ಡಿ.30 ರಿಂದ ಎರಡು ದಿನ ‌ಕನ್ನಡ ಜೈನ ಸಾಹಿತ್ಯ ಸಮ್ಮೇಳನ


Team Udayavani, Dec 28, 2017, 11:43 AM IST

News-21-2.jpg

ಬೆಂಗಳೂರು: ಮಹಾಮಸ್ತಕಾಭಿಷೇಕ ಮಹೋತ್ಸವದ ಸಂಬಂಧ ರಾಜ್ಯ ಮಟ್ಟದ ಕನ್ನಡ ಜೈನ ಸಾಹಿತ್ಯ ಸಮ್ಮೇಳನ ಶನಿವಾರ ಮತ್ತು ಭಾನುವಾರ ಶ್ರವಣಬೆಳಗೊಳದ ಗೊಮ್ಮಟ ನಗರದ ಪಂಪ ಮಹಾಕವಿ ಸಭಾ ಮಂಟಪದಲ್ಲಿ ನಡೆಯಲಿದೆ.

ಕರ್ನಾಟಕ ಜೈನ ಸಂಘದ ಅಧ್ಯಕ್ಷ ಎಸ್‌.ಜಿತೇಂದ್ರ ಕುಮಾರ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾಮಸ್ತಕಾಭಿಷೇಕ ಮಹೋತ್ಸವದ ರಾಷ್ಟ್ರೀಯ ಸಮಿತಿಯು ಕರ್ನಾಟಕ ಜೈನ ಸಂಘದ ಸಹಯೋಗದಲ್ಲಿ 2 ದಿನ ಕನ್ನಡ ಜೈನ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಸಾಹಿತಿ ಡಾ.ಜಿನದತ್ತ ದೇಸಾಯಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಸಾಹಿತ್ಯ ಸಮ್ಮೇಳನ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಶುಕ್ರವಾರ ಚಾವುಂಡರಾಯ ಮಂಟಪದಿಂದ ಗೊಮ್ಮಟ ನಗರದ ಪಂಪ ಮಹಾಕವಿ ಸಭಾ ಮಂಟಪದವರೆಗೆ ಸಮ್ಮೇಳ ನಾಧ್ಯಕ್ಷರ ಮೆರವಣಿಗೆ ನಡೆಯಲಿದೆ ಎಂದು ಹೇಳಿದರು. 

ವೀರೇಂದ್ರ ಹೆಗ್ಗಡೆ ಉದ್ಘಾಟನೆ: ಧರ್ಮಸ್ಥಳದ ಡಾ.ಡಿ.ವೀರೇಂದ್ರ ಹೆಗ್ಗಡೆ ಶನಿವಾರದ ಸಮ್ಮೇಳನ ಉದ್ಘಾಟಿಸಲಿದ್ದು, ಕ್ಷೇತ್ರದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಕೆ.ಅಭಯ ಚಂದ್ರಜೈನ್‌ ಇತರರು ಪಾಲ್ಗೊಳ್ಳಲಿದ್ದಾರೆ. ದೂರದರ್ಶನ ಕೇಂದ್ರದ ಉಪ ಪ್ರಧಾನ ನಿರ್ದೇಶಕ ಚಂದ್ರಶೇಖರ್‌ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಪುಸ್ತಕ ಪ್ರದರ್ಶನವನ್ನು ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಉದ್ಘಾಟಿಸಲಿದ್ದಾರೆ.

ಹಿರಿಯ ಸಾಹಿತಿಗಳಿಗೆ ಸನ್ಮಾನ: ಭಾನುವಾರ ಹಿರಿಯ ಸಾಹಿತಿಗಳಾದ ಡಾ.ಚಂದ್ರಶೇಖರ ಕಂಬಾರ, ಡಾ.ಎಸ್‌.ಎಲ್‌.ಭೈರಪ್ಪ, ಡಾ.ವೆಂಕಟಾಚಲ ಶಾಸ್ತ್ರಿ, ಡಾ.ಹಂಪ ನಾಗರಾಜಯ್ಯ, ಡಾ. ಕಮಲಾ ಹಂಪನಾ, ಪ್ರೊ.ಎಸ್‌.ಪಿ.ಪಾಟೀಲ್‌, ಪ್ರೊ.ಕೆ.ಎಸ್‌ .ನಿಸಾರ್‌ ಅಹ ಮದ್‌, ಡಾ.ನಾ.ಡಿಸೋಜಾ, ಪ್ರೊ.ಶಾಂತಿನಾಥ ದಿಬ್ಬದ, ಪ್ರೊ.ಎಂ.ಎ.ಜಯಚಂದ್ರ, ಪ್ರೊ.ಸರಸ್ವತಿ ವಿಜಯ ಕುಮಾರ್‌, ಎಸ್‌.ಎಸ್‌.ಉಕ್ಕಲಿ ಅವರನ್ನು ಸನ್ಮಾನಿಸಲಾಗುವುದು. ಮಾಜಿ ಸಿಎಂ, ಸಂಸದ ಎಂ.ವೀರಪ್ಪ ಮೊಯ್ಲಿ ಪಾಲ್ಗೊಳ್ಳಲಿದ್ದಾರೆ
ಸಮಾರೋಪ: ಭಾನುವಾರ ಸಂಜೆ 4.30ಕ್ಕೆ ಸಮಾರೋಪ ನಡೆಯಲಿದ್ದು, ಸಚಿವ ಎ.ಮಂಜು ಪಾಲ್ಗೊಳ್ಳಲಿದ್ದಾರೆ. 

