ಯುಜಿಸಿ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ
Team Udayavani, Jan 13, 2018, 7:00 AM IST
ಬೆಂಗಳೂರು: ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರ್ಟ್ ಆದೇಶಿಸಿದ್ದರೂ ಅದನ್ನು ಉಲ್ಲಂಘಿಸಿದ ಯುಜಿಸಿ ವಿರುದ್ಧ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದೆ.
2017-18ನೇ ಸಾಲಿಗೆ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲು ಅನುಮತಿ ಕೋರಿ ಕೆಎಸ್‌ಒಯುನಿಂದ ರಾಜ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯ ಪೀಠ, 2 ವಾರದೊಳಗೆ ಅನುಮತಿ ನೀಡುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ನಿರ್ದೇಶಿಸಿ ಅರ್ಜಿ ಇತ್ಯರ್ಥಪಡಿಸಿತ್ತು. ಹೈಕೋರ್ಟ್ ಆದೇಶವನ್ನು ಗಂಭೀರವಾಗಿ ತೆಗೆದುಕೊಳ್ಳದ ಯುಜಿಸಿ ಅಧಿಕಾರಿಗಳು, ಕೆಎಸ್‌ಒಯು ಮಾನ್ಯತೆ ನವೀಕರಣ ಮಾಡಿಲ್ಲ. ನ್ಯಾಯಾಲಯದ ಆದೇಶವನ್ನೇ ಮುಂದಿಟ್ಟುಕೊಂಡು ಕೆಎಸ್‌ಒಯು ಕುಲಪತಿಯವರು ದೆಹಲಿಗೆ ಹೋಗಿ ಯುಜಿಸಿ ಅಧಿಕಾರಿಗಳನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದರು. ಆದರೂ ಯುಜಿಸಿಯಿಂದ ಮಾನ್ಯತೆ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.