ಮೈತ್ರಿಗೆ ಜೆಡಿಎಸ್‌ ನಡವಳಿಕೆಯೂ ಮುಖ್ಯ

Team Udayavani, Jul 27, 2018, 12:16 PM IST

mytrige.jpg

ಬೆಂಗಳೂರು: ಮೈತ್ರಿ ಸರ್ಕಾರ ಮುಂದುವರಿಯಲು ಎರಡೂ ಪಕ್ಷಗಳ ನಡವಳಿಕೆ ಮುಖ್ಯವಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮೈತ್ರಿಗೆ ಕಾಂಗ್ರೆಸ್‌ ನಡವಳಿಕೆ ಮೇಲೆ ನಿಂತಿದೆ ಎಂದಿರುವ ಮುಖ್ಯಮಂತ್ರಿ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಕೇವಲ ಕಾಂಗ್ರೆಸ್‌ ನಡವಳಿಕೆಯಿಂದ ಮೈತ್ರಿ ಮುಂದುವರಿಯುವುದಿಲ್ಲ. ಜೆಡಿಎಸ್‌ ನಡವಳಿಕೆಯೂ ಮುಖ್ಯ ಎಂದಿದ್ದಾರೆ.

ಭಿನ್ನಾಭಿಪ್ರಾಯವಿಲ್ಲ: ಉಪ ಮುಖ್ಯಮಂತ್ರಿ ಪರಮೇಶ್ವರ್‌ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಜತೆ ಯಾವುದೇ ಮುನಿಸಿಲ್ಲ. ನಾವೆಲ್ಲರೂ ಒಟ್ಟಾಗಿದ್ದೇವೆ ಎಂದು ಇದೇ ವೇಳೆ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ.

ಮೋದಿ ಅತ್ಯಂತ ಭ್ರಷ್ಟ ಪ್ರಧಾನಿ: “ದೇಶಕಂಡ ಅತ್ಯಂತ ಭ್ರಷ್ಟ ಪ್ರಧಾನಮಂತ್ರಿ ನರೇಂದ್ರ ಮೋದಿ’ ಎಂದು ಆರೋಪಿಸಿರುವ ಕೆಪಿಸಿಸಿ ಅಧ್ಯಕ್ಷ, ರಫೇಲ್‌ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮವಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದರೆ, ಈ ಬಗ್ಗೆ ಪ್ರಧಾನಿ ಸ್ಪಷ್ಟ ಉತ್ತರ ನೀಡದೇ ಜಾರಿಕೊಳ್ಳುತ್ತಿದ್ದಾರೆ.

ಯುದ್ಧ ವಿಮಾನ ಖರೀದಿಯಲ್ಲಿ ಯುಪಿಎ ಅವಧಿಯಲ್ಲಿನ ಒಪ್ಪಂದಕ್ಕೂ ಎನ್‌ಡಿಎ ಅವಧಿಯಲ್ಲಿನ ಒಪ್ಪಂದಕ್ಕೂ ಸಾಕಷ್ಟು ವ್ಯತ್ಯಾಸವಾಗಿದೆ ಎಂದು ದೂರಿದರು. ಯುಪಿಎ ಅವಧಿಯಲ್ಲಿ ಮಾಡಿಕೊಂಡ ಒಪ್ಪಂದದಿಂದ  ತಂತ್ರಜ್ಞಾನ ವರ್ಗಾವಣೆ ಮೂಲಕ 108 ವಿಮಾನಗಳನ್ನು ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಉತ್ಪಾದಿಸುವ ಯೋಜನೆ ಇತ್ತು.

ಆದರೆ, ಪ್ರಧಾನಿ ಮೋದಿ ತಮ್ಮ ಸ್ನೇಹಿತ ಅನಿಲ್‌ ಅಂಬಾನಿಗೆ ಅನುಕೂಲ ಮಾಡಿಕೊಡಲು ಯುದ್ಧ ವಿಮಾನ ತಯಾರಿಕೆಯಲ್ಲಿ ಯಾವುದೇ ಅನುಭವ ಇಲ್ಲದ ರಿಲಾಯನ್ಸ್‌ ಸಂಸ್ಥೆಗೆ ವಹಿಸಿಕೊಡಲು ಮುಂದಾಗಿದ್ದಾರೆ ಎಂದು ಆಪಾದಿಸಿದರು. 

ಯುಪಿಎ ಅವಧಿಯಲ್ಲಿ ಪ್ರತಿ ವಿಮಾನಕ್ಕೆ 526 ಕೋಟಿ ರೂ. ನಿಗದಿಪಡಿಸಲಾಗಿತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ಮಾಡಿಕೊಂಡ ಒಪ್ಪಂದದಂತೆ ಪ್ರತಿ ವಿಮಾನಕ್ಕೆ 1670 ಕೋಟಿ ರೂ. ನಿಗದಿ ಮಾಡಲಾಗಿದೆ. ಆರು ವರ್ಷದಲ್ಲಿ ವಿಮಾನದ ದರದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚಳವಾಗಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಿದರು.

ದೇಶದ ಭದ್ರತೆ ವಿಷಯದಲ್ಲಿ ರಾಷ್ಟ್ರ ಪ್ರೇಮದ ಮಾತುಗಳನ್ನಾಡುವ ಪ್ರಧಾನಿ ವಿಮಾನ ಖರೀದಿ ವಿಚಾರದಲ್ಲಿ ದೇಶದ ಹಿತಾಸಕ್ತಿ ಬಲಿ ಕೊಟ್ಟಿದ್ದು, ಎಚ್‌ಎಎಲ್‌ಗೆ ಸಿಗುವ ಅವಕಾಶವನ್ನು ತಪ್ಪಿಸಿದ್ದಾರೆ. ಅಲ್ಲದೇ ಸುಮಾರು 60 ಸಾವಿರ ಕೋಟಿ ರೂ. ದೇಶದ ಸಾರ್ವಜನಿಕರ ಹಣ ಲೂಟಿ ಮಾಡಿರುವ ನೀರವ್‌ ಮೋದಿ, ಚೌಕ್ಸಿ, ಅನಿಲ್‌ ಅಂಬಾನಿ ಜತೆ  ಪ್ರಧಾನಿ ಮೋದಿ ಭಾಗಿಯಾಗಿ ಬೂಟಾಟಿಕೆ ಸರ್ಕಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಟಾಪ್ ನ್ಯೂಸ್

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-bng

Bengaluru: 54 ಪಾಲಿಕೆ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

16-bng

Bengaluru: 4 ಕೋಟಿ ಪ್ರಯಾಣಿಕರು: ಏರ್‌ ಪೋರ್ಟ್ ದಾಖಲೆ

15-metro

Bengaluru: ಪ್ರತಿ ಸೋಮವಾರ ಮುಂಜಾನೆ 4.15ರಿಂದಲೇ ಮೆಟ್ರೋ ಸೇವೆ

14-bng

Bengaluru: ತಾಯಿಗೆ ನಿಂದಿಸುತ್ತಿದ್ದ ತಮ್ಮನ ಕೊಂದ ಸಹೋದರನ ಬಂಧನ

13-bng

Bengaluru: ಕೆಂಗೇರಿಯ ಮಧು ಪೆಟ್ರೋಲ್‌ ಬಂಕ್‌ ಜಂಕ್ಷನ್‌ ಮೃತ್ಯುಕೂಪ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.