ಮಳೆ ಅನಾಹುತ ತಡೆಗೆ ಜಂಟಿ ಸಭೆ

Team Udayavani, Oct 12, 2019, 9:47 AM IST

bng-tdy-1

ಬೆಂಗಳೂರು: ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಬಿಬಿಎಂಪಿ ಹಾಗೂ ಜಲಮಂಡಳಿಯ ಅಧಿಕಾರಿಗಳು ಜಂಟಿಯಾಗಿ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಮೇಯರ್‌ ಎಂ. ಗೌತಮ್‌ಕುಮಾರ್‌ ಸೂಚನೆ ನೀಡಿದರು.

ಬೊಮ್ಮನಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿ ಶುಕ್ರವಾರ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಬಿಬಿಎಂಪಿ ಅಧಿಕಾರಿಗಳ ಜತೆ ದ್ವಿಚಕ್ರ ವಾಹನದಲ್ಲಿ ಸಂಚರಿಸಿ ರಸ್ತೆ, ಕೆರೆ, ಕಾಲುವೆಗಳನ್ನು ಪರಿಶೀಲನೆ ನಡೆಸಿ ಮಾತನಾಡಿದ ಅವರು, ಮಳೆ ಅನಾಹುತಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳುವುದು ಅವಶ್ಯಕವಾಗಿದೆ. ಹೀಗಾಗಿ, ಒಳಚರಂಡಿ ನೀರು ಎಲ್ಲೆಲ್ಲಿ ರಾಜಕಾಲುವೆ ಮೂಲಕ ಕೆರೆಗೆ ಸೇರುತ್ತಿದೆ ಎಂಬುದನ್ನು ಜಲಮಂಡಳಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿ, ವರದಿ ಸಿದ್ಧಪಡಿಸಿ ಕೂಡಲೆ ಪರ್ಯಾಯ ಮಾರ್ಗ ನಿರ್ಮಿಸಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಬೇಕು ಎಂದು ನಿರ್ದೇಶನ ನೀಡಿದರು.

ಜಲಾವೃತಗೊಳ್ಳುವ ಪ್ರದೇಶಗಳಲ್ಲಿ ನೀರು ಹೀರುವ ಯಂತ್ರಗಳನ್ನು ಅಳವಡಿಸಬೇಕು. ಈ ಮೂಲಕ ಬಡಾವಣೆಗಳಲ್ಲಿ ಮಳೆ ನೀರು ನಿಲ್ಲದಂತೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಬೊಮ್ಮನಹಳ್ಳಿ ಶಾಸಕ ಸತೀಶ್‌ ರೆಡ್ಡಿ ಮಾತನಾಡಿ, ಬೊಮ್ಮನಹಳ್ಳಿ ವಲಯದಲ್ಲಿ ಒಟ್ಟು 88.6 ಕಿ.ಮೀ ಮುಖ್ಯರಸ್ತೆಯಿದ್ದು, ಎಲ್ಲಾ ರಸ್ತೆಗಳ ಇಕ್ಕೆಲಗಳಲ್ಲಿರುವ ಪಾದಚಾರಿ ಮಾರ್ಗ, ಕಾಲುವೆ ಹಾಗೂ ರಸ್ತೆ ಗುಂಡಿಗಳನ್ನು ಶೀಘ್ರ ದುರಸ್ತಿಪಡಿಸಬೇಕಿದೆ. ಈ ಕಾಮಗಾರಿಯಲ್ಲಿ ಗುಣಮಟ್ಟ ಕಾಪಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಅಧಿಕಾರಿಗಳು ಶಿಸ್ತಿನಿಂದ ಕೆಲಸ ಮಾಡಬೇಕು. ಯಾರೊಬ್ಬರೂ ಸಬೂಬು ನೀಡುವಂತಿಲ್ಲ ಎಂದು ಸೂಚನೆ ನೀಡಿದರು.

ಇನ್ನು ಮಳೆಯಿಂದ ಅನಾಹುತಕ್ಕೆ ತುತ್ತಾಗಿರುವ ಪ್ರದೇಶಗಳಲ್ಲಿ ತ್ವರಿತವಾಗಿ ಕೆಲಸ ಪ್ರಾರಂಭವಾಗಬೇಕು. ರಾಜಕಾಲುವೆ ಒತ್ತುವರಿ ಮಾಡಿಕೊಂಡವರ ಪಟ್ಟಿ ಸಿದ್ಧ ಮಾಡಿ, ಕೂಡಲೆ ಒತ್ತುವರಿ ತೆರವು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್‌ಗೆ ಸೂಚನೆ ನೀಡಿದರು.

ಬೇಗೂರು ರಸ್ತೆ ವಿಸ್ತರಣೆ ಪ್ರಕ್ರಿಕೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ಅಭಿವೃದ್ಧಿ ಹಕ್ಕು ಹಸ್ತಾಂತರ (ಟಿಡಿಆರ್‌) ಪತ್ರಗಳನ್ನು ಆಸ್ತಿ ಮಾಲೀಕರಿಗೆ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕೂಡಲೆ ರಸ್ತೆ ವಿಸ್ತರಣೆ ಕಾಮಗಾರಿ ಪ್ರಾರಂಭಿಸುವಂತೆ ಆದೇಶಿಸಿದರು.

ಉಪ ಮೇಯರ್‌ ರಾಮ್‌ಮೋಹನ್‌ ರಾಜ್‌, ಪಾಲಿಕೆ ಸ್ಥಳೀಯ ಸದಸ್ಯರಾದ ಅರಕೆರೆ ವಾರ್ಡ್‌ ಭಾಗ್ಯಲಕ್ಷ್ಮೀ ಮುರಳಿ, ಜರಗನಹಳ್ಳಿ ವಾರ್ಡ್‌ ಬಿ.ಎಂ.ಶೋಭ, ಹೊಂಗಸಂದ್ರ ವಾರ್ಡ್‌ ಭಾರತಿ ರಾಮಚಂದ್ರ, ವಲಯ ಜಂಟಿ ಆಯುಕ್ತರು, ಮುಖ್ಯ ಇಂಜಿನಿರ್ಯ, ರಾಜಕಾಲುವೆ ವಿಭಾಗದ ಮುಖ್ಯ ಇಂಜಿನಿರ್ಯ ಹಾಗೂ ಪಾಲಿಕೆ ಅಧಿಕಾರಿಗಳು  ಉಪಸ್ಥಿತರಿದ್ದರು.

ಟಾಪ್ ನ್ಯೂಸ್

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Udupi: ಜ. 9-15: ಶ್ರೀಕೃಷ್ಣ ಮಠದಲ್ಲಿ ಸಪ್ತೋತ್ಸವ ಸಂಭ್ರಮ

Ajit-Car-Accident

Car Crash: ಕಾರು ರೇಸ್‌ ತರಬೇತಿ ವೇಳೆ ನಟ ಅಜಿತ್‌ ಕುಮಾರ್‌ ಕಾರು ಅಪಘಾತ!

Ramamandir-Glaas

Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

cr

ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Joshi-rader

Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್‌ ಸ್ಥಾಪನೆ: ಕೇಂದ್ರ ಸಚಿವ ಜೋಶಿ

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Gangolli: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.