ಕಣವಿಗೆ ಕನ್ನಡ ರತ್ನ ಪ್ರಶಸ್ತಿ
Team Udayavani, Jul 22, 2018, 10:48 AM IST
ಬೆಂಗಳೂರು: ದುಬೈನಲ್ಲಿರುವ ಕನ್ನಡ ಸಂಘಟನೆ ಕೊಡಮಾಡುವ ಕನ್ನಡ ರತ್ನ ಪ್ರಶಸ್ತಿಗೆ ನಾಡಿನ ಹಿರಿಯ ಕವಿ ನಾಡೋಜ ಚನ್ನವೀರ ಕಣವಿ ಭಾಜನರಾಗಿದ್ದಾರೆ. “ಕನ್ನಡಿಗರು ದುಬೈ’ ಎಂಬ ಸಂಘಟನೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಡಿನ ಹಿರಿಯ ಚೇತನಗಳಿಗೆ ಪ್ರತಿ ವರ್ಷ ದುಬೈನಿಂದ ಆಗಮಿಸಿ ರಾಜ್ಯದಲ್ಲಿಯೇ ಪ್ರಶಸ್ತಿ ಕೊಡುವ ವಿಶಿಷ್ಟ ಸಂಪ್ರದಾಯ ಪಾಲಿಸಿಕೊಂಡು ಬಂದಿದ್ದು, ಈ ವರ್ಷ ಕವಿ ಚನ್ನವೀರ ಕಣವಿಯವರಿಗೆ ಪ್ರಶಸ್ತಿ ನೀಡಲು ಸಂಘಟನೆ ನಿರ್ಧರಿಸಿದೆ. ಕಣವಿ ಅವರಿಗೆ ಧಾರವಾಡದಲ್ಲಿಯೇ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಆ.3 ರಂದು ಶುಕ್ರವಾರ ಸಂಜೆ 6 ಗಂಟೆಗೆ ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮ ಪ್ರಯುಕ್ತ ಧಾರವಾಡ ಜಿಲ್ಲೆಯ ದೇವರ ಹುಬ್ಬಳ್ಳಿಯ ರಂಗ ಗಂಗಾ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ನಂತರ ರಂಗಗಂಗಾ ಕಲಾವಿದರಿಂದ ಸಹಿಪ್ರಾಶ 1990 ಎಂಬ ಹಾಸ್ಯ ನಾಟಕ ಪ್ರದರ್ಶನಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ
Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಸಮಸ್ಯೆ
Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು
Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು
Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್ ಫಾಲ್ಸ್ ಸೀಲಿಂಗ್
MUST WATCH
ಹೊಸ ಸೇರ್ಪಡೆ
Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.