ಏ. 4ರವರೆಗೆ ನಲಪಾಡ್ಗೆ ನ್ಯಾಯಾಂಗ ಬಂಧನ
Team Udayavani, Mar 22, 2018, 12:22 PM IST
ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪಿ ಮೊಹಮ್ಮದ್ ನಲಪಾಡ್ ಹ್ಯಾರಿಸ್ಗೆ ಏಪ್ರಿಲ್ 4ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 1ನೇ ಎಸಿಎಂಎಂ ನ್ಯಾಯಾಲಯ ಬುಧವಾರ ಆದೇಶಿಸಿತು.
ನಲಪಾಡ್ ನ್ಯಾಯಾಂಗ ಬಂಧನ ಮುಕ್ತಾಯಗೊಂಡಿದ್ದರಿಂದ ಬುಧವಾರ ಪೊಲೀಸರು, ಪರಪ್ಪನ ಅಗ್ರಹಾರ ಜೈಲಿನಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಪ್ರಾಸಿಕ್ಯೂಶನ್ ಮನವಿ ಆಲಿಸಿದ ನ್ಯಾಯಾಲಯ, ಏಪ್ರಿಲ್ 4ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿತು.
ಫೆ. 17ರಂದು ರಾತ್ರಿ ಫರ್ಜಿ ಕೆಫೆಯಲ್ಲಿ ಉದ್ಯಮಿ ಲೋಕನಾಥ್ ಪುತ್ರ ವಿದ್ವತ್ ಮೇಲೆ ನಲಪಾಡ್ ಹಾಗೂ ಆತನ ಸಹಚರರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಕಳೆದ ಒಂದು ತಿಂಗಳಿಂದ ನಲಪಾಡ್ ಜೈಲಿನಲ್ಲಿದ್ದು, ಹೈಕೋರ್ಟ್ನಲ್ಲಿಯೂ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.