ಡಿಸೆಂಬರ್‌ನಲ್ಲಿ ರಾಜ್ಯ ವಿಧಾನಸಭೆ ಚುನಾವಣೆ?
Team Udayavani, May 29, 2017, 9:44 AM IST
ಬೆಂಗಳೂರು: ರಾಜ್ಯ ವಿಧಾನಸಭೆಗೆ ಡಿಸೆಂಬರ್‌ನಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಈಗಿನಿಂದಲೇ ಸಜ್ಜಾಗುವಂತೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ. ಈ ವರ್ಷಾಂತ್ಯಕ್ಕೆ ನಡೆಯುವ ಗುಜರಾತ್ ಚುನಾವಣೆ ಜತೆಗೆ ಕರ್ನಾಟಕ ವಿಧಾನಸಭೆಗೂ ಚುನಾವಣೆ ನಡೆಯಬಹುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸಹ ಹೇಳಿದ್ದರಾದರೂ ಈಗ ಯಡಿಯೂರಪ್ಪ ಕೂಡ ಡಿಸೆಂಬರ್‌ನಲ್ಲೇ ಚುನಾವಣೆ ಎದುರಾಗಲಿದೆ ಎಂದು ಹೇಳಿ ಭಿನ್ನಮತ ಬದಿಗೊತ್ತಿ ರಣಕಹಳೆ ಮೊಳಗಿಸಿರುವುದು ಕುತೂಹಲ ಮೂಡಿಸಿದೆ.
ಜತೆಗೆ ಕಾಂಗ್ರೆಸ್‌ನಲ್ಲೂ ಇನ್ನೇನು ಚುನಾವಣೆ ಬಂದೇಬಿಟ್ಟಿತು ಎಂಬಂತೆ ರಾಜ್ಯ ಉಸ್ತುವಾರಿ ನಾಲ್ಕು ದಿನ ನಿರಂತರ ಸಭೆ ನಡೆಸಿದ್ದು, ಈಗ ಕೆಪಿಸಿಸಿ ಅಧ್ಯಕ್ಷರ ನೇಮಕ ಸಹಿತ ಬಿರುಸಿನ ಚಟುವಟಿಕೆಗಳು ನಡೆಯುತ್ತಿವೆ. ಅಲ್ಲದೆ ಕೇಂದ್ರ ನಾಯಕರು ರಾಜ್ಯದ ಎಲ್ಲ ಮುಖಂಡರನ್ನು ದಿಲ್ಲಿಗೆ ಕರೆಸಿ ಮಾತುಕತೆಯಲ್ಲಿ ತೊಡಗಿರುವುದು ಅವಧಿಪೂರ್ವ ಚುನಾವಣೆಯ ಮುನ್ಸೂಚನೆಯಂತಿದೆ. ಕರ್ನಾಟಕದಲ್ಲಿ ಅವಧಿಪೂರ್ವ ಚುನಾವಣೆ ನಡೆಯುವ ಸುಳಿವು ದೊರೆತಿರುವುದರಿಂದಲೇ ಆಡಳಿತಾರೂಢ ಕಾಂಗ್ರೆಸ್, ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ಸಮರೋಪಾದಿಯಲ್ಲಿ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಕೊಂಡಿವೆ. ಒಂದು ಸುತ್ತಿನ ಅಭ್ಯರ್ಥಿಗಳ ಆಯ್ಕೆ ಮಟ್ಟದ ಸಭೆಯನ್ನು ಮೂರೂ ಪಕ್ಷಗಳು ಮಾಡಿ ಮುಗಿಸಿವೆ. ಇವೆಲ್ಲವೂ ಚುನಾವಣೆ ಎದುರಾಗುವ ಲಕ್ಷಣಗಳೇ ಎಂದು ವಾಖ್ಯಾನಿಸಲಾಗುತ್ತಿದೆ.
ಬಿಎಸ್‌ವೈ ಏನೆಂದರು?: ರಾಜ್ಯ ಯುವ ಮೋರ್ಚಾ ಹಮ್ಮಿಕೊಂಡಿದ್ದ ಯುವ ಸಂಪರ್ಕ ಅಭಿಯಾನದ ಸಮಾರೋಪ ಮತ್ತು ಕಾರ್ಯಕಾರಿಣಿಯಲ್ಲಿ ಮಾತನಾಡಿದ ಯಡಿಯೂರಪ್ಪ, ‘ನನಗೆ ಸಿಕ್ಕಿರುವ ಮಾಹಿತಿ ಪ್ರಕಾರ ಡಿಸೆಂಬರ್‌ನಲ್ಲೇ ಚುನಾವಣೆ ನಡೆಯಲಿದ್ದು, ಟಿಕೆಟ್ ಆಕಾಂಕ್ಷೆ ಬದಿಗಿಟ್ಟು ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿ’ ಎಂದಿದ್ದಾರೆ. ರವಿವಾರ ಒಂದೇ ದಿನ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಯುವ ಮೋರ್ಚಾ ಮತ್ತು ರೈತ ಮೋರ್ಚಾ ಕಾರ್ಯಕಾರಿಣಿ ನಡೆಸಲಾಗಿದೆ. ಅಲ್ಲದೆ, ಇಡೀ ದಿನ ಯುವ ಸಂಪರ್ಕ ಅಭಿಯಾನ ಆಯೋಜಿಸಲಾಗಿತ್ತು. ಜತೆಗೆ ಪಕ್ಷದ ಮಾಧ್ಯಮ ಪ್ರಮುಖ್‌ಗಳಿಗೆ ಮಾಧ್ಯಮ ಕಾರ್ಯಾಗಾರವನ್ನೂ ಏರ್ಪಡಿಸಲಾಗಿತ್ತು. ಸಂಜೆ ನಡೆದ ಕೋರ್ ಕಮಿಟಿ ಸಭೆಯಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ರಾಜ್ಯ ಪ್ರವಾಸ ಕಾರ್ಯಕ್ರಮಕ್ಕೆ ಎಲ್ಲರೂ ಬೆಂಬಲಿಸುವಂತೆ ನಿರ್ಣಯ ಕೈಗೊಳ್ಳಲಾಗಿದೆ. ಮಾತ್ರವಲ್ಲದೆ ಜುಲೈ1 ಮತ್ತು 2ರಂದು ರಣನೀತಿ ಸಭೆ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.