“ಯಜಮಾನ್ರ ‘ ಗೆಲ್ಲಿಸಲು ಟೊಂಕ ಕಟ್ಟಿದ ಪತ್ನಿಯರು
Team Udayavani, May 4, 2018, 6:50 AM IST
ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಕಣದಲ್ಲಿರುವ ಸಿಎಂ ಸಿದ್ದರಾಮಯ್ಯ,ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿ ಘಟಾನುಘಟಿ ನಾಯಕರ ಪರ ಪತ್ನಿ-ಮಕ್ಕಳು, ನೆಂಟರಿಷ್ಟರು ಪ್ರಚಾರಕ್ಕಿಳಿದಿದ್ದಾರೆ.
ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪರ ಅನಿತಾ ಕುಮಾರಸ್ವಾಮಿ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಪ್ರಚಾರ ಮಾಡುತ್ತಿದ್ದರೆ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪರ ಪತ್ನಿ ಉಷಾ ಕನಕಪುರದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಸಚಿವ ಕೃಷ್ಣ ಬೈರೇಗೌಡರ ಪರ ಪತ್ನಿ ಮೀನಾಕ್ಷಿ, ಮಾಜಿ ಸಚಿವ ದಿನೇಶ್ ಗುಂಡೂರಾವ್ ಪರವಾಗಿ ಟಬು ಪ್ರಚಾರ ನಡೆಸುತ್ತಿದ್ದಾರೆ.
ಚನ್ನಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಯೋಗೇಶ್ವರ್ ಪತ್ನಿ ಶೀಲಾ, ಪುತ್ರಿ, ಚಿತ್ರ ನಟಿ ನಿಶಾ ತಂದೆ ಪರ ಬಿರುಸಿನ ಪ್ರಚಾರದಲ್ಲಿ
ತೊಡಗಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣದಲ್ಲಂತೂ ಅನಿತಾ ಕುಮಾರಸ್ವಾಮಿ ಅವರು ತಾವೇ ಅಭ್ಯರ್ಥಿ ಎನ್ನುವಷ್ಟರ ಮಟ್ಟಿಗೆ ಪ್ರಚಾರದಲ್ಲಿ ತೊಡಗಿದ್ದಾರೆ. ಪುತ್ರ ಹಾಗೂ ನಟ ನಿಖೀಲ್ ರಾಮನಗರದಲ್ಲಿ ಪ್ರಚಾರ ಕೈಗೊಂಡಿದ್ದಾರೆ.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ದಲ್ಲಿರುವುದರಿಂದ ಅವರ ಪತ್ನಿ ಉಷಾ ಕನಕಪುರದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಮೈಸೂರಿನಲ್ಲಿಯೂ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಸೊಸೆ ಸ್ಮಿತಾ ರಾಕೇಶ್ ಪ್ರಚಾರ ನಡೆಸುತ್ತಿದ್ದಾರೆ.
ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿ ಜೆಡಿಎಸ್ ಅಭ್ಯರ್ಥಿ ರಾಮಚಂದ್ರ ಪರ ಅವರ ಸೊಸೆ, ಚಿತ್ರನಟಿ ಅಮೂಲ್ಯ ಪ್ರಚಾರ
ನಡೆಸುತ್ತಿದ್ದಾರೆ. ಸರ್ವಜ್ಞನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಜೆ.ಜಾರ್ಜ್ ಪರ ಪುತ್ರ ರಾಣಾ ಜಾರ್ಜ್, ಗೋವಿಂದರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಪ್ರಚಾರದಲ್ಲಿ ತೊಡಗಿದ್ದಾರೆ.
