಡಿದಿದ್ದರು, ಇನ್ನು ಕೆಲವರು ಬಿಜೆಪಿ ಪಾಲಾಗಿದ್ದರು. ನಂತರದಲ್ಲಿ ಜೆಡಿಯು, ರಾಜ್ಯದಲ್ಲಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವಂತಾಗಿತ್ತು. ಜೆಡಿಎಸ್‌ ಹಳೇ ಮೈಸೂರು ಪ್ರಾಂತ್ಯದಲ್ಲಿ ಪ್ರಬಲವಾಗಿದ್ದರೂ ಉತ್ತರದಲ್ಲಿ ಅದರ ಶಕ್ತಿ ಕುಂದಿತ್ತು.

2008ರ ಚುನಾವಣೆಯಲ್ಲಿ ಜೆಡಿಎಸ್‌ ಕೇವಲ 28 ಸ್ಥಾನ ಗೆದ್ದಿತ್ತು. ಅದರಲ್ಲಿ ಉಕದಿಂದ 10 ಮಂದಿ ಆಯ್ಕೆಯಾಗಿದ್ದರು. ಚುನಾವಣಾ ಫ‌ಲಿತಾಂಶ ಬಂದ ಕೇವಲ 36 ದಿನಗಳಲ್ಲಿ “ಆಪರೇಷನ್‌ ಕಮಲ’ಕ್ಕೆ ಬಿದ್ದ ಈ ಭಾಗದ ಮೂವರು ಜೆಡಿಎಸ್‌ ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದಿದ್ದರು.

2013ರ ಚುನಾವಣೆಯಲ್ಲಿ ಜೆಡಿಎಸ್‌ 40 ಸ್ಥಾನಗಳನ್ನು ಗಳಿಸಿದ್ದು, ಉಕದಲ್ಲಿ  6 ಸ್ಥಾನಗಳನ್ನು ಗೆಲ್ಲಲು ಮಾತ್ರ ಸಾಧ್ಯವಾಗಿತ್ತು. 2018ರ ವಿಧಾನಸಭೆ ಚುನಾವಣೆಗೆ ಉತ್ತರದಲ್ಲಿ ಹೆಚ್ಚು ಸ್ಥಾನ ಗಳಿಸಬೇಕೆಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿಯೇ ಮನೆ ಮಾಡಿ ಪಕ್ಷ ಸಂಘಟನೆಗೆ ಹಲವು ಕಸರತ್ತು ಮಾಡುತ್ತಿರುವಾಗಲೇ,  ಆರು ಜೆಡಿಎಸ್‌ ಶಾಸಕರಲ್ಲಿ ನಾಲ್ವರು ಪಕ್ಷದಿಂದ ದೂರವಾಗಿದ್ದಾರೆ.

ಜೆಡಿಎಸ್‌ ಭಿನ್ನಮತಿಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಕೊಪ್ಪಳ ಜಿಲ್ಲೆ ಗಂಗಾವತಿ ಶಾಸಕ ಇಕ್ಬಾಲ್‌ ಅನ್ಸಾರಿ ಹಾಗೂ ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಈಗಾಗಲೇ ಕಾಂಗ್ರೆಸ್‌ ಕದ ತಟ್ಟಿಯಾಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ, ಲಿಂಗಸೂಗೂರು ಶಾಸಕ ಮಾನಪ್ಪ ವಜ್ಜಲ ಕಮಲ ಅಪ್ಪಿಕೊಂಡಾಗಿದೆ. ಉತ್ತರದಲ್ಲಿ ಇದೀಗ ಜೆಡಿಎಸ್‌ ಶಾಸಕರೆಂದು ಹೇಳಿಕೊಳ್ಳುವುದಕ್ಕೆ ಉಳಿದಿರುವವರು ಹೈದರಾಬಾದ್‌ ಕರ್ನಾಟಕ ಪ್ರದೇಶದಲ್ಲಿ ಬಸವಕಲ್ಯಾಣದ ಶಾಸಕ ಮಲ್ಲಿಕಾರ್ಜುನ ಖೂಬಾ, ಮುಂಬೈ ಕರ್ನಾಟಕದಲ್ಲಿ ನವಲಗುಂದ ಶಾಸಕ ಎನ್‌.ಎಚ್‌.ಕೋನರಡ್ಡಿ ಮಾತ್ರ!

ಜೆಡಿಎಸ್‌ಗೆ ಈಗ ಪಕ್ಷ ಸಂಘಟನೆಯ ಕೊರತೆ ಒಂದು ಕಡೆಯಾದರೆ, ಪಕ್ಷದಿಂದ ಗೆದ್ದ ಅನೇಕರು ಅನ್ಯ ಪಕ್ಷಕ್ಕೆ ವಲಸೆ ಹೋಗುತ್ತಿರುವುದು ಬಹುದೊಡ್ಡ ಸಮಸ್ಯೆಯಾಗಿ ಕಾಡತೊಡಗಿದೆ. ಈ ಎಲ್ಲ ಇಲ್ಲಗಳ ನಡುವೆ, ಸೊರಗಿದ ಸಂಘಟನೆಯೊಂದಿಗೆ ಜೆಡಿಎಸ್‌ ಮುಂದಿನ ಚುನಾವಣೆಯಲ್ಲಿ ಉತ್ತರ ಕರ್ನಾಟಕದಲ್ಲಿ ಯಾವ ರೀತಿ ಮೇಲೆದ್ದು ನಿಲ್ಲುವುದೋ ಕಾದು ನೋಡಬೇಕು.

– ಅಮರೇಗೌಡ ಗೋನವಾರ

ಟಾಪ್ ನ್ಯೂಸ್

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-sedam

Sedam: ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ; ಆರೋಪಿ ಬಂಧನ

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

FIR: ವಾಟ್ಸಾಪ್ ನಿರ್ದೇಶಕರ ವಿರುದ್ದ ಎಫ್‌ಐಆರ್ ಹಾಕಿದ ಗುರುಗ್ರಾಮ್‌ ಪೊಲೀಸರು

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.