ಕನ್ನಡ ಬರಲ್ಲ ಎಂದ ಮಹಿಳೆಗೆ ನ್ಯಾಯಮೂರ್ತಿ ಕನ್ನಡ ಪಾಠ

Team Udayavani, Sep 2, 2017, 12:09 PM IST

highcourt.jpg

ಬೆಂಗಳೂರು: “ಜನ ತಮಿಳುನಾಡಿಗೆ ಹೋದರೆ ತಮಿಳು ಕಲಿಯುತ್ತಾರೆ, ಕೇರಳಕ್ಕೆ ಹೋದರೆ ಮಲಯಾಳಂ ಕಲಿಯುತ್ತಾರೆ. ಆದರೆ, ಕರ್ನಾಟಕಕ್ಕೆ ಬಂದು ದಶಕಗಳ ಕಾಲ ನೆಲೆಸಿದ್ದರೂ ಕನ್ನಡ ಮಾತ್ರ ಕಲಿಯುವುದಿಲ್ಲ,’ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಅರವಿಂದ ಕುಮಾರ್‌ ಬೇಸರ ವ್ಯಕ್ತಪಡಿಸಿದರು.

ಅವರು ಹೀಗೆ ಬೇಸರ ವ್ಯಕ್ತಪಡಿಸಿದ್ದು, ಕಳೆದ 31 ವರ್ಷಗಳಿಂದ ಬೆಂಗಳೂರಿನಲ್ಲೇ ನೆಲೆಸಿದ್ದರೂ “ಕನ್ನಡ ಗೊತ್ತಿಲ್ಲ’ ಎಂದ ಅರ್ಜಿದಾರ ಮಹಿಳೆಯ ಮಾತು ಕೇಳಿ. “ಮೂರು ದಶಕದಿಂದ ಇಲ್ಲೇ ನೆಲೆಸಿದ್ದೀರ. ನೀವು ಹುಟ್ಟಿ ಬೆಳೆದಿರುವುದೂ ಇಲ್ಲೇ. ಆದರೂ ಕನ್ನಡ ಕಲಿತಿಲ್ಲವಾ. ಆದಷ್ಟು ಬೇಗ ಕನ್ನಡ ಕಲಿಯಿರಿ,’ ಎಂದು ನ್ಯಾಯಮೂರ್ತಿಗಳು ಮಹಿಳೆಗೆ ಸಲಹೆ ನೀಡಿದರು.

ಪತಿ ಮತ್ತು ಆತನ ಏಳು ಸಂಬಂಧಿಕರು ವರದಕ್ಷಿಣೆ ಕಿರುಕುಳ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಎಂದು ಬ್ಯಾಟರಾಯನಪುರ ನಿವಾಸಿ ಸಬಿಹಾಬಾನು ಎಂಬುವವರು 2017ರ ಮೇ 8ರಂದು ದೂರು ನೀಡಿದ್ದರು. ಈ ಸಂಬಂಧ ಪೊಲೀಸರು ಆರೋಪಿಗಳ ವಿರುದ್ಧ ಎಫ್ಐಆರ್‌ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ಅಧೀನ ನ್ಯಾಯಾಲಯದಲ್ಲಿ ಬಾಕಿ ಇತ್ತು. 

ಈ ಹಿನ್ನೆಲೆಯಲ್ಲಿ ಸಬಿಹಾಬಾನು ಅವರ ಪತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಮ್ಮ ವಿರುದ್ಧದ ಎಫ್ಐಆರ್‌ ರದ್ದು ಪಡಿಸಲು ಕೋರಿದ್ದರು. ನ್ಯಾಯಮೂರ್ತಿ ಅರವಿಂದ ಕುಮಾರ್‌ ಅವರಿದ್ದ ಏಕ ಸದಸ್ಯ ಪೀಠದ ಮುಂದೆ ಶುಕ್ರವಾರ ಅರ್ಜಿ ವಿಚಾರಣೆಗೆ ಬಂದಿತ್ತು. ವಿಚಾರಣೆ ವೇಳೆ ಸಬಿಹಾಬಾನು ಪರ ವಕೀಲ ಬೈರೇಶ್‌ ಮತ್ತು ಆಕೆಯ ಪತಿ ಪರ ವಕೀಲ ಲಕ್ಷ್ಮೀಕಾಂತ್‌ ಜಂಟಿಯಾಗಿ ಪ್ರಮಾಣ ಪತ್ರ ಸಲ್ಲಿಸಿ, ದಂಪತಿ ನಡುವಿನ ಕಲಹ ಬಗೆಹರಿದಿದ್ದು, ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ.

ಆದ್ದರಿಂದ ದೂರುದಾರರಾದ ಸಬಿಹಾಬಾನು ದೂರು ವಾಪಸ್‌ ಪಡೆಯಲು ತೀರ್ಮಾನಿಸಿದ್ದಾರೆ. ಹೀಗಾಗಿ ಪತಿ ವಿರುದ್ಧದ ಎಫ್ಐಆರ್‌ ಮತ್ತು ಅಧೀನ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಮನವಿ ಮಾಡಿದರು. ಪ್ರಮಾಣಪತ್ರ ಪರಿಶೀಲಿಸಿದ ನ್ಯಾಯಮೂರ್ತಿ ಅರವಿಂದ ಕುಮಾರ್‌, ಕೋರ್ಟ್‌ನಲ್ಲಿ ಹಾಜರಿದ್ದ ಸಬಿಹಾಬಾನು ಅವರನ್ನು ಕರೆದು, ಪತಿ ಹಾಗೂ ಸಂಬಂಧಿಕರ ವಿರುದ್ಧ ದಾಖಲಿಸಿರುವ ದೂರು ಹಿಂಪಡೆಯುತ್ತೀರಾ? ಎಂದು ಕನ್ನಡದಲ್ಲಿಯೇ ಪ್ರಶ್ನಿಸಿದರು.

ಆದರೆ, ಆಕೆ ಉತ್ತರಿಸದೆ ಮೌನವಾಗಿದ್ದರು. ನಾನು ಹೇಳುತ್ತಿರುವುದು ಅರ್ಥವಾಗುತ್ತಿದೆಯೇ? ಎಂದು ನ್ಯಾಯಮೂರ್ತಿಗಳು ಹಿಂದಿಯಲ್ಲಿ ಮತ್ತೆ ಕೇಳಿದರು. ಆಗಲೂ ಆಕೆ ಮೌನವಾಗಿದ್ದರು.ನಿಮಗೆ ಯಾವ ಭಾಷೆ ಬರುತ್ತದೆ ಎಂದು ಮತ್ತೂಮ್ಮೆ ಪ್ರಶ್ನಿಸಿದಾಗ ಉರ್ದು ಬರುತ್ತದೆಯೆಂದು ಸಬಿಹಾಬಾನು ಉತ್ತರಿಸಿದರು. 

ನ್ಯಾಯಮೂರ್ತಿಗಳು ಕೂಡಲೇ ನಿಮ್ಮ ಊರು ಯಾವುದು? ಎಂದು ಹಿಂದಿಯಲ್ಲಿ ಪ್ರಶ್ನಿಸಿದರು. ಕಳೆದ 31 ವರ್ಷಗಳಿಂದ ಬೆಂಗಳೂರಿನಲ್ಲೇ ಇದ್ದೇನೆ. ಹುಟ್ಟಿ ಬೆಳೆದದ್ದು ಇಲ್ಲಿಯೇ ಎಂದು ಸಬಿಹಾಬಾನು ಉತ್ತರಿಸಿದಾಗ ನ್ಯಾ.ಅರವಿಂದಕುಮಾರ್‌ ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.