ಜ್ಯುವೆಲ್ಸ್ ಆಫ್ ಇಂಡಿಯಾ ನಾಳೆಯಿಂದ
Team Udayavani, Oct 25, 2018, 12:08 PM IST
ಬೆಂಗಳೂರು: ಜುವೆಲ್ಸ್ ಆಫ್ ಇಂಡಿಯಾ ವತಿಯಿಂದ ಸೇಂಟ್ ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ ಅ.26ರಿಂದ 29ರವರೆಗೆ ಭಾರತದ ಅತಿ ದೊಡ್ಡ ಆಭರಣ ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ.
ಬುಧವಾರ ಪ್ರಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಆಭರಣ ಪ್ರದರ್ಶನದ ಸಂಚಾಲಕ ಸಂದೀಪ್ ಬೇಕಲ್ ಮಾತನಾಡಿ, ದೇಶದ 125ಕ್ಕೂ ಹೆಚ್ಚು ಆಭರಣ ವ್ಯಾಪಾರಿಗಳು ಈ ಮೇಳದಲ್ಲಿ ತಮ್ಮ ವೈವಿದ್ಯಮಯ ಆಭರಣಗಳನ್ನು ಪ್ರದರ್ಶಿಸಲಿದ್ದಾರೆ. ವಿವಿಧ ಅಭಿರುಚಿಯ ಹಾಗೂ ಬಜೆಟ್‌ಗೆ ಸರಿ ಹೊಂದುವ ಮನಮೋಹ ಆಭರಣಗಳು ಒಂದೇ ಸೂರಿನಡಿ ಲಭ್ಯವಿರಲಿವೆ ಎಂದರು.
ನಟಿ ರಾಧಿಕಾ ಕುಮಾರಸ್ವಾಮಿ ಈ ವರ್ಷದ ಜ್ಯುವೆಲ್ಸ್ ಆಫ್ ಇಂಡಿಯಾ ರಾಯಭಾರಿಯಾಗಿದ್ದಾರೆ. ಈ ಬಾರಿಯ ಪ್ರದರ್ಶನದಲ್ಲಿ ಭೀಮಾ ಜ್ಯುವೆಲ್ಲರ್ ಮತ್ತು ಜೋಯಲುಕ್ಕಾಸ್ ಜ್ಯುವೆಲರ್ ಪ್ರಮುಖ ಆಕರ್ಷಣೆಯಾಗಿವೆ. ಜ್ಯುವೆಲ್ಸ್ ಆಫ್ ಇಂಡಿಯಾದಲ್ಲಿ ಭೀಮಾ ಜ್ಯುವೆಲ್ಲರ್ ತನ್ನ ಭೀಮಾ ಮಹಾ ಉತ್ಸವ್ ಲಕ್ಕಿ ಬಹುಮಾನ ಯೋಜನೆ ಹಮ್ಮಿಕೊಂಡಿದ್ದು, ಅದೃಷ್ಟಶಾಲಿ ಗ್ರಾಹಕರಿಗೆ 11 ಟಾಟಾ ಟಿಯೋಗ ಕಾರುಗಳು, 55 ಸ್ಕೂಟರ್‌ಗಳನ್ನು ಬಹುಮಾನವಾಗಿ ನೀಡುತ್ತಿದ್ದಾರೆ ಎಂದರು.
ಮೇಳದಲ್ಲಿ 40,000ಕ್ಕೂ ಹೆಚ್ಚು ಗ್ರಾಹಕರು ಪಾಲ್ಗೊಳ್ಳುವ ನಿರೀಕ್ಷೆ ಇದೆ. 49 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಮೇಳದಲ್ಲಿ ಭೀಮಾ ಜ್ಯುವೆಲ್ಲರ್ಸ್, ಜೋಯಲುಕ್ಕಾಸ್, ಕ್ರಿಯೇಷನ್ ಜ್ಯುವೆಲ್ಲರ್ಸ್, ಪಂಚ ಕೇಸರಿ ಬಡೇರಾ ಜ್ಯುವೆಲ್ಲರ್, ಪಿಎಂಜೆ ಜ್ಯುವೆಲ್ಲರ್, ನೀಲಕಾಂತ ಜ್ಯುವೆಲ್ಸ್ , ಗಣೇಶ್ ಡೈಮಂಡ್ ಜ್ಯುವೆಲ್ಲರ್ ಸಂಸ್ಥೆಗಳು ಆಭರಣಗಳನ್ನು ಪ್ರದರ್ಶಿಸಲಿವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.