ನಗರದಲ್ಲಿ ಹಾಸಿಗೆ ಪಡೆಯಲು ಜಂಟಿ ತಪಾಸಣೆ
Team Udayavani, Apr 23, 2021, 12:57 PM IST
ಬೆಂಗಳೂರು: ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಇನ್ನೂ 4000 ಹಾಸಿಗೆಗಳನ್ನು ಸ್ವಾಧೀನಕ್ಕೆ ಪಡೆಯಲು ಪೊಲೀಸ್ ಹಾಗೂ ಬಿಬಿಎಂಪಿ ಅಧಿಕಾರಿಗಳು ಜಂಟಿಯಾಗಿ ಮೂರ್‍ನಾಲ್ಕುದಿನ ಆಸ್ಪತ್ರೆಗಳಿಗೆ ದಿಢೀರ್ ಭೇಟಿ ನೀಡಿ ಪಡೆಯಲಿದ್ದಾರೆ ಎಂದು ಸಚಿವಬಸವರಾಜ ಬೊಮ್ಮಾಯಿ ಹೇಳಿದರು.
ವಿಕಾಸಸೌಧದಲ್ಲಿ ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ, ನಗರ ಪೊಲೀಸ್ ಆಯುಕ್ತ ಕಮಲ್‌ಪಂಥ್ ಹಾಗೂ ಬೆಂಗಳೂರಿನ ಉಪ ಪೊಲೀಸ್ ಆಯುಕ್ತರೊಂದಿಗೆ ವಿಡಿಯೊ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಮುಖ್ಯಮಂತ್ರಿ ಬಿ.ಎಸ್‌ಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಕೋವಿಡ್ ಚಿಕಿತ್ಸೆಗೆ ಲಭ್ಯವಿರುವಹಾಸಿಗೆಗಳ ಬಗ್ಗೆ ಮಾಹಿತಿ ಪಡೆಯುವ ಜತೆಗೆಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಿದ್ದು,ಅದರಂತೆ ಬಿಬಿಎಂಪಿ, ಪೊಲೀಸ್ ಅಧಿಕಾರಿಗಳೊಂದಿಗೆಚರ್ಚೆ ನಡೆಸಿ ಅಗತ್ಯ ಸೂಚನೆ ನೀಡಲಾಗಿದೆ ಎಂದುತಿಳಿಸಿದರು. ನಗರದ ಖಾಸಗಿ ಆಸ್ಪತ್ರೆಗಳು 11,000ಹಾಸಿಗೆಗಳನ್ನು ಕಾಯ್ದಿರಿಸಿದ್ದವು.
ಆದರೆ ಈ ಬಾರಿ7000 ಹಾಸಿಗೆಗಳಷ್ಟೇ ಲಭ್ಯವಾಗಿವೆ. ಉಳಿದ 4000ಹಾಸಿಗೆ ಪಡೆಯಲು ಜಂಟಿ ಕಾರ್ಯಾಚರಣೆ ನಡೆಸುವಂತೆ ಬಿಬಿಎಂಪಿ ಮುಖ್ಯಆಯು ಕ್ತರು, ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ನಗರವನ್ನು 8ವಲಯಗಳಾಗಿ ವಿಂಗಡಿಸಲಾಗಿದೆ. ಪ್ರತಿವಲಯಕ್ಕೆ ಒಬ್ಬ ಉಪ ಪೊಲೀಸ್‌ಆಯುಕ್ತರು ಹಾಗೂ ಬಿಬಿಎಂಪಿ ಜಂಟಿ ಆಯುಕ್ತರನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಈ ತಂಡಗಳುಗುರುವಾರದಿಂದಲೇ ತಮ್ಮ ವ್ಯಾಪ್ತಿಯಲ್ಲಿನ ಖಾಸಗಿಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿವೆ.ಖಾಲಿಯಿರುವ ಹಾಸಿಗೆಗಳ ಮಾಹಿತಿ ಪಡೆದುಮೂರ್‍ನಾಲ್ಕು ದಿನದೊಳಗೆ ಪೂರ್ಣ ಪ್ರಮಾಣದಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಪಡೆಯಲಿವೆ.
