ವಾಗ್ಮೋರೆಗೆ 2 ದಿನ ನ್ಯಾಯಾಂಗ ಬಂಧನ
Team Udayavani, Jun 26, 2018, 12:11 PM IST
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಮುಖ ಆರೋಪಿ, ಶೂಟರ್ ಪರಶುರಾಮ್ ವಾಗ್ಮೋರೆಯನ್ನು ಎರಡು ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಎಸ್‌ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪರಶುರಾಮ್ ವಾಗ್ಮೋರೆಯನ್ನು ಸೋಮವಾರ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ ತನಿಖಾಧಿಕಾರಿಗಳು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾ.ಪ್ರಕಾಶ್, ಎರಡು ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದರು.
ಎರಡು ದಿನ ಯಾಕೆ?: ಪ್ರಕರಣ ಸಂಬಂಧ ಈ ಮೊದಲು ಬಂಧನಕ್ಕೆ ಒಳಗಾದ ಆರೋಪಿಗಳಾದ ಪ್ರವೀಣ್, ಅಮೋಲ್ ಕಾಳೆ, ಅಮಿತ್ ದೇಗ್ವೇಕರ್ ಹಾಗೂ ಮನೋಹರ್ ಯಡವೆಯ ನ್ಯಾಯಾಂಗ ಬಂಧನ ಜೂ.27ರಂದು ಅಂತ್ಯವಾಗಲಿದೆ. ಹೀಗಾಗಿ ಪರಶುರಾಮ್ ವಾಗ್ಮೋರೆ ಸೇರಿ ಎಲ್ಲ ಆರೋಪಿಗಳನ್ನು 27ರಂದು ಮತ್ತೂಮ್ಮೆ ನ್ಯಾಯಾಲಯದ ಎದುರು ಹಾಜರುಪಡಿಸಬೇಕು. ಈ ಕಾರಣಕ್ಕೆ ಪರಶುರಾಮ್ ವಾಗ್ಮೋರೆಗೆ ಎರಡು ದಿನ ಮಾತ್ರ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಜಾಮೀನು ನೀಡಬೇಡಿ: ಪ್ರಕರಣದ ಪ್ರಮುಖ ಆರೋಪಿಯಾಗಿರುವ ಪರಶುರಾಮ್ ವಾಗ್ಮೋರೆಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಎಸ್‌ಐಟಿ ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದಾರೆ. ಗೌರಿ ಹತ್ಯೆ ವೇಳೆ ಬೈಕ್ ಓಡಿಸಿದ ಸವಾರ, ಕೃತ್ಯಕ್ಕೆ ಬಳಸಿದ ಪಿಸ್ತೂಲ್ ಹಾಗೂ ಬೈಕ್ ನ್ನೂ ಪತ್ತೆಯಾಗಿಲ್ಲ. ಹಾಗೇ ಗುಂಡು ಹಾರಿಸಿದ ಬಳಿಕ ಇಬ್ಬರು ಅಪರಿಚಿತರು ಬಂದು ಪಿಸ್ತೂಲ್ ತೆಗೆದುಕೊಂಡು ಹೋದರು ಎಂದು ಆರೋಪಿ ಹೇಳಿಕೆ ನೀಡಿದ್ದಾರೆ.
ಈ ಇಬ್ಬರು ಅಪರಿಚಿತರೂ ಸೇರಿ ಪ್ರಕರಣ ಸಂಬಂಧ ಇನ್ನೂ ಮೂವರು ಆರೋಪಿಗಳ ಬಂಧನ ಆಗಬೇಕಿದೆ. ವಾಗ್ಮೋರೆ ಮೂಲಕವೇ ಇವರನ್ನೆಲ್ಲಾ ಬಂಧಿಸಬೇಕು. ಒಂದೊಮ್ಮೆ ಆತನಿಗೆ ಜಾಮೀನು ನೀಡಿದರೆ ಉಳಿದ ಆರೋಪಿಗಳು ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಆದ್ದರಿಂದ ಜಾಮೀನು ಮಂಜೂರು ಮಾಡಬಾರದು ಎಂದು ಮನವಿ ಮಾಡಿದರು.
ಮತ್ತೆ ಎಸ್‌ಐಟಿ ವಶಕ್ಕೆ?: ಜೂ.27ರಂದು ಪ್ರಕರಣದ ಇತರೆ ನಾಲ್ಕು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಗಿಯಲಿದ್ದು, ಅದೇ ದಿನ ವಾಗ್ಮೋರೆ ಸೇರಿ ಎಲ್ಲ ಆರೋಪಿಗಳನ್ನು ಮತ್ತೂಮ್ಮೆ ಎಸ್‌ಐಟಿ ವಶಕ್ಕೆ ಪಡೆಯಲು ತನಿಖಾಧಿಕಾರಿಗಳು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದುವರೆಗೂ ವಾಗ್ಮೋರೆ ಹಾಗೂ ಇತರೆ ನಾಲ್ವರು ಆರೋಪಿಗಳನ್ನು ಒಟ್ಟಿಗೆ ವಿಚಾರಣೆ ನಡೆಸಿಲ್ಲ. ಹೀಗಾಗಿ ಐವರು ಆರೋಪಿಗಳನ್ನು ಒಟ್ಟಿಗೆ ವಶಕ್ಕೆ ಪಡೆದು ವಿಚಾರಣೆ ನಡೆಸಿ ಇನ್ನಷ್ಟು ಮಾಹಿತಿ ಸಂಗ್ರಹಿಸಲು ಎಸ್‌ಐಟಿ ಚಿಂತನೆ ನಡೆಸಿದೆ ಎಂದು ವಿಶ್ವಾಸನೀಯ ಮೂಲಗಳು “ಉದಯವಾಣಿ’ಗೆ ತಿಳಿಸಿವೆ.
ಅಮೋಲ್ ಕಾಳೆ ಸಿಐಡಿ ವಶಕ್ಕೆ?: ಗೌರಿ ಲಂಕೇಶ್ ಹತ್ಯೆಗೆ ರೂಪುರೇಷೆ ಸಿದ್ಧಪಡಿಸಿದ್ದಾನೆ ಎನ್ನಲಾದ ಆರೋಪಿ, ಮಹಾರಾಷ್ಟ್ರದ ಅಮೋಲ್ ಕಾಳೆಗೂ ವಿಚಾರವಾದಿ ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣಕ್ಕೂ ಸಂಬಂಧ ಇರುವ ಬಗ್ಗೆ ಸಿಐಡಿಗೆ ಖಚಿತ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಸದ್ಯದಲ್ಲೇ ಬಾಡಿ ವಾರೆಂಟ್ ಪಡೆದು ಅಮೋಲ್ ಕಾಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ ಎಂದು ಮೂಲಗಳು ಹೇಳಿವೆ.
ಪರಶುರಾಮ್ ವಾಗ್ಮೋರೆಯನ್ನು ನ್ಯಾಯಾಲಯ ಎರಡು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದೆ. ಜಾಮೀನು ಅರ್ಜಿ ಸಲ್ಲಿಸುವ ಕುರಿತು ಜೂ.27ರ ವಿಚಾರಣೆ ಬಳಿಕ ತೀರ್ಮಾನಿಸಲಾಗುವುದು.
ಹರ್ಷ ಮುತಾಲಿಕ್, ವಾಗ್ಮೋರೆ ಪರ ವಕೀಲರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.