ನಗರದಲ್ಲಿ ಕಮಲ ಜ್ಯೋತಿ ಸಂಕಲ್ಪ

Team Udayavani, Feb 27, 2019, 6:00 AM IST

nagara.jpg

ಬೆಂಗಳೂರು: ಕೇಂದ್ರ ಸರ್ಕಾರದ ನಾನಾ ಯೋಜನೆಗಳ ಫ‌ಲಾನುಭವಿಗಳು ಹಾಗೂ ಬಿಜೆಪಿ ಕಾರ್ಯಕರ್ತರೆಲ್ಲಾ ಒಟ್ಟುಗೂಡಿ ಸಾಮೂಹಿಕವಾಗಿ ಜ್ಯೋತಿ ಬೆಳಗಿಸುವ ಮೂಲಕ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ನಡೆಸಿದರು.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವೈವಿಧ್ಯದ ಕಾರ್ಯಕ್ರಮಗಳ ಮೂಲಕ ಸಂಘಟನೆಗೆ ಒತ್ತು ನೀಡಿರುವ ಬಿಜೆಪಿ, ಮಂಗಳವಾರ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ಆಚರಿಸಿತು. ಮಂಗಳವಾರ ನಸುಕಿನಲ್ಲಿ ಭಾರತೀಯ ವಾಯುಪಡೆಯು ಉಗ್ರ ಸಂಘಟನೆಯ ಶಿಬಿರದ ಮೇಲೆ ಯಶಸ್ವಿ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು, ಬೆಂಬಲಿಗರು ಸಂಭ್ರಮದಿಂದ ಪಾಲ್ಗೊಂಡಿದ್ದರು.

ಸಂಜಯನಗರದ ಡಾಲರ್ ಕಾಲೋನಿಯಲ್ಲಿನ ಧವಳಗಿರಿ ನಿವಾಸದ ಬಳಿ ವಿಶಾಲವಾಗಿ ಬಿಡಿಸಲಾದ ಕಮಲಾಕೃತಿಯ ರಂಗೋಲಿಗಳ ಮೇಲೆ ಜೋಡಿಸಲಾಗಿದ್ದ ಜೋತಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಕಾರ್ಯಕರ್ತರೊಂದಿಗೆ ಬೆಳಗಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಬಿಎಸ್‌ವೈ, ಮಂಗಳವಾರ ಭಾರತಕ್ಕೆ ಹೆಮ್ಮೆಯ ದಿನ. ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಉಗ್ರರನ್ನು ಸದೆಬಡಿದ ಭಾರತೀಯ ಯೋಧರಿಗೆ ಕೋಟಿ ಕೋಟಿ ನಮನಗಳು. ಪ್ರಧಾನಿ ನರೇಂದ್ರ ಮೋದಿಯವರು ಪಾಕಿಸ್ತಾನದ ಕುತಂತ್ರ ಬುದ್ಧಿಯನ್ನು ವಿಶ್ವದ ಎದುರು ಬಯಲು ಮಾಡಿದ್ದಾರೆ.

ಆ ಮೂಲಕ ವಿಶ್ವ ಸಮುದಾಯದ ಎದುರು ಪಾಕಿಸ್ತಾನ ಏಕಾಂಗಿಯಾಗುವಂತೆ ಮಾಡಿದ್ದಾರೆ. ಭಾರತದ ಮುಂದೆ ಪಾಕಿಸ್ತಾನ ಮಂಡಿಯೂರುವಂತೆ ಮಾಡಿದ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಲೇ ಬೇಕು ಎಂದರು. ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಶಾಸಕ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಭಾಗವಹಿಸಿದ್ದರು.

ಜಯನಗರದಲ್ಲಿ ನಡೆದ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಮುರಳೀಧರರಾವ್‌, ಮಾಜಿ ಉಪಮುಖ್ಯಮಂತ್ರಿ ಆರ್‌.ಅಶೋಕ್‌, ವಿಧಾನಸಭೆ ಪ್ರತಿಪಕ್ಷ ಉಪನಾಯಕ ಗೋವಿಂದ ಕಾರಜೋಳ, ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಪಿ.ಎನ್‌.ಸದಾಶಿವ ಇತರರು ಪಾಲ್ಗೊಂಡಿದ್ದರು. ವರ್ಣಮಯ ರಂಗೋಲಿ ನಡುವೆ ಜೋತಿ ಬೆಳಗಿಸಲಾಯಿತು.

ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರು ಸಂಜಯನಗರ ಮುಖ್ಯರಸ್ತೆಯಲ್ಲಿರುವ ರಾಧಾಕೃಷ್ಣ ದೇವಸ್ಥಾನದ ಬಳಿ ನಡೆದ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕರ್ತರನ್ನು ಹುರಿದುಂಬಿಸಿದರು. ಇದರೊಂದಿಗೆ ಬೆಂಗಳೂರಿನ 4,000ಕ್ಕೂ ಹೆಚ್ಚು ಬೂತ್‌ಗಳಲ್ಲಿ ಕಮಲ ಜ್ಯೋತಿ ಸಂಕಲ್ಪ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಟಾಪ್ ನ್ಯೂಸ್

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

Pakistan: ಬಲೂಚ್‌ನಲ್ಲಿ ಆತ್ಮಾಹುತಿ ದಾಳಿ: 6 ಸಾವು, 25 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.