![1-sidda](https://www.udayavani.com/wp-content/uploads/2025/02/1-sidda-415x281.jpg)
![1-sidda](https://www.udayavani.com/wp-content/uploads/2025/02/1-sidda-415x281.jpg)
Team Udayavani, Jan 18, 2023, 10:41 PM IST
ಬೆಂಗಳೂರು: ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿ (ಕರ್ನಾಟಕ), ಕಾಕಿನಾಡ, ಕರ್ನೂಲ್ (ಆಂಧ್ರಪ್ರದೇಶ), ಸಿಲ್ಚಾರ್ (ಅಸ್ಸಾಂ), ಮಲಪ್ಪುರಂ ಸೇರಿದಂತೆ 16 ನಗರಗಳಲ್ಲಿ ರಿಲಯನ್ಸ್ ಜಿಯೋ ತನ್ನ ಟ್ರೂ 5G ಸೇವೆಗಳನ್ನು ಪ್ರಾರಂಭಿಸಿದೆ. ಇದರಲ್ಲಿ ಪಾಲಕ್ಕಾಡ್, ಕೊಟ್ಟಾಯಂ, ಕಣ್ಣೂರು (ಕೇರಳ), ತಿರುಪ್ಪೂರ್ (ತಮಿಳುನಾಡು), ನಿಜಾಮಾಬಾದ್, ಖಮ್ಮಂ (ತೆಲಂಗಾಣ), ಮತ್ತು ಬರೇಲಿ (ಉತ್ತರ ಪ್ರದೇಶ) ಸಹ ಒಳಗೊಂಡಿದೆ.
ರಿಲಯನ್ಸ್ ಜಿಯೋ ದಾವಣಗೆರೆ, ಹೊಸಪೇಟೆ, ಶಿವಮೊಗ್ಗ, ಬೀದರ್, ಗದಗ-ಬೆಟಗೇರಿಯಲ್ಲಿ 5ಜಿ ಸೇವೆಗಳನ್ನು ಪ್ರಾರಂಭಿಸಿದ ಮೊದಲ ಮತ್ತು ಏಕೈಕ ಆಪರೇಟರ್ ಆಗಿದೆ.5G ಸೇವೆಯನ್ನು ಪಡೆಯುವುದಕ್ಕೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ, 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಲು ಈ ನಗರಗಳಲ್ಲಿನ ಜಿಯೋ ಬಳಕೆದಾರರನ್ನು ಜಿಯೋ ವೆಲ್ ಕಮ್ ಕೊಡುಗೆಗೆ ಆಹ್ವಾನಿಸಲಾಗುತ್ತದೆ.
ಈ ಸಂದರ್ಭದಲ್ಲಿ ಮಾತನಾಡಿದ ಜಿಯೋ ವಕ್ತಾರರು, “7 ರಾಜ್ಯಗಳಾದ್ಯಂತ 16 ನಗರಗಳಲ್ಲಿ ಜಿಯೋ ಟ್ರೂ 5ಜಿ ಸೇವೆಗಳನ್ನು ಬಿಡುಗಡೆ ಮಾಡಲು ನಾವು ಹೆಮ್ಮೆಪಡುತ್ತೇವೆ, ಇದರೊಂದಿಗೆ ಒಟ್ಟು ಸಂಖ್ಯೆಯನ್ನು 134 ನಗರಗಳಿಗೆ ಕೊಂಡೊಯ್ದಿದ್ದೇವೆ. 2023ರ ಹೊಸ ವರ್ಷದಲ್ಲಿ ಜಿಯೋ ಟ್ರೂ 5ಜಿ ತಂತ್ರಜ್ಞಾನದ ರೂಪಾಂತರದ ಪ್ರಯೋಜನಗಳನ್ನು ಪ್ರತಿ ಜಿಯೋ ಬಳಕೆದಾರರು ಆನಂದಿಸಲು ನಾವು ಬಯಸುತ್ತೇವೆ. ಏಕೆಂದರೆ ನಾವು ದೇಶದಾದ್ಯಂತ ಟ್ರೂ 5ಜಿ ಜಾರಿಯ ವೇಗ ಮತ್ತು ತೀವ್ರತೆಯನ್ನು ಹೆಚ್ಚಿಸಿದ್ದೇವೆ.
“ಕರ್ನಾಟಕ, ಆಂಧ್ರಪ್ರದೇಶ, ಅಸ್ಸಾಂ, ಕೇರಳ, ತಮಿಳುನಾಡು, ತೆಲಂಗಾಣ ಮತ್ತು ಉತ್ತರ ಪ್ರದೇಶ ರಾಜ್ಯ ಸರ್ಕಾರಗಳು ಈ ಪ್ರದೇಶಗಳನ್ನು ಡಿಜಿಟಲೈಸ್ ಮಾಡುವ ನಮ್ಮ ಪ್ರಯತ್ನಕ್ಕೆ ನಿರಂತರ ಬೆಂಬಲ ನೀಡಿದ್ದಕ್ಕಾಗಿ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ,” ಎಂದಿದ್ದಾರೆ.
ಇದನ್ನೂ ಓದಿ: ತೇಜಸ್ವಿ ಸೂರ್ಯ ಆಕಸ್ಮಿಕವಾಗಿ ಡೋರ್ ಓಪನ್ ಮಾಡಿದ್ದರು!: ಸಚಿವ ಸಿಂದಿಯಾ ಸ್ಪಷ್ಟನೆ
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.