ಕೇಶವ ಶಿಲ್ಪದಲ್ಲಿ ಕನ್ನಡ ಪುಸ್ತಕ ಹಬ್ಬ

Team Udayavani, Oct 30, 2022, 11:26 AM IST

tdy-2

ಬೆಂಗಳೂರು: ನಾಡಿನ ಜನರಲ್ಲಿ ರಾಷ್ಟ್ರಪ್ರೇಮ ಬೆಳಸುವಲ್ಲಿ ರಾಷ್ಟ್ರೋತ್ಥಾನ ಪರಿಷತ್ತಿನ ಕೊಡುಗೆ ದೊಡ್ಡದಿದೆ ಎಂದು ಅಂಕಣಕಾರ ಪ್ರೊ.ಪ್ರೇಮ್‌ ಶೇಖರ್‌ ಹೇಳಿದ್ದಾರೆ.

ರಾಷ್ಟ್ರೋತ್ಥಾನ ಸಾಹಿತ್ಯ ಬೆಂಗಳೂರು ಶನಿವಾರ ಕೆಂಪೇಗೌಡ ನಗರದ ಕೇಶವ ಶಿಲ್ಪ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ರಿಯಾಯ್ತಿ ದರಗಳ ಪುಸ್ತಕ ಮಾರಾಟ “ಕನ್ನಡ ಪುಸ್ತಕ ಹಬ್ಬ-2022’ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಷ್ಟ್ರೋತ್ಥಾನ ಪರಿಷತ್‌” ಭಾರತ-ಭಾರತಿ’ ಸೇರಿದಂತೆ ಹಲವು ಮೌಲಿಕ ಕೃತಿಗಳನ್ನು ಪ್ರಕಟಿಸುವ ಮೂಲಕ ಜನರಲ್ಲಿ ಓದಿನ ಅಭಿರುಚಿಯನ್ನು ಹೆಚ್ಚುವಂತೆ ಮಾಡಿದೆ. ಜತೆಗೆ ಜನರಲ್ಲಿ ರಾಷ್ಟ್ರಪ್ರಜ್ಞೆಯ ಅರಿವು ಮೂಡಿಸಿದೆ ಎಂದು ಶ್ಲಾಘಿಸಿದರು.

ದೇಶಕ್ಕಾಗಿ ಜೀವ ಬಲಿಕೊಟ್ಟು ತ್ಯಾಗಿಗಳಾಗಿ ಮರೆ ಯಾದರು. ಆದರೆ ಕೇವಲ ಚರ್ಚೆ ಮಾಡಿದವರು, ಬಾವುಟ ಹಿಡಿದವರು ಮುನ್ನೆಲೆಗೆ ಬಂದರು. ಶಾಲಾ ಪಠ್ಯದಲ್ಲೂ ಕೂಡ ಕಲ್ಪಿತ ಇತಿಹಾಸವನ್ನು ಹೇಳಿಕೊಡ ಲಾಗುತ್ತಿದೆ. ಹೀಗಾಗಿ ಹಲವು ವರ್ಷಗಳಿಂದ ಅದೇ ಸತ್ಯ ಎಂದು ನಂಬಿಕೊಂಡಿದ್ದೇವೆ. ಆದರೆ ಅದು ಸತ್ಯದ ಇತಿಹಾಸವಾಗಿಲ್ಲ ಎಂದು ಹೇಳಿದರು.