ಮಹಾಮಸ್ತಕಾಭಿಷೇಕ ಸಿದ್ಧತಾ ಕಾರ್ಯ ಶೇ.70 ಪೂರ್ಣ
ಬೆಂಗಳೂರು: ವಿಶ್ವವಿಖ್ಯಾತ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಈವರೆಗೆ ಶೇ.70ರಷ್ಟು ಸಿದ್ಧತಾ ಕಾರ್ಯ ಮುಗಿದಿದ್ದು, ಫೆಬ್ರವರಿ ಮೊದಲ ವಾರದೊಳಗೆ ಸಕಲ ಸಿದ್ಧತೆಗಳು ಪೂರ್ಣಗೊಳ್ಳಲಿವೆ ಎಂದು ಮಹೋತ್ಸವದ ಕಾರ್ಯಾಧ್ಯಕ್ಷ, ಜೈನ ಸಂಘದ ಅಧ್ಯಕ್ಷ ಎಸ್‌.ಜಿತೇಂದ್ರ ಕುಮಾರ್‌ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹಾ ಮಸ್ತಕಾಭಿಷೇಕಕ್ಕೆ ವ್ಯವಸ್ಥಿತ ಸಿದ್ಧತೆ ನಡೆದಿದೆ. ಫೆ.7ರಿಂದ 16ರವರೆಗೆ ಪ್ರಥಮ ತೀರ್ಥಂಕರ ಆದಿನಾಥ ಭಗವಾನರಿಗೆ ಪಂಚಕಲ್ಯಾಣ ಮಹೋತ್ಸವ ನಡೆಯಲಿದೆ. ಫೆ.17ರಿಂದ 25ರವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ತಿಳಿಸಿದರು.

ವ್ಯವಸ್ಥೆ: ಧಾರ್ಮಿಕ ವಿಧಿ ವಿಧಾನಗಳಿಗೆ ಶ್ರವಣಬೆಳಗೊಳ ಮಠವೇ ಖರ್ಚನ್ನು ಭರಿಸಲಿದ್ದು, ರಾಜ್ಯ ಸರ್ಕಾರದ 175 ಕೋಟಿ ರೂ. ಅನುದಾನವನ್ನು ಮೂಲ ಸೌಕರ್ಯ ಬಳಸಿಕೊಳ್ಳಲಾಗಿದೆ. ಮಹಾ ಮಸ್ತಕಾಭಿಷೇಕಕ್ಕೆ ಪೂರಕವಾಗಿ ಅಟ್ಟಣಿಗೆ ಜತೆಗೆ 5000 ಮಂದಿಗೆ
ವೀಕ್ಷಣಾ ಗ್ಯಾಲರಿ ನಿರ್ಮಾಣವಾಗುತ್ತಿದೆ. 12 ತಾತ್ಕಾಲಿಕ ಉಪ ನಗರಗಳು ನಿರ್ಮಾಣವಾಗುತ್ತಿದ್ದು, 20,000 ಮಂದಿಗೆ ವಾಸ್ತವ್ಯ ಕಲ್ಪಿಸಲಾಗುವುದು. 22 ಶೌಚಾಲಯಗಳು ನಿರ್ಮಾಣವಾಗುತ್ತಿವೆ ಎಂದು ಹೇಳಿದರು. 

ಈ ಬಾರಿಯ ಮಹೋತ್ಸವದಲ್ಲಿ 35ರಿಂದ 40 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸುಮಾರು 450ಕ್ಕೂ ಹೆಚ್ಚು ದಿಗಂಬರ ಮುನಿಗಳು ಸಾವಿರಾರು ಕಿ.ಮೀ. ದೂರದಿಂದ ಕಾಲ್ನಡಿಗೆಯಲ್ಲೇ ಆಗಮಿಸಲಿದ್ದು, ಅವರಿಗೆ ತ್ಯಾಗಿ ನಗರದಲ್ಲಿ ವಾಸ್ತವ್ಯ ಕಲ್ಪಿಸಲಾಗುವುದು. ಮಹಾಮಸ್ತಕಾಭಿಷೇಕ ಹಿನ್ನೆಲೆಯಲ್ಲಿ 21 ವಿಶೇಷ ರೈಲು ಸಂಚಾರ ಸೇವೆ ಆರಂಭವಾಗಲಿದೆ ಎಂದು ಹೇಳಿದರು.

ಕೇಂದ್ರದಿಂದ 100 ಕೋಟಿ ರೂ.ಗೆ ಪ್ರಸ್ತಾವ: ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ಕೇಂದ್ರ ಸರ್ಕಾರದಿಂದ 100 ಕೋಟಿ ರೂ. ಅನುದಾನ ಕೋರಿ ಪ್ರಸ್ತಾವ ಸಲ್ಲಿಸಲಾಗಿದೆ. 

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.