ಜೆಡಿಎಸ್ ಜೆಪಿ ಭವನ ಉದ್ಘಾಟನೆ ನಾಳೆ
Team Udayavani, Mar 14, 2017, 12:25 PM IST
ಬೆಂಗಳೂರು: ನಗರದ ಶೇಷಾದ್ರಿಪುರಂನಲ್ಲಿ ನಿರ್ಮಾಣಗೊಂಡಿರುವ ನಾಲ್ಕು ಅಂತಸ್ತಿನ ಜೆಡಿಎಸ್ ರಾಜ್ಯ ಕಚೇರಿ “ಜೆಪಿ’ ಭವನ ಬುಧವಾರ ಉದ್ಘಾಟನೆಗೊಳ್ಳಲಿದೆ. ಅಂದು ಮುಂಜಾನೆ ಹೋಮ- ಹವನದ ನಂತರ ಕಚೇರಿ ಉದ್ಘಾಟನೆ ನಡೆಯಲಿದ್ದು, ಅಂದು ರಾಜ್ಯ ಬಜೆಟ್ ಮಂಡನೆಯೂ ಇರುವುದರಿಂದ ಎಲ್ಲ ಶಾಸಕರಿಗೂ ಹಾಜರಿರುವಂತೆ ಸೂಚನೆ ನೀಡಲಾಗಿದೆ. ಕಚೇರಿ ಉದ್ಘಾಟನಾ ಕಾರ್ಯಕ್ರಮದ ನಂತರ ಶಾಸಕರು ಅಲ್ಲಿಂದಲೇ ನೇರವಾಗಿ ಬಜೆಟ್ ಅಧಿವೇಶನಕ್ಕೆ ಆಗಮಿಸಲಿದ್ದಾರೆ.
ಕಚೇರಿ ಉದ್ಘಾಟನೆ ದಿನ ಬೃಹತ್ ಸಮಾವೇಶ ಆಯೋಜಿಸಲು ಉದ್ಧೇಶಿ ಸಲಾಗಿತ್ತಾದರೂ ಕುಮಾರಸ್ವಾಮಿಯವರ ಅನಾರೋಗ್ಯ ಹಾಗೂ ಅದೇ ದಿನ ರಾಜ್ಯ ಬಜೆಟ್ ಅಧಿವೇಶನ ಇರುವುದರಿಂದ ಮುಂದೂಡಲಾಗಿದೆ. ಈ ಮಧ್ಯೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಎಚ್.ಡಿ.ರೇವಣ್ಣ ಸೋಮವಾರ ನೂತನ ಕಚೇರಿಗೆ ಭೇಟಿ ನೀಡಿ ಸಿದ್ಧತೆ ವೀಕ್ಷಿಸಿದರು.
ಐಟಿ ಕಂಪೆನಿಯಂತಿರುವ ಕಟ್ಟಡ:ಜೆಡಿಎಸ್‌ನ ನೂತನ ಕಟ್ಟಡ ಐಟಿ-ಬಿಟಿ ಕಂಪನಿಗಳ “ಹೈಟೆಕ್’ನಂತಿದ್ದು, ಮೇಜು, ಕುರ್ಚಿ ಸೇರಿದಂತೆ ಒಳಾಂಗಣ ವಿನ್ಯಾಸಕ್ಕೆ ಚೀನಾದಿಂದ ಉಪಕರಣ ತರಿಸಲಾಗಿದೆ. ಬೃಹತ್ ಸಭಾಂಗಣ, ಶಾಸಕರು, ಪಾಲಿಕೆ ಸದಸ್ಯರ ಸಭೆಗೆ ದೊಡ್ಡ ಹಾಲ್ ಇದೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು ಖುದ್ದು ಆಸಕ್ತಿ ವಹಿಸಿ ಕಟ್ಟಡ ನಿರ್ಮಾಣ ಮಾಡಿಸಿದ್ದಾರೆ. ಕಾರ್ಯಕರ್ತರಿಗಾಗಿ ರಿಯಾಯಿತಿ ದರದಲ್ಲಿ ಊಟ-ತಿಂಡಿ ದೊರೆಯುವ ಕ್ಯಾಂಟೀನ್ ವ್ಯವಸ್ಥೆ ಸಹ ಕಲ್ಪಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Road Mishap: 2 ಲಾರಿಗಳ ಮಧ್ಯೆ ಸಿಲುಕಿ ಚಾಲಕ ಸಾವು; ಕೇಸ್
Fraud Case: ಟೆಕಿಗೆ ವಂಚನೆ ಕೇಸ್; ಆರೋಪಿ ಪತ್ತೆಗೆ ತಂಡ ರಚನೆ
New Year: ಹೊಸ ವರ್ಷಾಚರಣೆಗೆ 7ಲಕ್ಷ ಜನ ಭಾಗಿ ನಿರೀಕ್ಷೆ; ಪರಂ
Fraud case: ಚಿನ್ನಾಭರಣ ವಂಚನೆ ಕೇಸ್; ವಿಚಾರಣೆಗೆ ಬಾರದ ವರ್ತೂರ್ಗೆ 3ನೇ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಭಾರತೀಯ ಸಂಸ್ಕೃತಿ ಮತ್ತು ಭಗವದ್ಗೀತೆ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.