ಕಂಬಳ ಆಟ ಬೇಕು, ಪನಿಕುಲ್ಲುನೆ ಬೇಡ


Team Udayavani, Jan 27, 2017, 11:25 AM IST

devanoor.jpg

ಬೆಂಗಳೂರು: ಕರಾವಳಿ ಭಾಗದ ಜನರ ಸಾಂಪ್ರದಾಯಿಕ ಕ್ರೀಡೆ ಕಂಬಳದಲ್ಲಿ “ಪನಿಕುಲ್ಲುನೆ’ ಎಂಬ ಅನಿಷ್ಠ ಪದ್ದತಿ ಜಾರಿಯಲ್ಲಿದ್ದು, ಅದನ್ನು ತಡೆಯಬೇಕು ಎಂದು ಸಾಹಿತಿ ದೇವನೂರು ಮಹಾದೇವ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಂಬಳ ಕ್ರೀಡೆಯ ಜೊತೆಗೆ ಕೊರಗ ಸಮುದಾಯದವರನ್ನು ಬಳಸಿಕೊಂಡು ಪನಿಕುಲ್ಲುನೆ ಎಂಬ ಅನಿಷ್ಠ ಪದ್ದತಿ ಆಚರಣೆಯಲ್ಲಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪನಿಕುಲ್ಲುನೆ ಅಂದರೆ ಏನು?: ಕಂಬಳ ನಡೆಯುವ ಹಿಂದಿನ ದಿನದ ಇಡೀ ರಾತ್ರಿ ಕೊರಗ ಸಮುದಾಯದ ವರು ಡೋಲು ಬಾರಿಸುತ್ತ ಕುಣಿಯುವ ಈ ಆಚರಣೆ ಯು ಲೈಂಗಿಕ ಚೇಷ್ಟೆಗಳನ್ನು ಒಳಗೊಂಡಿದ್ದು, ಬೆಳಗಾಗುವಾಗ ಕೊರಗ ಸಮುದಾಯದವರು ತಾವೇ ಕೋಣಗಳು ಎಂದು ಆವಾಹಿಸಿ ಕೊಂಡು ಕಂಬಳದ ಕೆಸರು ಗದ್ದೆಯಲ್ಲಿ ಓಡುತ್ತಾರೆ.

ಈ ಮನುಷ್ಯರ ಕೆಸರುಗದ್ದೆ ಓಟ, ಕೋಣಗಳ ಓಟಕ್ಕೆ ಪೂರ್ವಭಾವಿಯಾಗಿ, ಕೊರಗರು ಕೋಣಗಳಾಗಿ ಗದ್ದೆಯಲ್ಲಿ ಓಡುವುದರ ಮೂಲಕ ಗದ್ದೆಯನ್ನು ಕೆಟ್ಟಕಣ್ಣಿನಿಂದ ಮುಕ್ತಗೊಳಿಸುತ್ತಾರೆ. ಗದ್ದೆಯನ್ನು ಹೀಗೆ ಮುಕ್ತಗೊಳಿಸಿದ ಆನಂತರವೇ ಭೂಮಾಲೀಕರ ಕೋಣಗಳು ಕಂಬಳದ ಗದ್ದೆಗೆ ಇಳಿಯುತ್ತವೆ. (ಕರಾವಳಿ ಜಾನಪದ. ಪುರುಷೋತ್ತಮ ಬಿಳಿಮಲೆ.ಪುಟ 46). ಅಂದರೆ, ಇದು ಅನಿಷ್ಠ, ಕೆಡಕನ್ನು ಕೊರಗರ ಮೇಲೆ ಆವಾಹಿಸುವ ಅಜಲು ಪದ್ಧತಿಯ ಎಂಜಲು ಆಚರಣೆಯಾಗಿದೆ.

ರಾಜಧಾನಿ ಕಂಬಳ ಸಮಿತಿ ಅಸ್ತಿತ್ವಕ್ಕೆ
ಬೆಂಗಳೂರು:
ಕರಾವಳಿಯ ಜಾನಪದ ಕ್ರೀಡೆ ಕಂಬಳಕ್ಕೆ ಹೇರಿರುವ ನಿಷೇಧ ತೆರವು ಆಗ್ರಹಿಸಿ ಮತ್ತು ಕಂಬಳಕ್ಕೆ ಬೆಂಬಲ ಸೂಚಿಸುವ ಸಲುವಾಗಿ “ರಾಜಧಾನಿ ಕಂಬಳ ಕ್ರಿಯಾ ಸಮಿತಿ’ ಅಸ್ತಿತ್ವಕ್ಕೆ ಬಂದಿದ್ದು, ಜ. 29ರಂದು ನಗರದಲ್ಲಿ ಬೃಹತ್‌ ಪ್ರತಿಭಟನೆಗೆ ಸಿದ್ಧತೆ ನಡೆಸಿದೆ. ಹೋರಾಟದ ಪೂರ್ವಭಾವಿ ಸಿದ್ಧತೆಗಳ ಕುರಿತು ಚರ್ಚಿಸಲು ಗುರುವಾರ ನಗರದಲ್ಲಿ ಸಮಿತಿಯ ಸಭೆ ನಡೆಸಲಾಗಿದ್ದು, 50ಕ್ಕೂ ಹೆಚ್ಚು ಸಂಘಟನೆಗಳ ಮುಖಂಡರು ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದರು.  

ಜ. 29ರಂದು ನಗರದ ವಿವಿಧ ಭಾಗಗಳಿಂದ ಕಂಬಳ ಪ್ರೇಮಿಗಳು ತಂಡೋಪತಂಡವಾಗಿ ಆಗಮಿಸಿ ಮೈಸೂರು ವೃತ್ತದಲ್ಲಿ ಸೇರಲು ಮತ್ತು ಅಲ್ಲಿಂದ ಸ್ವಾತಂತ್ರ ಉದ್ಯಾನಕ್ಕೆ ಮೆರವಣಿಗೆ ಮೂಲಕ ತೆರಳಲು ತೀರ್ಮಾನಿಸಲಾಯಿತು. ಅಲ್ಲಿ ಕಂಬಳಕ್ಕೆ ಹೇರಿರುವ ನಿಷೇಧ ತೆರವು ಆಗ್ರಹಿಸಿ ಮತ್ತು ಕಂಬಳಕ್ಕೆ ಬೆಂಬಲ ಸೂಚಿಸಿ ವಿವಿಧ ಕ್ಷೇತ್ರಗಳ ಗಣ್ಯರು ಮಾತನಾಡಲಿದ್ದಾರೆ ಎಂದು ಸಮಿತಿಯ ಮುಖಂಡರು ಹೇಳಿದ್ದಾರೆ.

ಇಂದು ಮಾನವ ಸರಪಳಿ: ಕಂಬಳ ಉಳಿವಿಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಕುಮಾರ್‌ ಶೆಟ್ಟಿ ಬಣ) ಶುಕ್ರವಾರ ಬೆಳಗ್ಗೆ 11.30ಕ್ಕೆ ಹೆಬ್ಟಾಳ ಪೊಲೀಸ್‌ ಠಾಣೆಯಿಂದ ವಿಧಾನಸೌಧದವರೆಗೆ ಮಾನವ ಸರಪಳಿ ರಚಿಸಿ ಹೋರಾಟ ಕೈಗೊಳ್ಳಲು ತೀರ್ಮಾನಿಸಿದೆ.

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.