19ರಂದು ಮಾನವ ಸಂಪನ್ಮೂಲ ಅಧಿಕಾರಿಗಳ ಕನ್ನಡ ಸಮೇಳನ
Team Udayavani, Nov 11, 2017, 11:15 AM IST
ಬೆಂಗಳೂರು: ನಿರಾತಂಕ ಸಂಸ್ಥೆ ವತಿಯಿಂದ ನ.19ರಂದು ನಗರದ ಕ್ಯಾಪಿಟಲ್ ಹೋಟೆಲ್‌ನಲ್ಲಿ ರಾಜ್ಯಮಟ್ಟದ ಪ್ರಥಮ ಮಾನವ ಸಂಪನ್ಮೂಲ ಕನ್ನಡ ಸಮ್ಮೇಳನ ಹಮ್ಮಿಕೊಂಡಿದೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಂಧಾರ್ ಟೆಕ್ನಾಲಜಿಸ್ ಸಂಸ್ಥೆಯ ಡಿಜಿಎಂ ಡಾ.ಬಿ.ಕೆ.ಕೆಂಪೇಗೌಡ, ತಮಿಳುನಾಡಿನಲ್ಲಿ ವಿವಿಧ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮಾನವ ಸಂಪನ್ಮೂಲ ಅಧಿಕಾರಿಗಳು ಒಂದೆಡೆ ಸೇರಿ ತಮ್ಮ ಭಾಷೆಯ ಬೆಳವಣಿಗೆಗಳ ಬಗ್ಗೆ ವಾರ್ಷಿಕ ಸಮೇಳನ ಆಯೋಜಿಸಿ ಚರ್ಚೆ, ಸಂವಾದ ನಡೆಸುತ್ತಾರೆ. ಅದೇ ರೀತಿಯ ಕಾರ್ಯಕ್ರವನ್ನು ಬೆಂಗಳೂರಿನಲ್ಲಿ ಏರ್ಪಡಿಸಲಾಗಿದೆ ಎಂದರು.
ವಿವಿಧ ಕಂಪನಿಗಳ ಸುಮಾರು 300 ಹಿರಿಯ ಮಾನವ ಸಂಪನ್ಮೂಲ ಅಧಿಕಾರಿಗಳು ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಸ್ಥೆಗಳಲ್ಲಿ ಕನ್ನಡ ಭಾಷೆ ಬಳಕೆ, ಪ್ರಚಲಿತ ಸಮಸ್ಯೆಗಳು ಮತ್ತು ಪರಿಹಾರಗಳು ಹಾಗೂ ಕಾನೂನಿನ ವ್ಯಾಪ್ತಿಯಲ್ಲಿ ಕನ್ನಡದ ಅವಶ್ಯಕತೆ ಸೇರಿ ಹಲವು ವಿಷಯಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಸಮ್ಮೇಳನದ ಅಂಗವಾಗಿ ಮಾನವ ಸಂಪನ್ಮೂಲ ಕ್ಷೇತ್ರಕ್ಕೆ ಸಂಬಂಧಿಸಿದ ಲೇಖನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಪ್ರಥಮ ಲೇಖನಕ್ಕೆ 15 ಸಾವಿರ ರೂ. ದ್ವಿತೀಯ ಲೇಖನಕ್ಕೆ 10 ಸಾವಿರ ರೂ. ಮತ್ತು ತೃತೀಯ ಲೇಖನಕ್ಕೆ 5 ಸಾವಿರ ರೂ. ಬಹುಮಾನ ನೀಡಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊ: 99800 66890 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Special Interview: ಪ್ರತ್ಯೇಕ ನಾಡಧ್ವಜಕ್ಕಾಗಿ ಕೇಂದ್ರಕ್ಕೆ ಮತ್ತೂಮ್ಮೆ ಪತ್ರ: ತಂಗಡಗಿ
Bengaluru: ಆಶಾ ಸಾಫ್ಟ್ ನಲ್ಲಿ ತಾಂತ್ರಿಕ ಸಮಸ್ಯೆ: ಕಾರ್ಯಕರ್ತೆಯರ ಕೈಸೇರದ ಪ್ರೋತ್ಸಾಹಧನ
Bengaluru: ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಬಿದ್ದ ಎಸ್‌ಐ ಗಂಗಾಧರ್
MUST WATCH
ಹೊಸ ಸೇರ್ಪಡೆ
Shocking: ದೀಪಾವಳಿ ಸಂಭ್ರಮದಲ್ಲಿದ್ದ ಚಿಕ್ಕಪ್ಪ- ಸೋದರಳಿಯನನ್ನು ಗುಂಡಿಕ್ಕಿ ಹತ್ಯೆ…
Dr Bibek Debroy: ಪಿಎಂ ಆರ್ಥಿಕ ಸಲಹಾ ಮಂಡಳಿಯ ಅಧ್ಯಕ್ಷ ಡಾ.ಬಿಬೇಕ್ ಡೆಬ್ರಾಯ್ ನಿಧನ
Waqf ವಿವಾದ ಹಿನ್ನೆಲೆ ಭೂದಾಖಲೆ ಪರಿಶೀಲನೆಗೆ ವಿಎಚ್‌ಪಿ ಮನವಿ
Mangaluru: ಇಂದು ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ
Sandalwood: ಗೆಲುವಿನ ಓಟದಲ್ಲಿ ಮಂಕಾದ ಹೊಸಬರು; ಕೈ ಹಿಡಿಯದ ಪ್ರೇಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.