ಕೆ.ಆರ್.ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸಾರಾ ಮಹೇಶ್ ಪರ ಪುತ್ರ ಜಯಂತ್, ಹುಣಸೂರಲ್ಲಿ ಜೆಡಿಎಸ್ ಅಭ್ಯರ್ಥಿ ಎಚ್. ವಿಶ್ವನಾಥ್ ಪರ ಪುತ್ರರಾದ ಅಮಿತ್,ಸಂತೋಷ್ ಮತ್ತು ಪೂರ್ವಜ್, ನಂಜನಗೂಡಲ್ಲಿ ಬಿಜೆಪಿ ಅಭ್ಯರ್ಥಿ ಹರ್ಷವರ್ಧನ ಪರ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್, ಚಾಮುಂಡೇಶ್ವರಿಯಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡ ಅವರ ಪರ ಪುತ್ರ ಹರೀಶ್ ಗೌಡ, ಹೊಳೆನರಸೀಪುರದಲ್ಲಿ ಜೆಡಿಎಸ್ ಅಭ್ಯರ್ಥಿ ರೇವಣ್ಣ ಪರ ಪುತ್ರ ಪ್ರಜ್ವಲ್, ಪತ್ನಿ ಭವಾನಿ ಪ್ರಚಾರ ನಡೆಸುತ್ತಿದ್ದಾರೆ.
ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಪತ್ನಿ ಮಂಜುಳಾ, ಸಹೋದರ ಜಿಪಂ ಸದಸ್ಯ ಗವಿಸಿದಟಛಿಪ್ಪ ಕರಡಿ ಹಾಗೂ ತಂದೆ ಸಂಸದ ಸಂಗಣ್ಣ ಕರಡಿ ಪ್ರಚಾರಕ್ಕಿಳಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ತಂದೆ ಬಸವರಾಜ ಹಿಟ್ನಾಳ, ಸಹೋದರ ಜಿಪಂ ಅಧ್ಯಕ್ಷ ರಾಜಶೇಖರ ಹಿಟ್ನಾಳ ಪ್ರಚಾರಕ್ಕಿಳಿದಿದ್ದಾರೆ.
ಕಲಬುರಗಿ ದಕ್ಷಿಣ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಸವರಾಜ ಡಿಗ್ಗಾವಿ ಪರ ಪತ್ನಿ ನಾಗರತ್ನಾ ಡಿಗ್ಗಾವಿ ಕಲಬುರಗಿ ಪಟ್ಟಣದ
ಕುಂಬಾರಗಲ್ಲಿಯಲ್ಲಿ ಮನೆಮನೆಗೆ ತೆರಳಿ ಮತಯಾಚಿಸಿದರು. ಚಿತ್ತಾಪುರ ಕಾಂಗ್ರೆಸ್ ಅಭ್ಯರ್ಥಿ ಸಚಿವ ಪ್ರಿಯಾಂಕ್ ಖರ್ಗೆ ಪರ ಅವರ ಪತ್ನಿ ಶೃತಿ ಖರ್ಗೆ ಕಮಕನೂರಿನಲ್ಲಿ ಮತಯಾಚಿಸಿದರು. ಕೊಪ್ಪಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಅವರ ಪತ್ನಿ ಮಂಜುಳಾ ಮತಯಾಚಿಸಿದರು. ಕನಕಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಿವರಾಜ ತಂಗಡಗಿ ಪರ ಪತ್ನಿ ವಿದ್ಯಾ ತಂಗಡಗಿ ಮತಯಾಚಿಸಿದರು.ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಕಾಂಗ್ರೆಸ್ ಅಭ್ಯರ್ಥಿ ಅಪ್ಪಾಜಿ ನಾಡಗೌಡರ ಪತ್ನಿ ಸುವರ್ಣಾ ರೋಡ್‌ಶೋನಲ್ಲಿ ಪಾಲ್ಗೊಂಡು ಪತಿ ಪರ ಪ್ರಚಾರ ನಡೆಸಿದರು.
ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಸಿ.ಟಿ.ರವಿ ಅವರ ಪರ ಅವರ ಪತ್ನಿ ಪಲ್ಲವಿ ರವಿ, ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಬಿ.ಎಲ್. ಶಂಕರ್ ಪರ ಅವರ ಪತ್ನಿ ಮಲ್ಲಿಕಾ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಪ್ರಚಾರ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.