ಹೈ-ಕ, ಉ.ಕ.ಕ್ಕೆ ಡಿಸಿಎಂ ಸ್ಥಾನ: ಇಂದು ಪ್ರತಿಭಟನೆ
Team Udayavani, May 27, 2018, 6:55 AM IST
ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಹೈದರಾಬಾದ್ ಕರ್ನಾಟಕ ಹಾಗೂ ಉತ್ತರ ಕರ್ನಾಟಕಕ್ಕೆ ತಲಾ ಒಂದೊಂದು ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮೇ 27ರಂದು ನಗರದ ಕೆಂಪೇಗೌಡ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಚಳವಳಿ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರವು ಹೈದರಾಬಾದ್ ಕರ್ನಾಟಕ ಮತ್ತು ಉತ್ತರ
ಕರ್ನಾಟಕವನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಹಿಂದುಳಿದಿರುವ ಆ ಭಾಗಗಳು ಅಭಿವೃದ್ಧಿಯಾಗಬೇಕೆಂದರೆ ಅಲ್ಲಿನ ಶಾಸಕರನ್ನು ಡಿಸಿಎಂ ಮಾಡಬೇಕು ಎಂದು ಆಗ್ರಹಿಸಿದರು.
ರಜನಿ ಚಿತ್ರ ನಿರ್ಬಂಧಿಸಲು ಆಗ್ರಹ: ತಮಿಳು ನಟ ರಜನಿಕಾಂತ್ ನಟಿಸಿರುವ ಕಾಲಾ ಚಲನಚಿತ್ರ ರಾಜ್ಯದ ಯಾವುದೇ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅವಕಾಶ ನೀಡಬಾರದು.
ಒಂದು ವೇಳೆ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದ್ದಲ್ಲಿ ತೀವ್ರ ರೀತಿಯ ಪ್ರತಿಭಟನೆ ಮಾಡಲಾಗುತ್ತದೆ ಎಂದು ವಾಟಾಳ್ ಎಚ್ಚರಿಸಿದರು. ಕಾವೇರಿ ನೀರು ನಮ್ಮ ಆಸ್ತಿ.ಇದುವರೆಗೂ ನಟರಾಗಿದ್ದ ರಜನೀಕಾಂತ್ ಈಗ ರಾಜಕಾರಣಿ
ಯಾಗಿದ್ದಾರೆ. ತಮ್ಮ ಪಕ್ಷದ ಪ್ರಭಾವ ಹೆಚ್ಚಿಸಲು ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕು ಎಂದು ಹೇಳಿಕೆ
ನೀಡುತ್ತಿದ್ದಾರೆ. ಈ ಮೂಲಕ ತಾನು ಹುಟ್ಟಿದ ನಾಡನ್ನು ಮರೆತು ಕನ್ನಡ ವಿರೋಧಿಯಾಗಿ ನಡೆದುಕೊಂಡಿದ್ದಾರೆ. ಒಂದು ವೇಳೆ ನಿರ್ವಹಣಾ ಮಂಡಳಿ ರಚನೆಯಾದರೆ, ಕಬಿನಿ, ಹಾರಂಗಿ, ಕೆಆರ್‌ಎಸ್ ಎಲ್ಲ ಜಲಾಶಯಗಳ ನೀರು ಪಡೆಯಲು ಮಂಡಳಿ ಎದುರು ಕೈ ಮುಗಿದು ನಿಂತುಕೊಳ್ಳ ಬೇಕಾಗುತ್ತದೆ. ಹಾಗಾಗಿ ಕನ್ನಡ ದ್ರೋಹಿ ರಜನಿಕಾಂತ್
ಚಿತ್ರವನ್ನು ಪ್ರತಿಯೊಬ್ಬರೂ ತಿರಸ್ಕರಿಸಬೇಕು ಎಂದು ಕರೆ ನೀಡಿದರು.
ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೆ ರಾಜ್ಯದ ಜನರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಇತ್ತೀಚೆಗೆ ಕುಮಾರಸ್ವಾಮಿ ಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನಟ ಕಮಲಹಾಸನ್‌ರನ್ನು ಕರೆಸಿದ್ದಾರೆ. ಕಾವೇರಿ ನಿರ್ವಹಣಾ ಮಂಡಳಿ ಬೇಕು ಎನ್ನುವವರನ್ನು ಕರೆಸಿ ವೇದಿಕೆ ಹಂಚಿಕೊಂಡಿದ್ದಾರೆ. ಇದು ನಾಚಿಕೆಗೇಡಿನ
ವಿಚಾರ. ಅವರಿಗೆ ಮಾನ-ಮರ್ಯಾದೆಯಿಲ್ಲ ಎಂದು ವಾಗ್ಧಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.