ಮತ್ತೆ ಕಪ್ಪತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶ ಘೋಷಣೆ
Team Udayavani, Apr 12, 2017, 10:42 AM IST
ಬೆಂಗಳೂರು: ಸಂರಕ್ಷಿತ ಅರಣ್ಯ ವ್ಯಾಪ್ತಿಯಿಂದ ಹೊರಗಿಟ್ಟ ಕಾರಣಕ್ಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದ ಗದಗ ಜಿಲ್ಲೆಯ ಕಪ್ಪತಗುಡ್ಡ ಪ್ರದೇಶವನ್ನು ಮತ್ತೆ ಸಂರಕ್ಷಿತ ಅರಣ್ಯ ಪ್ರದೇಶ ಎಂದು ಘೋಷಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಇದರೊಂದಿಗೆ ಕಪ್ಪತಗುಡ್ಡ ಪ್ರದೇಶವನ್ನು ಮತ್ತೆ ಸಂರಕ್ಷಿತ ಅರಣ್ಯ ಪ್ರದೇಶವಾಗಿ ಘೋಷಿಸಬೇಕು ಎಂಬ ಆ ಭಾಗದ ಜನ, ಮಠಾಧೀಶರು ಮತ್ತು ಪರಿಸರ ಪ್ರೇಮಿಗಳ ಹೋರಾಟಕ್ಕೆ ಜಯ ಸಿಕ್ಕಿದಂತಾಗಿದೆ.
ಸರ್ಕಾರದ ಆದೇಶದಂತೆ ಗದಗ ಜಿಲ್ಲೆ ಗದಗ ತಾಲೂಕಿನ 401.811 ಹೆಕ್ಟೇರ್, ಮುಂಡರಗಿ ತಾಲೂಕಿನ 15453.673 ಹೆಕ್ಟೇರ್ ಮತ್ತು ಶಿರಹಟ್ಟಿಯ 2016.764 ಹೆಕ್ಟೇರ್ ಸೇರಿದಂತೆ ಒಟ್ಟು 17872.248 ಹೆಕ್ಟೇರ್ ಪ್ರದೇಶ ಕಪ್ಪತಗುಡ್ಡ ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ಆದರೆ, ಈಗಾಗಲೇ ಆ ಪ್ರದೇಶದಲ್ಲಿರುವ ಕಂದಾಯ ಭೂಮಿ, ಪಟ್ಟಾ ಭೂಮಿ, ಕಂದಾಯ ಗ್ರಾಮಗಳನ್ನು ಸಂರಕ್ಷಿತ ಅರಣ್ಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ.
ಕಪ್ಪತಗುಡ್ಡ ಪ್ರದೇಶ ಉತ್ತರ ಕರ್ನಾಟಕ ಭಾಗದ ವನ್ಯಜೀವಿಗಳ ಆವಾಸ ಸ್ಥಾನವಾಗಿದ್ದು, ಇಲ್ಲಿ ಅಪರೂಪದ ಔಷಧೀಯ ಸಂಸ್ಯಗಳು ಹೇರಳ ಪ್ರಮಾಣದ್ದಲ್ಲಿವೆ ಎಂಬ ಕಾರಣಕ್ಕೆ 2015ರ ಸೆ. 11ರಂದು ಇದನ್ನು ಸಂರಕ್ಷಿತ ಅರಣ್ಯ ಎಂದು ಘೋಷಿಸಲು ವನ್ಯಜೀವಿ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅಲ್ಲದೆ, ಮುಂಡರಗಿ ತಾಲೂಕಿನ 89.923 ಹೆಕ್ಟೇರ್ ಪ್ರದೇಶವನ್ನು ಔಷಧ ಸಸ್ಯಗಳಿಗಾಗಿಯೇ ಮೀಸಲಿಟ್ಟ ಸಂರಕ್ಷಿತ ಅರಣ್ಯ ಎಂದು ಪರಿಗಣಿಸಲೂ ನಿರ್ಧರಿಸಲಾಗಿತ್ತು. ನಂತರ 2017ರ ಫೆ. 2ರಂದು ನಡೆದ ವನ್ಯಜೀವಿ ಮಂಡಳಿ ಸಭೆಯಲ್ಲೂ ಕಪ್ಪತಗುಡ್ಡ ಪ್ರದೇಶವನ್ನು ಸಂರಕ್ಷಿತರ ಅರಣ್ಯ ಪ್ರದೇಶ ಎಂದು ಘೋಷಿಸಲು ತೀರ್ಮಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮಂಗಳವಾರ ಅರಣ್ಯ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
ವಿವಾದ ಸೃಷ್ಟಿಸಿದ ಸರ್ಕಾರದ ನಿರ್ಧಾರ: ವನ್ಯಜೀವಿ ಮಂಡಳಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಕಪ್ಪತಗುಡ್ಡ ಪ್ರದೇಶವನ್ನು 2015ರ ಡಿ. 19ರಂದು ಸಂರಕ್ಷಿತರ ಅರಣ್ಯ ಎಂದು ಘೋಷಿಸಲಾಗಿತ್ತು. ಆದರೆ, ನಂತರ ಸರ್ಕಾರ 2016ರ ಏ. 4ರಂದು ಮತ್ತೂಂದು ಆದೇಶ ಹೊರಡಿಸಿ ಸಂರಕ್ಷಿತ ಅರಣ್ಯ ಪ್ರದೇಶದಿಂದ ಅದನ್ನು ಕೈಬಿಟ್ಟಿತ್ತು. ಇದು ಆ ಭಾಗದ ಜನರು, ಪರಿಸರವಾದಿಗಳು, ಸ್ವಾಮೀಜಿಗಳ ಕೆಂಗಣ್ಣಿಗೆ ಗುರಿಯಾಗಿತ್ತಲ್ಲದೆ, ಸಾಕಷ್ಟು ಹೋರಾಟಗಳೂ ನಡೆದಿದ್ದವು. ಅಲ್ಲದೆ, ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದ್ದು, ಈ ಸಂದರ್ಭದಲ್ಲಿ ಕಪ್ಪತಗುಡ್ಡವನ್ನು ಸಂರಕ್ಷಿತರ ಅರಣ್ಯ ಪ್ರದೇಶವಾಗಿ ಘೋಷಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು.
ಅದರಂತೆ ಕಪ್ಪತಗುಡ್ಡ ಪ್ರದೇಶವನ್ನು ಸಂರಕ್ಷಿತ ಅರಣ್ಯ ಎಂದು ಘೋಷಿಸುವ ಕಡತ ಸಿದ್ಧಪಡಿಸಿ ವನ್ಯಜೀವಿ ಮಂಡಳಿ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿತ್ತು. ಮಂಗಳವಾರ ಅವರು ಕಡತಕ್ಕೆ ಸಹಿ ಮಾಡಿದ್ದು, ಅದರ ಬೆನ್ನಲ್ಲೇ ಅರಣ್ಯ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ ಡ್ರಿಂಕ್ ಬಿಡುಗಡೆ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.