ಬಚ್ಚಿಟ್ಟುಕೊಂಡು ಬಲೆ ಬೀಸಿದರೆ ಜೋಕೆ!


Team Udayavani, Oct 27, 2018, 11:15 AM IST

bachchitukondu.jpg

ಬೆಂಗಳೂರು: “ರಸ್ತೆ ತಿರುವು, ಮರೆಯಲ್ಲಿ ನಿಂತು ಒಮ್ಮೆಲೆ ಮುಗಿಬಿದ್ದು ವಾಹನ ಸವಾರರನ್ನು ಹಿಡಿದು, ಗಾಡಿ ಕೀ ಕಸಿದುಕೊಂಡು ಅನಗತ್ಯ ತೊಂದರೆ ಕೊಡಬೇಡಿ’!

ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿರುವ ಕಳ್ಳರನ್ನು ಹಿಡಿಯುವ ರೀತಿಯಲ್ಲಿ, ಯಾರಿಗೂ ಕಾಣದಂತೆ ರಸ್ತೆಯ ಮರೆಯಲ್ಲಿ ನಿಂತು ವಾಹನ ಸವಾರರನ್ನು ಹಿಡಿದು ತೊಂದರೆ ಕೊಡುವುದು ಬೇಡ ಎಂದು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯಕ್ತ ಪಿ.ಹರಿಶೇಖರನ್‌ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ರಸ್ತೆ ತಿರುವು, ಸಾರ್ವಜನಿಕರಿಗೆ ಕಾಣದಂತೆ ಮರೆಯಲ್ಲಿ ನಿಂತು ಸಂಚಾರ ನಿಯಮ ಉಲ್ಲಂ ಸುವುದಕ್ಕೆ ಸಂಬಂಧಿಸಿದಂತೆ ಸಂಚಾರ ಪೊಲೀಸರು ಮಾಡುತ್ತಿದ್ದ ಈ ತೆರೆಮರೆಯ ಕಾರ್ಯಶೈಲಿ ಕಸರತ್ತಿಗೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಈ ಬಗ್ಗೆ ಟ್ರೋಲ್‌ ಮಾಡುತ್ತಿದ್ದರು. ಈ ಬೆನ್ನಲ್ಲೇ ಹೆಚ್ಚುವರಿ ಪೊಲೀಸ್‌ ಆಯಕ್ತ ಹರಿಶೇಖರನ್‌ ಇಂತಹದ್ದೊಂದು ಸೂಚನೆ ರವಾನಿಸಿದ್ದಾರೆ. 

ಕೆಲದಿನಗಳ ಹಿಂದಷ್ಟೇ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಪಿ.ಹರಿಶೇಖರನ್‌, ಸಂಚಾರ ವಿಭಾಗದ ಡಿಸಿಪಿ, ಎಸಿಪಿ, ಇನ್ಸ್‌ಪೆಕ್ಟರ್‌ಗಳ ಸಭೆ ನಡೆಸಿದ್ದಾರೆ. ಸಭೆಯಲ್ಲಿ  “ಜನಸ್ನೇಹಿ ಪೊಲೀಸ್‌’ ತತ್ವದ ಅಡಿಯಲ್ಲಿ ಜನರಿಗೆ ಮತ್ತಷ್ಟು ಪರಿಣಾಮಕಾರಿ ಕಾರ್ಯನಿರ್ವಹಣೆ ಸಾಧ್ಯತೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಈ ನಿಟ್ಟಿನಲ್ಲಿ ರಸ್ತೆ ತಿರುವಿನ ಮರೆಯಲ್ಲಿ ಇದ್ದುಕೊಂಡು ವಾಹನ ಸವಾರನ್ನು ನಿಲ್ಲಿಸಿ ಅನಗತ್ಯ ತೊಂದರೆ ಕೊಡಬಾರದು. ಜತೆಗೆ, ವಿಶೇಷ ಕಾರ್ಯಾಚರಣೆ ನಡೆಸುವಾಗ ಸಾರ್ವಜನಿಕರ ಜತೆ ವೃತ್ತಿಬದ್ಧತೆಗೆ ಅನುಗುಣವಾಗಿ ಗೌರವಯುತವಾಗಿ ನಡೆದುಕೊಳ್ಳಬೇಕು.