ಬಹುತ್ವವನ್ನು ಹೇಳಿಕೊಟ್ಟವರು ನಾವು. ಆದರೆ ಈಗ ಕೆಲವರು ನಮಗೆ ಬಹುತ್ವದ ಪಾಠ ಹೇಳಿಕೊಡಲು ಬರುತ್ತಿದ್ದಾರೆ. ನಮ್ಮ ಸಂಸ್ಕೃತಿಯನ್ನು ನಾವೆಲ್ಲರು ಉಳಿಸಿಕೊಳ್ಳದೆ ಹೋದರೆ ಮುಂದೆ ಪಶ್ಚಾತಾಪ ಪಡಬೇಕಾಗುತ್ತದೆ. ಈಗಾಗಲೇ ಈಜಿಪ್ತ್, ಮೆಸಪೋ ಟೋಮಿಯಾ ನಾಗರೀಕತೆಗಳು ಮ್ಯೂಸಿಯಂ ಸೇರಿವೆ. ಆ ಪರಿಸ್ಥಿತಿ ನಮ್ಮ ಸಂಸ್ಕೃತಿಗೂ ಬರಲಿದೆ. ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ತಿಳಿಸಿದರು. ಈ ಹಿಂದೆ ಕೆಲವರು ಗುಜುರಾತಿನ ಗೋದ್ರಾ ಪ್ರಕರಣದ ಏಕ ಮುಖ ತೋರುವ ಕೆಲಸ ಮಾಡಿದರು. ಸುಳ್ಳು ಲೇಖನಗಳನ್ನು ಬರೆದು ಅಪಪ್ರಚಾರ ಮಾಡಿದರು. ಈಗಲೂ ಅಂತಹದ್ದೆ ಕೆಲಸ ಮಾಡುವ ಪ್ರಯತ್ನ ನಡೆದಿದೆ. ಈ ಬಗ್ಗೆ ನಾವೆಲ್ಲರೂ ಎಚ್ಚರಿಕೆ ಯಿಂದ ಇರಬೇಕಾಗಿದೆ. ಭಾರತಕ್ಕೆ ಸಾವಿರಾರು ವರ್ಷ ಗಳ ಇತಿಹಾಸವಿದೆ. ಸಂವಿಧಾನದಲ್ಲಿ ಬದಲಾವಣೆ ಮಾಡಿಕೊಂಡ ರೀತಿಯಲ್ಲಿ ನಮ್ಮ ಸಂಸ್ಕೃತಿ ಕೆಲವು ಗಳನ್ನು ಸೇರಿಸಿಕೊಂಡು ನಮ್ಮ ಪುರಾತನ ಸಂಸ್ಕೃತಿ ಯನ್ನು ಎಚ್ಚರದಿಂದ ಕಾಪಿಟ್ಟುಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ವೇಳೆ ರಾಷ್ಟ್ರೋತ್ಥಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ದಿನೇಶ್‌ ಹೆಗ್ಡೆ, ವಿಘ್ನೇಶ್ವರ ಭಟ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಪ್ರತಿ ಹಳ್ಳಿಯಲ್ಲೂ ಪುಸ್ತಕ ಹಬ್ಬ ನಡೆಯಲಿ: ವಾನಳ್ಳಿ  : ಬೆಂಗಳೂರು ಉತ್ತರ ವಿವಿಯ ಕುಲಪತಿ ನಿರಂಜನ ವಾನಳ್ಳಿ, ಅಧ್ಯಾತ್ಮಿಕ ಕ್ಷೇತ್ರಕ್ಕೆ ರಾಮಕೃಷ್ಣ ಆಶ್ರಮ ಹೇಗೆಯೋ ಅದೇ ರೀತಿಯಲ್ಲಿ ರಾಷ್ಟ್ರಪ್ರೇಮ ಬೆಳೆಸುವಲ್ಲಿ ರಾಷ್ಟ್ರೋತ್ಥಾನ ಪರಿಷತ್‌ ಕೆಲಸ ಮಾಡುತ್ತಿದೆ. ಇದೀಗ ಓದುಗರನ್ನು ಸೆಳೆಯುವ ನಿಟ್ಟಿನಲ್ಲಿ ಪುಸ್ತಕ ಹಬ್ಬ ಹಮ್ಮಿಕೊಂಡಿದೆ. ಈ ಹಬ್ಬ ಕನ್ನಡ ನಾಡಿನಾದ್ಯಂತ ಹಳ್ಳಿ ಹಳ್ಳಿಗಳಲ್ಲಿ ನಡೆಯಬೇಕು ಎಂದು ಮನವಿ ಮಾಡಿದರು.

ಇತ್ತೀಚೆಗೆ ಪುಸ್ತಕ ಬರೆಯುವರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೆ ಕೊಳ್ಳುವವರ ಸಂಖ್ಯೆ ಕೂಡ ಇದೆ. ಆದರೆ ಈ ಇಬ್ಬರ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಕಾರ್ಯ ನಡೆಯಬೇಕಾಗಿದೆ. ಮೊಬೈಲ್‌ ಮತ್ತು ಕಂಪ್ಯೂಟರ್‌ನಲ್ಲಿ ಮುಳುಗಿ ಹೋಗಿರುವ ಯುವ ಸಮೂಹವನ್ನು ಮತ್ತೆ ಪುಸ್ತಕ ಓದಿನತ್ತ ಸೆಳೆಯುವ ಕೆಲಸ ಕೂಡ ಆಗಬೇಕಾಗಿದೆ ಎಂದರು.

ರಿಯಾಯ್ತಿ ದರದಲ್ಲಿ ಪುಸ್ತಕಗಳ ಮಾರಾಟ: ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಅ.29ರಿಂದ ನ.27ರ ವರೆಗೆ ರಾಷ್ಟ್ರೋತ್ಥಾನ ಪರಿಷತ್‌ ರಿಯಾಯ್ತಿ ದರದಲ್ಲಿ ಕನ್ನಡ ಹಲವು ಲೇಖಕರ ಪುಸ್ತಕಗಳನ್ನು ಮಾರಾಟ ಮಾಡಲಿದೆ. ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಅಡ್ವಾಣಿ ಸೇರಿದಂತೆ ಹಲವು ರಾಜಕಾರಣಿಗಳ ಆಂಗ್ಲ ಭಾಷೆಯ ಪುಸ್ತಕಗಳು ಸಾಹಿತ್ಯಾಸಕ್ತರಿಗೆ ದೊರೆಯಲಿವೆ. ಶೇ.10ರಿಂದ 50 ರಿಯಾಯ್ತಿ ದೊರದಲ್ಲಿ ಮಾರಾಟ ನಡೆಯಲಿದೆ. ಕುವೆಂಪು, ತರಾಸು, ಅನಕೃ, ತೇಜಸ್ವಿ, ಎಸ್‌. ಎಲ್‌.ಭೈರಪ್ಪ, ಯಶವಂತ ಚಿತ್ತಾಲ ಸೇರಿದಂತೆ ಹಲವು ಸಾಹಿತಿಗಳ ಪುಸ್ತಕಗಳು ಶೇ.10 ರಿಯಾಯ್ತಿ ದರದಲ್ಲಿ ಲಭ್ಯವಿವೆ. ಸಾವರ್ಕರ್‌, ಬಾಲಗಂಗಾಧರ ತಿಲಕ್‌, ಅಂಬೇಡ್ಕರ್‌ ಸೇರಿದಂತೆ ಇನ್ನೂ ಕೆಲವು ಯೋಗ, ಪುರಾಣ, ಆಧ್ಯಾತ್ಮಿಕ ಸೇರಿದಂತೆ ಇನ್ನೂ ಕೆಲ ಕೃತಿಗಳು ಸಾಹಿತ್ಯಾಸಕ್ತರಿಗೆ ದೊರೆಯಲಿವೆ.

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.