Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Team Udayavani, Jan 5, 2025, 9:44 AM IST
ಬೆಂಗಳೂರು: ನವವಿವಾಹಿತನೊಬ್ಬ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್.ಟಿ.ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೇವಿಲಾಲ್ (30) ಆತ್ಮಹತ್ಯೆ ಮಾಡಿಕೊಂಡವ. ಆರ್.ಟಿ.ನಗರದ ಚಾಮುಂಡೇಶ್ವರಿ ನಗರದ ನಿವಾಸಿ ದೇವಿಲಾಲ್ ಶುಕ್ರವಾರ ರಾತ್ರಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ.
ರಾಜಸ್ತಾನ ಮೂಲದ ದೇವಿಲಾಲ್ ಗೆ ಒಂದು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಮೃತನ ಪೋಷಕರ ಜತೆ ಚಾಮುಂಡೇಶ್ವರಿ ನಗರದಲ್ಲಿ ವಾಸವಾಗಿದ್ದ. ತಂದೆ ಶಂಭುಲಾಲ್ ಚಿನ್ನದ ವ್ಯಾಪಾರ ಮಾಡುತ್ತಿದ್ದು, ದೇವಿಲಾಲ… ಸಹ ಇದೇ ಕೆಲಸ ಮಾಡುತ್ತಿದ್ದ. ಸಂಬಂಧಿಕರೊಬ್ಬರಿಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಮೃತನ ಪಾಲಕರು ಹಾಗೂ ಪತ್ನಿ ಎಲ್ಲರೂ ಮೂರು ದಿನಗಳ ಹಿಂದೆ ರಾಜಸ್ತಾನಕ್ಕೆ ತೆರಳಿದ್ದರು. ಈತ ಮನೆಯಲ್ಲಿ ಒಬ್ಬನೇ ಉಳಿದುಕೊಂಡಿದ್ದ ಎಂದು ಪೊಲೀಸರು ಹೇಳಿದರು.
ಶುಕ್ರವಾರ ತನ್ನ ತಂದೆಯೊಂದಿಗೆ ಕರೆ ಮಾಡಿ ಮಾತನಾಡಿದ್ದ ದೇವಿಲಾಲ್, ಅದೇ ದಿನ ರಾತ್ರಿ ಮನೆಯಲ್ಲಿ ಮದ್ಯಸೇವಿಸಿ ಬಳಿಕ ಹೊಟೇಲ್ ನಿಂದ ಊಟ ತರಿಸಿಕೊಂಡು ತಿಂದಿದ್ದಾನೆ. ಕೆಲಹೊತ್ತಿನ ಬಳಿಕ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪಾಲಕರಿಗೆ ವಿಷಯ ತಿಳಿಸಲಾಗಿದ್ದು, ಅವರು ರಾಜಸ್ತಾನದಿಂದ ನಗರಕ್ಕೆ ಬರುತ್ತಿದ್ದಾರೆ. ಸದ್ಯ ಮೃತನ ಮೊಬೈಲ್ ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆರ್.ಟಿ.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.