ಪಾರ್ಕಿಂಗ್‌ ಪಾಲಿಸಿಯಲ್ಲಿ ದಂಡ ವಸೂಲಾತಿಯೇ ಮುಖ್ಯವಲ್ಲ ಎಂಬುದನ್ನು ನೆನಪಿನಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿರುವ ಹರಿಶೇಖರನ್‌, ಈ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಮ್ಮ ಅಧೀನ ಸಿಬ್ಬಂದಿಗೆ ತಾಕೀತು ಮಾಡುವಂತೆ ಸೂಚಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಅನಗತ್ಯ ಬ್ಯಾರಿಕೇಡ್‌ ಹಾಕಬೇಡಿ: ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಹಾಗೂ ಸಂಚಾರ ನಿಯಮಗಳ ಉಲ್ಲಂ ಸುವವರ ವಿರುದ್ಧ ನಡೆಸಲಾಗುವ ವಿಶೇಷ ಕಾರ್ಯಾಚರಣೆ ವೇಳೆ ಅನಗತ್ಯ ಬ್ಯಾರಿಕೇಡ್‌ಗಳನ್ನು ಹಾಕಬೇಡಿ. ಇದರಿಂದ ಟ್ರಾಫಿಕ್‌ ಸಮಸ್ಯೆಯೂ ಉಂಟಾಗುವ ಸಾಧ್ಯತೆಯಿದೆ. ಜತೆಗೆ, ಈಗಾಗಲೇ ರಸ್ತೆ ಮಧ್ಯೆ ಅನಾವಶ್ಯಕ ಬ್ಯಾರಿಕೇಡ್‌ಗಳಿದ್ದರೆ ತೆರವುಗೊಳಿಸಿ ಎಂದು ಸಲಹೆ ನೀಡಿದ್ದಾರೆ.

ಆರೋಪ ಬಂದರೆ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ: ಆಯಾ ಪೊಲೀಸ್‌ ಠಾಣೆಗಳ ಇನ್ಸ್‌ಪೆಕ್ಟ್ರ್‌ಗಳು ತಮ್ಮ ವ್ಯಾಪ್ತಿಯಲ್ಲಿ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಅವರ ಸಮಸ್ಯೆಗಳನ್ನು ಆಲಿಸಿ ಠಾಣಾ ಹಂತದಲ್ಲಿಯೇ ಪರಿಹರಿಸಬೇಕು. ತಮ್ಮ ಠಾಣೆಗೆ ಬೇಕಾದ ಮೂಲ ಸೌಕರ್ಯಗಳ ಬೇಡಿಕೆಗಳ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು. ಇದಲ್ಲದೆ, ತಮ್ಮ ಠಾಣೆಗೆ ಸಂಬಂಧಪಟ್ಟ ಎಲ್ಲ ಮಾಹಿತಿಯನ್ನು ಮೊಬೈಲ್‌ನಲ್ಲಿ ದಾಖಲಿಸಿಕೊಂಡು ಕೇಳಿದ ತಕ್ಷಣ ಒದಗಿಸಬೇಕು.

ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವುದಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ಅಗತ್ಯವಿರುವ ಪರಿಕರಗಳ ಸಂಬಂಧ ಪ್ರಸ್ತಾವನೆ ಸಲ್ಲಿಸಬೇಕು. ಠಾಣೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಅಧಿಕಾರಿಗಳ ವಿರುದ್ಧ ಅನಗತ್ಯ ಕಿರುಕುಳ ನೀಡುತ್ತಿರುವ ವಿಚಾರ ಗಮನಕ್ಕೆ ಬಂದರೆ ಠಾಣಾ ಇನ್ಸ್‌ಪೆಕ್ಟರ್‌ಗಳೇ ನೇರ ಹೊಣೆಯೆಂದು ಪರಿಗಣಿಸಿ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಆಫ್ರಿಕನ್ನರ ಮೇಲೆ ಕಣ್ಣಿಡಿ: ಕಾನೂನು ಸುವ್ಯವಸ್ಥೆ ಪೊಲೀಸ್‌ ಠಾಣೆ ಸಿಬ್ಬಂದಿಯಂತೆ, ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ನೆಲೆಸಿರುವ ವಿದೇಶಿ ವಿದ್ಯಾರ್ಥಿಗಳು, ಪ್ರಮುಖವಾಗಿ ಆಫ್ರಿಕನ್‌ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಿಟ್ಟುಕೊಂಡಿರಬೇಕು. ವಿದೇಶಿ ವಿದ್ಯಾರ್ಥಿಗಳು ಸಂಚಾರ ನಿಯಮ ಉಲ್ಲಂ ಸಿದರೆ ಅಥವಾ ಅವರಿಗೆ ಅಪರಾಧ ಕೃತ್ಯಗಳ ಹಿನ್ನೆಲೆಯಿದ್ದರೆ ಅವರ ಬಗ್ಗೆ ಹೆಚ್ಚು ನಿಗಾ ವಹಿಸರಬೇಕು ಎಂದು ಸಭೆಯಲ್ಲಿ ಸೂಚನೆ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಂಚಾರ ಪೊಲೀಸರು ಮತ್ತಷ್ಟು “ಜನಸ್ನೇಹಿ’ಯಾಗಿ ಕಾರ್ಯನಿರ್ವಹಿಸಲು ಸೂಚನೆಗಳನ್ನು ನೀಡಲಾಗಿದೆ. ಜತೆಗೆ, ರಸ್ತೆ ತಿರುವು, ಮರೆಯಲ್ಲಿ ನಿಂತು ವಾಹನ ಸವಾರರನ್ನು ಹಿಡಿಯಬೇಡಿ ಎಂದೂ ಸೂಚನೆ ನೀಡಲಾಗಿದೆ.
-ಪಿ.ಹರಿಶೇಖರನ್‌, ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ

* ಮಂಜುನಾಥ್‌ ಲಘುಮೇನಹಳ್ಳಿ 

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.