ಆಮ್ಲಜನಕಸೌಲಭ್ಯ ಸಹಿತ ಹಾಸಿಗೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿಪಡೆಯುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ನಗರದ ಹೊರಗೆ ಅಂತ್ಯಕ್ರಿಯೆಗೆ ವ್ಯವಸ್ಥೆ: ಅಶೋಕ್
ನಗರದಲ್ಲಿ ಕೋವಿಡ್ ಸೋಂಕಿನಿಂದಮೃತಪಟ್ಟವರ ಅಂತ್ಯಕ್ರಿಯೆಗೆ ವಿದ್ಯುತ್ ಚಿತಾಗಾರಗಳಮೇಲೆ ಒತ್ತಡ ಹೆಚ್ಚಾಗುತ್ತಿರುವ ಹಿನ್ನೆಲೆನಗರದ ಹೊರ ಭಾಗದ ತಾವರೆಕೆರೆ ಬಳಿ4 ಎಕರೆ ಜಾಗದಲ್ಲಿ ತಾತ್ಕಾಲಿಕವಾಗಿ ಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗಿದ್ದು,ಶುಕ್ರವಾರದಿಂದಲೇ ಬಳಕೆಗೆ ಅವಕಾಶಕಲ್ಪಿಸಲಾಗುವುದು ಎಂದು ಸಚಿವ ಆರ್.ಅಶೋಕ್ ಹೇಳಿದರು.
ವಿಕಾಸಸೌಧದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು,ನಗರ ಪೊಲೀಸ್ ಆಯುಕ್ತರು, ಪಾಲಿಕೆ, ಪೊಲೀಸ್‌ಇಲಾಖೆ ಹಿರಿಯ ಅಧಿಕಾರಿಗಳದೊಂದಿಗೆ ಸಚಿವಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ನಡೆದವಿಡಿಯೊ ಸಂವಾದದ ಬಳಿಕ ಮಾತನಾಡಿದರು.
ನಗರದ ವಿದ್ಯುತ್ ಚಿತಾಗಾರ ಬಳಿಅಂತ್ಯಕ್ರಿಯೆಗಾಗಿ ಮೃತದೇಹಗಳನ್ನು ಹೊತ್ತಆ್ಯಂಬುಲೆನ್ಸ್‌ಗಳು ಸಾಲುಗಟ್ಟಿ ನಿಲ್ಲುವುದನ್ನುತಡೆಯಲು ಕ್ರಮ ವಹಿಸಲಾಗುತ್ತಿದೆ. ಬೆಂಗಳೂರುನಗರ ಜಿಲ್ಲಾಧಿಕಾರಿಯೊಂದಿಗೆ ತಾವರೆಕೆರೆ ಬಳಿ 4ಎಕರೆ ಸರ್ಕಾರಿ ಭೂಮಿಯನ್ನು ಗುರುತಿಸಿಸಂಪ್ರದಾಯ ಬದ್ಧವಾಗಿ ಕಟ್ಟಿಗೆಯಿಂದಅಂತ್ಯಕ್ರಿಯೆಗೆ ವ್ಯವಸ್ಥೆ ಮಾಡಲಾಗುತ್ತಿದೆಎಂದು ಹೇಳಿದರು.
ಈಗಾಗಲೇ ಬೋರ್‌ವೆಲ್‌ಕೊರೆಯಲಾಗಿದ್ದು, ವಿದ್ಯುತ್ ಸಂಪರ್ಕಕಲ್ಪಿಸಲಾಗುತ್ತಿದೆ. ಹಾಗೆಯೇ ತಡೆಗೋಡೆನಿರ್ಮಾಣವೂ ನಡೆದಿದೆ. ಸದ್ಯ 20 ಲೋಡ್ ಕಟ್ಟಿಗೆದಾಸ್ತಾನು ಮಾಡಲಾಗಿದ್ದು, ನೀಲಗಿರಿ ತೋಪುಗಳಿಂದ100 ಲೋಡ್ ಕಟ್ಟಿಗೆ ಪೂರೈಸಲು ಸೂಚಿಸಲಾಗಿದೆ.ಶುಕ್ರವಾರದಿಂದಲೇ ಅಂತ್ಯಕ್ರಿಯೆಗೆ ವ್ಯವಸ್ಥೆಕಲ್ಪಿಸಲಾಗುತ್ತಿದ್ದು, ನಿತ್ಯ 50- 60 ಮೃತದೇಹಗಳಅಂತ್ಯಕ್ರಿಯೆ ನೆರವೇರಿಸಬಹುದಾಗಿದೆ. ಎರಡುತಿಂಗಳ ಮಟ್ಟಿಗೆ ತಾತ್ಕಾಲಿಕವಾಗಿ ವ್ಯವಸ್ಥೆಕಲ್ಪಿಸಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.