Kalam World Records: ವಿಶ್ವ ದಾಖಲೆ ಬರೆದ 14 ತಿಂಗಳ ಪೋರಿ
Team Udayavani, Feb 19, 2024, 1:32 PM IST
ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಂಬಿಹಳ್ಳಿ ನಿವಾಸಿ ಡಿ.ಎಂ.ಧನಲಕ್ಷ್ಮೀ ಕುಮಾರಿ, ಕೆ.ಹುಲಿಯಪ್ಪಗೌಡ ಅವರ 14 ತಿಂಗಳ ಮಗು ಮನಸ್ಮಿತಾ ಕಲಾಂ ವರ್ಲ್ಡ್ ರೆಕಾರ್ಡ್ಸ್ ಪುಸ್ತಕ ಸೇರಿದ್ದಾಳೆ.
ಮಾ.3ರಂದು ಚೆನ್ನೈನ ಟೀಚ್ ಆಡಿಟೋರಿಯಂನಲ್ಲಿ ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆಯವರು ವಿಶ್ವ ದಾಖಲೆ ಗೌರವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕೇವಲ 14 ತಿಂಗಳಿಗೆ ಈಕೆ ದಾಖಲೆ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾಳೆ.
ಮಗುವಿನ ತಾಯಿ ಡಿ.ಎಂ.ಧನಲಕ್ಷ್ಮೀ ಕುಮಾರಿ ಗೃಹಿಣಿಯಾಗಿದ್ದು, ತಂದೆ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದಾರೆ.. ಮನಸ್ಮಿತಾ ಅವರು ಕನ್ನಡ ಮತ್ತು ಇಂಗ್ಲಿಷ್ ಅಕ್ಷರಮಾಲೆ, ಕರ್ನಾಟಕದಲ್ಲಿ 8 ಜ್ಞಾನಪೀಠ ಪ್ರಶಸ್ತಿ ವಿಜೇತರು, ರಾಷ್ಟ್ರೀಯ ಪ್ರಾಣಿ, ಹಣ್ಣು, ಪಕ್ಷಿ, ಧ್ವಜ, ಹೂವು ಹೀಗೆ 500 ಪದಗಳನ್ನು ಗುರುತಿಸುತ್ತಾಳೆ. ಈಕೆಯ ಅಸಾಧಾರಣ ಗ್ರಹಣ ಶಕ್ತಿ ಪ್ರತಿಭೆಯನ್ನು ಕಲಾಂ ವರ್ಲ್ಡ್ ರೆಕಾರ್ಡ್ಸ್ ಸಂಸ್ಥೆ ಶ್ಲಾ ಸಿದೆ. ಈ ಸಾಧನೆ ಕಲಾಂ ಅವರ ವಿಶ್ವ ದಾಖಲೆಗಳಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.